
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಭಾರತೀಯ ಅಭಿಮಾನಿಗಳು ನಿರೀಕ್ಷಿಸಿದ ರೀತಿಯಲ್ಲೇ ಅಂತ್ಯಗೊಂಡಿದೆ. ಪಾಕಿಸ್ತಾನ ವಿರುದ್ಧದ ಈ ಪಂದ್ಯ ಟೀಂ ಇಂಡಿಯಾ ಅಭಿಮಾನಿಗಳಿಗೆ ಡಬಲ್ ಸಂತಸ ತಂದುಕೊಂಡಿದೆ. ಮೊದಲನೇಯದ್ದು ಈ ಪಂದ್ಯವನ್ನು ರೋಹಿತ್ ಪಡೆ ಏಕಪಕ್ಷೀಯವಾಗಿ ಗೆದ್ದುಕೊಂಡರೆ, ಎರಡನೇಯದ್ದು, ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ ತಮ್ಮ ಶತಕಗಳ ಬರವನ್ನು ನೀಗಿಸಿಕೊಂಡಿದ್ದಾರೆ. ಈವೆರಡರ ಜೊತೆಗೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಸಿಕ್ಕ ಇನ್ನೊಂದು ಸಂತಸದ ಸುದ್ದಿಯೆಂದರೆ ಕುಂಭ ಮೇಳದಲ್ಲಿ ಐಐಟಿ ಬಾಬಾ (ಅಭಯ್ ಸಿಂಗ್) ನುಡಿದಿದ್ದ ಭವಿಷ್ಯ ಸುಳ್ಳಾಗಿದೆ.
ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಕದನ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಐಐಟಿ ಬಾಬಾ ಖಾಸಗಿ ಯುಟ್ಯೂಬ್ ಚಾನೆಲ್ಗೆ ನೀಡಿದ್ದ ಸಂದರ್ಶನದಲ್ಲಿ ಈ ಉಭಯ ತಂಡಗಳ ನಡುವಿನ ಕದನದ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಏನಾಗಿತ್ತು ಅಂದರೆ, ‘ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಲಿದೆ ಎಂದು ಅವರು ಹೇಳಿದ್ದರು. ಇದಲ್ಲದೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಫಲರಾಗುತ್ತಾರೆ ಎಂತಲೂ ಬಾಬಾ ಹೇಳಿದ್ದರು.
Agar IIT Baba ka tukka laag gya tou kuch log inhe apna bagwan bna lenge 😂 pic.twitter.com/sZPzRxsICe
— Mr. Neeraj (@NeerajS00964849) February 21, 2025
ಆದರೆ ಬಾಬಾ ಹೇಳಿದ್ದ ಈ ಎರಡು ಭವಿಷ್ಯ ಇದೀಗ ಅಕ್ಷರಶಃ ಸುಳ್ಳಾಗಿದೆ. ಏಕೆಂದರೆ ಬಾಬಾ ಭವಿಷ್ಯಕ್ಕೆ ತದ್ವಿರುದ್ಧವಾಗಿ ಟೀಂ ಇಂಡಿಯಾ, ಪಾಕಿಸ್ತಾನವನ್ನು 6 ವಿಕೆಟ್ಗಳಿಂದ ಮಣಿಸಿತು. ಇನ್ನೊಂದು ಪಾಕ್ ವಿರುದ್ಧ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ಹೀಗಾಗಿ ಪಂದ್ಯಕ್ಕೂ ಮುನ್ನ ಭಾರತದ ವಿರುದ್ಧ ಪಂದ್ಯದ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದು ಟೀಂ ಇಂಡಿಯಾ ಅಭಿಮಾನಿಗಳ ಆತಂಕಕ್ಕೆ ಕಾರಣರಾಗಿದ್ದ ಈ ಐಐಟಿ ಬಾಬಾರನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸರಿಯಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗಳಿಸಿತ್ತು. ಪಾಕಿಸ್ತಾನ ಪರ ಸೌದ್ ಶಕೀಲ್ ಅತಿ ಹೆಚ್ಚು ರನ್ ಗಳಿಸಿ 62 ರನ್‌ಗಳ ಇನ್ನಿಂಗ್ಸ್ ಆಡಿದರು. ಗುರಿಯನ್ನು ಬೆನ್ನಟ್ಟಿದ ಭಾರತ ಕೇವಲ 42.3 ಓವರ್‌ಗಳಲ್ಲಿ ಪಂದ್ಯವನ್ನು ಗೆದ್ದುಕೊಂಡಿತು. ಭಾರತದ ಪರ ಕಿಂಗ್ ಕೊಹ್ಲಿ 111 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದರು. ಕೊಹ್ಲಿಯನ್ನು ಹೊರತುಪಡಿಸಿ, ಶ್ರೇಯಸ್ ಅಯ್ಯರ್ ಕೂಡ 56 ರನ್‌ಗಳ ಕಾಣಿಕೆ ನೀಡಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:15 pm, Sun, 23 February 25