AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ‘ಭಾರತ ಸೋಲುತ್ತದೆ, ಕೊಹ್ಲಿ ರನ್ ಬಾರಿಸಲ್ಲ’; ಸುಳ್ಳಾಯ್ತು ಐಐಟಿ ಬಾಬಾ ನುಡಿದಿದ್ದ ಭವಿಷ್ಯ

Champions Trophy 2025: ಭಾರತ ಮತ್ತು ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಇದರ ಜೊತೆಗೆ ಐಐಟಿ ಬಾಬಾ ಹೇಳಿದ ಭವಿಷ್ಯ ಸುಳ್ಳಾಗಿದೆ. ಪಂದ್ಯಕ್ಕೂ ಮುನ್ನ ಐಐಟಿ ಬಾಬಾ, ಪಾಕ್ ವಿರುದ್ಧ ಭಾರತ ಸೋಲುತ್ತದೆ ಮತ್ತು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರನ್ ಬಾರಿಸುವುದಿಲ್ಲ ಎಂದು ಬಾಬಾ ಭವಿಷ್ಯ ನುಡಿದಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಬಾಬಾ ಹೇಳಿದ ಭವಿಷ್ಯ ಅಕ್ಷರಶಃ ಸುಳ್ಳಾಗಿದೆ.

IND vs PAK: ‘ಭಾರತ ಸೋಲುತ್ತದೆ, ಕೊಹ್ಲಿ ರನ್ ಬಾರಿಸಲ್ಲ’; ಸುಳ್ಳಾಯ್ತು ಐಐಟಿ ಬಾಬಾ ನುಡಿದಿದ್ದ ಭವಿಷ್ಯ
ಐಐಟಿ ಬಾಬಾ, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Mar 02, 2025 | 2:19 PM

Share

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಭಾರತೀಯ ಅಭಿಮಾನಿಗಳು ನಿರೀಕ್ಷಿಸಿದ ರೀತಿಯಲ್ಲೇ ಅಂತ್ಯಗೊಂಡಿದೆ. ಪಾಕಿಸ್ತಾನ ವಿರುದ್ಧದ ಈ ಪಂದ್ಯ ಟೀಂ ಇಂಡಿಯಾ ಅಭಿಮಾನಿಗಳಿಗೆ ಡಬಲ್ ಸಂತಸ ತಂದುಕೊಂಡಿದೆ. ಮೊದಲನೇಯದ್ದು ಈ ಪಂದ್ಯವನ್ನು ರೋಹಿತ್ ಪಡೆ ಏಕಪಕ್ಷೀಯವಾಗಿ ಗೆದ್ದುಕೊಂಡರೆ, ಎರಡನೇಯದ್ದು, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ತಮ್ಮ ಶತಕಗಳ ಬರವನ್ನು ನೀಗಿಸಿಕೊಂಡಿದ್ದಾರೆ. ಈವೆರಡರ ಜೊತೆಗೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ಕ ಇನ್ನೊಂದು ಸಂತಸದ ಸುದ್ದಿಯೆಂದರೆ ಕುಂಭ ಮೇಳದಲ್ಲಿ ಐಐಟಿ ಬಾಬಾ (ಅಭಯ್ ಸಿಂಗ್) ನುಡಿದಿದ್ದ ಭವಿಷ್ಯ ಸುಳ್ಳಾಗಿದೆ.

ಬಾಬಾ ನುಡಿದಿದ್ದ ಭವಿಷ್ಯವೇನು?

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಕದನ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಐಐಟಿ ಬಾಬಾ ಖಾಸಗಿ ಯುಟ್ಯೂಬ್​ ಚಾನೆಲ್​ಗೆ ನೀಡಿದ್ದ ಸಂದರ್ಶನದಲ್ಲಿ ಈ ಉಭಯ ತಂಡಗಳ ನಡುವಿನ ಕದನದ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಏನಾಗಿತ್ತು ಅಂದರೆ, ‘ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಲಿದೆ ಎಂದು ಅವರು ಹೇಳಿದ್ದರು. ಇದಲ್ಲದೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಫಲರಾಗುತ್ತಾರೆ ಎಂತಲೂ ಬಾಬಾ ಹೇಳಿದ್ದರು.

ಯಾವುದು ನಿಜವಾಗಲಿಲ್ಲ

ಆದರೆ ಬಾಬಾ ಹೇಳಿದ್ದ ಈ ಎರಡು ಭವಿಷ್ಯ ಇದೀಗ ಅಕ್ಷರಶಃ ಸುಳ್ಳಾಗಿದೆ. ಏಕೆಂದರೆ ಬಾಬಾ ಭವಿಷ್ಯಕ್ಕೆ ತದ್ವಿರುದ್ಧವಾಗಿ ಟೀಂ ಇಂಡಿಯಾ, ಪಾಕಿಸ್ತಾನವನ್ನು 6 ವಿಕೆಟ್​ಗಳಿಂದ ಮಣಿಸಿತು. ಇನ್ನೊಂದು ಪಾಕ್ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ಹೀಗಾಗಿ ಪಂದ್ಯಕ್ಕೂ ಮುನ್ನ ಭಾರತದ ವಿರುದ್ಧ ಪಂದ್ಯದ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದು ಟೀಂ ಇಂಡಿಯಾ ಅಭಿಮಾನಿಗಳ ಆತಂಕಕ್ಕೆ ಕಾರಣರಾಗಿದ್ದ ಈ ಐಐಟಿ ಬಾಬಾರನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಂದ್ಯದ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗಳಿಸಿತ್ತು. ಪಾಕಿಸ್ತಾನ ಪರ ಸೌದ್ ಶಕೀಲ್ ಅತಿ ಹೆಚ್ಚು ರನ್ ಗಳಿಸಿ 62 ರನ್‌ಗಳ ಇನ್ನಿಂಗ್ಸ್ ಆಡಿದರು. ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 42.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಕಿಂಗ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದರು. ಕೊಹ್ಲಿಯನ್ನು ಹೊರತುಪಡಿಸಿ, ಶ್ರೇಯಸ್ ಅಯ್ಯರ್ ಕೂಡ 56 ರನ್​ಗಳ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 pm, Sun, 23 February 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ