AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

India vs Pakistan Clash: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ನಿರೀಕ್ಷಿತ ಹಣಾಹಣಿ ಫೆಬ್ರವರಿ 23ರಂದು ದುಬೈನಲ್ಲಿ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಗೆದ್ದಿದ್ದರೆ, ಪಾಕಿಸ್ತಾನ ತನ್ನ ಆರಂಭಿಕ ಪಂದ್ಯದಲ್ಲಿ ಸೋತಿದೆ. ಈ ಪಂದ್ಯ ಎರಡೂ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಪಂದ್ಯದ ದಿನಾಂಕ, ಸಮಯ, ಸ್ಥಳ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on: Feb 22, 2025 | 7:10 PM

Share

2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿದೆ. ಕಳೆದ ಹಲವು ದಿನಗಳಿಂದ ಕ್ರಿಕೆಟ್ ಜಗತ್ತು ಈ ಪಂದ್ಯಕ್ಕಾಗಿ ಕಾಯುತ್ತಿದೆ. ಈಗ ಈ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಎರಡೂ ತಂಡಗಳಿಗೆ ಇದು ಈ ಟೂರ್ನಿಯ ಎರಡನೇ ಪಂದ್ಯವಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 6 ವಿಕೆಟ್‌ಗಳಿಂದ ಸೋಲಿಸಿರುವ ಭಾರತ ತಂಡ ಈ ಟೂರ್ನಿಯಲ್ಲಿ ಗೆಲುವಿನ ಆರಂಭವನ್ನು ಪಡೆದುಕೊಂಡಿತು. ಆದರೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ತಂಡ, ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೊತ್ತಿತ್ತು. ಹೀಗಾಗಿ ನಾಳಿನ ಪಂದ್ಯ ಪಾಕ್ ಪಾಲಿಗೆ ನಿರ್ಣಾಯಕವಾಗಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಫೆಬ್ರವರಿ 23 ರ ಭಾನುವಾರದಂದು ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ. ಹಾಗಾಗಿ ಟಾಸ್ 2 ಗಂಟೆಗೆ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಾನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್ಸ್ 18 ನೆಟ್‌ವರ್ಕ್‌ಗಳ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಮೊಬೈಲ್‌ನಲ್ಲಿ ಎಲ್ಲಿ ನೋಡಬಹುದು?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಜಿಯೋ-ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮೊಬೈಲ್‌ನಲ್ಲಿ ಲಭ್ಯವಿರುತ್ತದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜ ಮತ್ತು ವರುಣ್ ಚಕ್ರವರ್ತಿ.

ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ ಮತ್ತು ವಿಕೆಟ್ ಕೀಪರ್), ಬಾಬರ್ ಆಝಂ, ಕಮ್ರಾನ್ ಗುಲಾಮ್, ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಉಸ್ಮಾನ್ ಖಾನ್ ಮತ್ತು ಸೌದ್ ಶಕೀಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ