AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್

ICC Champions Trophy 2025: ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಂದಿನ ಮುಖಾಮುಖಿಗೆ ದಿನಾಂಕ ನಿಗದಿಯಾಗಿದೆ. ಆದರೆ ಈ ಬಾರಿ ಏಕದಿನ ಮಾದರಿಯಲ್ಲಿ ಉಭಯ ತಂಡಗಳು ಪರಸ್ಪರ ಕಣಕ್ಕಿಳಿಯಲಿದೆ. ಅಂದರೆ 2025 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಈ ವೇಳಾಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ.

India vs Pakistan: ಭಾರತ vs ಪಾಕಿಸ್ತಾನ್ ಮುಖಾಮುಖಿಗೆ ಡೇಟ್ ಫಿಕ್ಸ್
IND vs PAK
Follow us
ಝಾಹಿರ್ ಯೂಸುಫ್
| Updated By: Digi Tech Desk

Updated on:Jul 04, 2024 | 8:31 AM

ICC Champions Trophy 2025: ಚಾಂಪಿಯನ್ಸ್ ಟ್ರೋಫಿ 2025ರ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಐಸಿಸಿಗೆ ಸಲ್ಲಿಸಿದೆ. ಈ ವೇಳಾಪಟ್ಟಿಯಂತೆ ಫೆಬ್ರವರಿ 19 ರಿಂದ ಟೂರ್ನಿ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಇನ್ನು ಮಾರ್ಚ್ 1 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಅಲ್ಲದೆ ಈ ಪಂದ್ಯಕ್ಕೆ ಲಾಹೋರ್​ನ ಗಡ್ಡಾಫಿ ಸ್ಟೇಡಿಯಂ ಆತಿಥ್ಯವಹಿಸಲಿದೆ ಎಂದು ತಿಳಿಸಲಾಗಿದೆ. ಆದಾಗ್ಯೂ, ಈ ವೇಳಾಪಟ್ಟಿಯ ಅಂತಿಮಗೊಳಿಸುವಿಕೆಯು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅನುಮೋದನೆಯ ಮೇಲೆ ಅವಲಂಬಿತವಾಗಿದೆ.

ಏಕೆಂದರೆ ಮುಂಬರುವ ಚಾಂಪಿಯನ್ಸ್​ ಟ್ರೋಫಿಯ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೊಂದಿದೆ. ಅದರಂತೆ ಟೂರ್ನಿಯು ಪಾಕಿಸ್ತಾನದಲ್ಲಿ ಜರುಗಲಿದೆ. ಆದರೆ ಪಾಕ್​ನಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆದರೆ ಭಾರತ ತಂಡ ಭಾಗವಹಿಸುವ ಸಾಧ್ಯತೆ ಕಡಿಮೆ. ಹೀಗಾಗಿ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದೆಯಾ ಎಂಬುದೇ ಈಗ ಪ್ರಶ್ನೆ.

ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆಗಳನ್ನು ಶುರು ಮಾಡಿದ್ದು, ಅದರ ಮೊದಲ ಹೆಜ್ಜೆ ಎಂಬಂತೆ ಇದೀಗ ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿದೆ. ಈ ವೇಳಾಪಟ್ಟಿಯಂತೆ ಮಾರ್ಚ್ 1 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳೂ ಲಾಹೋರ್​ನಲ್ಲಿ ಮುಖಾಮುಖಿಯಾಗಲಿದೆ.

ಲಾಹೋರ್ ಮೈದಾನ ಯಾಕೆ?

ಈ ಕರಡು ವೇಳಾಪಟ್ಟಿಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮೂರು ಸ್ಟೇಡಿಯಂಗಳನ್ನು ಉಲ್ಲೇಖಿಸಿದೆ. ಅದರಂತೆ ಲಾಹೋರ್, ಕರಾಚಿ ಹಾಗೂ ರಾವಲ್ಪಿಂಡಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗಳು ನಡೆಯಲಿದೆ.

ವಿಶೇಷ ಎಂದರೆ ಭಾರತ ತಂಡದ ಎಲ್ಲಾ ಪಂದ್ಯಗಳು ಲಾಹೋರ್​ನ ಗಡ್ಡಾಫಿ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ ಎಂದು ವರದಿಯಾಗಿದೆ. ಅಂದರೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ಪಂದ್ಯಗಳನ್ನು ಏಕೈಕ ಸ್ಟೇಡಿಯಂನಲ್ಲಿ ನಡೆಸಲು ನಿರ್ಧರಿಸಿದ್ದು, ಈ ಮೂಲಕ ಟೀಮ್ ಇಂಡಿಯಾ ಆಟಗಾರರಿಗೆ ಎಲ್ಲಾ ರೀತಿಯ ಸುರಕ್ಷತೆಯನ್ನು ಒದಗಿಸಲು ಬದ್ಧ ಎಂದು ಐಸಿಸಿಗೆ ತಿಳಿಸಿದೆ.

ಲಾಹೋರ್​ ನಗರವು ಭಾರತದ ಗಡಿಗೆ ಸಮೀಪದಲ್ಲಿದೆ. ಇದರಿಂದ ಭಾರತೀಯ ಅಭಿಮಾನಿಗಳ ಪ್ರಯಾಣಕ್ಕೂ ಅನುಕೂಲವಾಗಲಿದೆ. ಈ ಮೂಲಕ ಟೀಮ್ ಇಂಡಿಯಾ ಅಭಿಮಾನಿಗಳ ಪಾಕ್ ಪ್ರಯಾಣಕ್ಕೂ ಅನುಕೂಲ ಕಲ್ಪಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಮುಂದಾಗಿದೆ.

ಆದರೆ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಬಿಸಿಸಿಐ ಒಪ್ಪಿಗೆ ನೀಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಈ ಹಿಂದೆ ಪಾಕ್​ನಲ್ಲಿ ನಡೆದ ಏಷ್ಯಾಕಪ್​ನಲ್ಲಿ ಭಾಗವಹಿಸಲು ಭಾರತ ಹಿಂದೇಟು ಹಾಕಿತ್ತು. ಹೀಗಾಗಿ ಟೀಮ್ ಇಂಡಿಯಾದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

ಅದರಂತೆ ಈ ಬಾರಿ ಹೈಬ್ರೀಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸುವಂತೆ ಬಿಸಿಸಿಐ ಐಸಿಸಿಗೆ ಮನವಿ ಮಾಡಬಹುದು. ಅಂದರೆ ಟೂರ್ನಿ ಪಾಕಿಸ್ತಾನದಲ್ಲೇ ನಡೆದರೂ, ಭಾರತ ತಂಡದ ಪಂದ್ಯಗಳು ಶ್ರೀಲಂಕಾ ಅಥವಾ ಯುಎಇ ನಲ್ಲಿ ಆಯೋಜಿಸಲು ಮನವಿ ಸಲ್ಲಿಸುವ ಸಾಧ್ಯತೆಗಳಿವೆ. ಅದರಂತೆ ಟೀಮ್ ಇಂಡಿಯಾ ತಟಸ್ಥ ಸ್ಥಳದಲ್ಲಿ ಕಣಕ್ಕಿಳಿಯುವ ಮೂಲಕ ಟೂರ್ನಿಯಲ್ಲಿ ಭಾಗವಹಿಸಬಹುದು.

ಸದ್ಯ ಕರಡು ವೇಳಾಪಟ್ಟಿ ಐಸಿಸಿ ಅಂಗಳದಲ್ಲಿದ್ದು, ಈ ವೇಳಾಪಟ್ಟಿಯ ಅನುಮೋದನೆಗಾಗಿ ಬಿಸಿಸಿಐಗೆ ಕಳುಹಿಸಿ ಕೊಡಲಿದೆ. ಇದಾದ ಬಳಿಕ ಬಿಸಿಸಿಐ ತನ್ನ ನಿರ್ಧಾರ ಪ್ರಕಟಿಸಲಿದೆ.

Published On - 7:59 am, Thu, 4 July 24

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ