India vs Pakistan: ಬುಲ್ಡೋಝರ್​ ಮೇಲೆ, ದುಬೈ ಬೀದಿಗಳಲ್ಲಿ… ಹೇಗಿತ್ತು ನೋಡಿ ಭಾರತೀಯರ ಸಂಭ್ರಮ

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಮುಂದಿನ ಪಂದ್ಯಗಳಲ್ಲಿ ಯುಎಸ್​ಎ ಅಥವಾ ಕೆನಡಾ ವಿರುದ್ಧ ಜಯಗಳಿಸಿದರೆ ಭಾರತ ತಂಡ ಸೂಪರ್-8 ಹಂತಕ್ಕೇರಲಿದೆ. ಅದೇ ಟೀಮ್ ಇಂಡಿಯಾ ವಿರುದ್ಧ ಸೋತಿರುವ ಪಾಕಿಸ್ತಾನ್ ತಂಡ ಮುಂದಿನ 2 ಪಂದ್ಯಗಳಲ್ಲೂ ಜಯಗಳಿಸಬೇಕು. ಅಲ್ಲದೆ ಯುಎಸ್​ಎ ತಂಡದ ಫಲಿತಾಂಶವನ್ನು ಎದುರು ನೋಡಬೇಕಿದೆ.

India vs Pakistan: ಬುಲ್ಡೋಝರ್​ ಮೇಲೆ, ದುಬೈ ಬೀದಿಗಳಲ್ಲಿ... ಹೇಗಿತ್ತು ನೋಡಿ ಭಾರತೀಯರ ಸಂಭ್ರಮ
India vs Pakistan
Follow us
|

Updated on: Jun 10, 2024 | 2:10 PM

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಷಭ್ ಪಂತ್ 42 ರನ್​ ಬಾರಿಸಿದ್ದು ಬಿಟ್ಟರೆ, ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು 19 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್ ಆಯಿತು.

120 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ರನ್ ಗಳಿಸಲು ಪರದಾಡಿದ ಪಾಕ್ ಬ್ಯಾಟರ್​ಗಳು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ರೋಚಕ ಗೆಲುವಿನ ಬೆನ್ನಲ್ಲೇ ಭಾರತೀಯ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು. ಪಂದ್ಯ ನಡೆದ ನ್ಯೂಯಾರ್ಕ್ ಸ್ಟೇಡಿಯಂನ ಹೊರಗೆ ಅಭಿಮಾನಿಗಳು ಬ್ಯಾಂಡ್ ಬಜಾಯಿಸುವ ಮೂಲಕ ಕುಣಿದು ಕುಪ್ಪಳಿಸಿದರು.

ಅತ್ತ ದೂರದ ದುಬೈನಲ್ಲಿ ಅಭಿಮಾನಿಗಳು ಬೀದಿಗಿಳಿದು ಸಂಭ್ರಮಿಸಿದರು. ಇನ್ನು ಇಂದೋರ್​ನಲ್ಲಿ ಅಭಿಮಾನಿಗಳು ಧ್ವಜಗಳೊಂದಿಗೆ ರಸ್ತೆಗಿಳಿದು ಹರ್ಷೋದ್ಘಾರದೊಂದಿಗೆ ಕುಣಿದು ಕುಪ್ಪಳಿಸಿದರು.

ಪುಣೆಯ ಅಭಿಮಾನಿಗಳು ಒಂದೆಜ್ಜೆ ಮುಂದೆ ಹೋಗಿ ಬುಲ್ಡೋಝರ್ ಮೇಲೆ ನಿಂತು ಜಯಕಾರ ಹಾಕುತ್ತಾ ಸಂಭ್ರಮಿಸಿದರು. ಈ ಭರ್ಜರಿ ಸಂಭ್ರಮಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಲ್ಲರಿಂದಲೂ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಭಾರತೀಯ ಅಭಿಮಾನಿಗಳ ಸಂಭ್ರಮ:

ಟೀಮ್ ಇಂಡಿಯಾ ಮುಂದಿನ ಪಂದ್ಯ ಯಾವಾಗ?

ಭಾರತ ತಂಡವು ಜೂನ್ 12 ರಂದು ಯುಎಸ್​ಎ ವಿರುದ್ಧ ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಮುಂದಿನ ಪಂದ್ಯದ ಮೂಲಕ ಭಾರತ ತಂಡ ಮುಂದಿನ ಹಂತಕ್ಕೇರುವುದನ್ನು ಎದುರು ನೋಡಬಹುದು.

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್