
2026 ರ ಟಿ20 ವಿಶ್ವಕಪ್‌ನ (T20 World Cup) ಬಹುನಿರೀಕ್ಷತ ಪಂದ್ಯಕ್ಕಾಗಿ ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ಈ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳು ಈ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿವೆ. ಭಾರತ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನದಲ್ಲಿದೆ. ಇದೀಗ ತಮ್ಮ ಮೂರನೇ ಪಂದ್ಯದಲ್ಲಿ ಎರಡೂ ತಂಡಗಳು ಎದುರುಬದುರಾಗುತ್ತಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸೂಪರ್ 8 ಸುತ್ತಿನ ಟಿಕೆಟ್ ಅಧಿಕೃತವಾಗಿ ಸಿಗಲಿದೆ. ಹೀಗಾಗಿ ಉಭಯ ತಂಡಗಳು ತಮ್ಮ ಅಜೇಯ ಓಟವನ್ನು ಮುಂದುವರೆಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವ ಇರಾದೆಯಲ್ಲಿವೆ.
ಈ ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೆ ತಲಾ ಎರಡು ಪಂದಗಳನ್ನು ಆಡಿವೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು 29 ರನ್ಗಳಿಂದ ಮಣಿಸಿದರೆ, ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಬರೋಬ್ಬರಿ 93 ರನ್ಗಳಿಂದ ಮಣಿಸಿದೆ. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4 ಅಂಕ ಹಾಗೂ +3.050 ನೆಟ ರನ್ ರೇಟ್ನೊಂದಿಗೆ ಅಗ್ರಸ್ಥಾನದಲ್ಲಿದೆ.
ಇತ್ತ ಪಾಕಿಸ್ತಾನ ಕೂಡ ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್ನಲ್ಲಿ ಸೋಲಿಸಿ ರೋಚಕ ಗೆಲುವು ದಾಖಲಿಸಿತು. ಆ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಯುಎಸ್ಎ ತಂಡವನ್ನು 32 ರನ್ಗಳಿಂದ ಸೋಲಿಸಿತು. ಈ ಎರಡು ಗೆಲುವುಗಳಿಂದ 4 ಅಂಕ ಕಲೆಹಾಕಿರುವ ಪಾಕ್ ತಂಡ +0.932 ನೆಟ್ ರನ್ ರೇಟ್ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 15 ರಂದು ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಸಂಜೆ 7 ಗಂಟೆಗೆ ಆರಂಭವಾಗಲಿದೆ.
ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.
T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಮ್, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ನಫಯ್, ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ಶಾದಾಬ್ ಖಾನ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ