IND vs PAK, ICC World Cup: ಪಾಕ್ ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಸಖತ್ ಟ್ರೋಲ್ ಆದ ಬಾಬರ್ ಪಡೆ

|

Updated on: Oct 14, 2023 | 7:10 PM

India vs Pakistan Memes: ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಆರಂಭದಲ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದ್ದ ಬಾಬರ್ ಪಡೆ ಊಹಿಸಲಾದ ರೀತಿಯಲ್ಲಿ ಕುಸಿತ ಕಂಡಿತು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಬ್ಯಾಟಿಂಗ್​ನಲ್ಲಿ ನೀಡಿದ ಕಳಪೆ ಪ್ರದರ್ಶನಕ್ಕೆ ಸಖತ್ ಟ್ರೋಲ್ ಆಗುತ್ತಿದೆ.

IND vs PAK, ICC World Cup: ಪಾಕ್ ಬ್ಯಾಟರ್​ಗಳ ಪೆವಿಲಿಯನ್ ಪರೇಡ್: ಸಖತ್ ಟ್ರೋಲ್ ಆದ ಬಾಬರ್ ಪಡೆ
IND vs PAK Memes
Follow us on

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ರೋಚಕತೆ ಸೃಷ್ಟಿಸಿದೆ. ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಯಿತು. ಆರಂಭದಲ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದ್ದ ಬಾಬರ್ ಪಡೆ ಊಹಿಸಲಾದ ರೀತಿಯಲ್ಲಿ ಕುಸಿತ ಕಂಡಿತು. ಭಾರತೀಯ ಬೌಲರ್​ಗಳು ಪಾಕಿಸ್ತಾನ ಬ್ಯಾಟರ್​ಗಳಿಗೆ ಎಲ್ಲಿಲ್ಲದಂತೆ ಕಾಡಿದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಬ್ಯಾಟಿಂಗ್​ನಲ್ಲಿ ನೀಡಿದ ಕಳಪೆ ಪ್ರದರ್ಶನಕ್ಕೆ ಸಖತ್ ಟ್ರೋಲ್ ಆಗುತ್ತಿದೆ.

ಎಕ್ಸ್ ಖಾತೆಯಲ್ಲಿ ಕ್ರಿಕೆಟ್ ಫ್ಯಾನ್ಸ್ ಪಾಕ್ ತಂಡದ ಪ್ರದರ್ಶನದ ಬಗ್ಗೆ ಟ್ರೋಲ್ ಮಾಡಿರುವುದು:

ಪ್ರಸಿದ್ಧ ಕಾರು ಕಂಪನಿ ಎಮ್​ಜಿ ಪಾಕಿಸ್ತಾನ ತಂಡವನ್ನು ಟ್ರೋಲ್ ಮಾಡಿದ್ದು, ತಮ್ಮ ಕಾರಿನ ಫೋಟೋ ಹಂಚಿಕೊಂಡು, ”ಇದು ಪಾಕಿಸ್ತಾನ ಬ್ಯಾಟರ್​ಗಳಿಗೆ ಪೆವಿಲಿಯನ್​ಗೆ ತೆರಳಲು ಸಹಾಯ ಮಾಡಬಹುದು,” ಎಂದು ಬರೆದುಕೊಂಡಿದೆ.

ಇದನ್ನೂ ಓದಿ
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತೇ?
ಭಾರತದ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಪಾಕ್: ರೋಹಿತ್ ಪಡೆಗೆ 192 ರನ್​​ಗಳ
IND vs PAK ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು
ಬಾಯ್, ಬಾಯ್: ವಿಕೆಟ್ ಕಿತ್ತಾಗ ಹಾರ್ದಿಕ್ ಕೋಪದಲ್ಲಿ ಆಡಿದ ಮಾತು ವೈರಲ್

 

 

 

ಟಾಸ್ ಸೋತು ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ಪರ ಅಬ್ದುಲ್ ಶಫೀಖ್ ಹಾಗೂ ಇಮಾನ್ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 8 ಓವರ್ ಆಗುವ ಹೊತ್ತಿಗೆ 41 ರನ್ ಗಳಿಸಿದ್ದಾಗ ಸಿರಾಜ್ ಬೌಲಿಂಗ್​ನಲ್ಲಿ ಶಫೀಖ್ (20) ಎಲ್​ಬಿ ಬಲೆಗೆ ಸಿಲುಕಿದರು. ನಂತರ ಇಮಾಮ್ (36) ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ ಕೀಪರ್ ರಾಹುಲ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆದರೆ, ಈ ಸಂದರ್ಭ ಜೊತೆಯಾದ ಪಾಕ್ ಅನುಭವಿ ಬ್ಯಾಟರ್​ಗಳಾದ ನಾಯಕ ಬಾಬರ್ ಅಝಂ ಹಾಗೂ ಮೊಹಮ್ಮದ್ ರಿಝ್ವಾನ್ ಎಚ್ಚರಿಕೆಯ ಆಟ ಪ್ರದರ್ಶಿಸಿದರು.

ಭಾರತ-ಪಾಕಿಸ್ತಾನ ಪಂದ್ಯ ಆರಂಭಕ್ಕೂ ಮುನ್ನ ಅಪರೂಪದ ಘಟನೆ: ರಾಷ್ಟ್ರಗೀತೆ ಹಾಡುವಾಗ ಏನಾಯಿತು ನೋಡಿ

ಭಾರತೀಯ ಬೌಲರ್​ಗಳ ಮರ್ಮವನ್ನು ಅರಿತ ಬಾಬರ್-ರಿಝ್ವಾನ್ ಜೋಡಿ 82 ರನ್​ಗಳ ಕಾಣಿಕೆ ನೀಡಿದರು. ಫಾರ್ಮ್ ವೈಫಲ್ಯದಿಂದ ಬಳಲುತ್ತಿದ್ದ ಬಾಬರ್ ಅರ್ಧಶತಕ ಸಿಡಿಸಿದರು. ಆದರೆ, 50 ರನ್ ಗಳಿಸಿದ ಕೂಡಲೇ ಬಾಬರ್ ಅವರು ಸಿರಾಜ್ ಬೌಲಿಂಗ್​ನಲ್ಲಿ ಬೌಲ್ಡ್ ಆದರು. ಇದರ ಬೆನ್ನಲ್ಲೆ ಕುಲ್ದೀಪ್, ಸೌದ್ ಶಕೀಲ್ (6) ಅವರನ್ನು ಎಲ್​ಬಿಡಬ್ಲ್ಯೂ ಮಾಡಿದರೆ, ಇಫ್ತಿಖರ್ ಅಹ್ಮದ್​ರನ್ನು (4) ಬೌಲ್ಡ್ ಮಾಡಿದರು. ಅತ್ತ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ರಿಝ್ವಾನ್ 49 ರನ್ ಗಳಿಸಿದ್ದಾಗ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಶಬಾದ್ ಖಾನ್ ಕೂಡ 2 ರನ್​ಗೆ ಔಟಾದರು.

155 ರನ್​ಗೆ 3ನೇ ವಿಕೆಟ್ ಕಳೆದುಕೊಂಡ ಪಾಕಿಸ್ತಾನ 171 ರನ್ ಆಗುವ ಹೊತ್ತಿಗೆ 7 ವಿಕೆಟ್ ಪತನಗೊಂಡಿತು. ದಿಢೀರ್ ಕುಸಿತದಿಂದ ಬಾಬರ್ ಪಡೆ ಮೇಲೇಳಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಜಸ್​ಪ್ರಿತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ 2 ವಿಕೆಟ್ ಕಿತ್ತರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sat, 14 October 23