ನ್ಯೂಯಾರ್ಕ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಂದು (ಜೂ.9) ಜರುಗಲಿರುವ ಈ ಪಂದ್ಯದಿಂದ ಪಾಕಿಸ್ತಾನ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ಆಝಂ ಖಾನ್ ಹೊರಗುಳಿಯುವುದು ಬಹುತೇಕ ಖಚಿತ.
ಏಕೆಂದರೆ ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಆಝಂ ಖಾನ್ ಶೂನ್ಯಕ್ಕೆ ಔಟಾಗಿದ್ದರು. ಇದಾದ ಬಳಿಕ ಆಝಂ ಆಯ್ಕೆ ಬಗ್ಗೆ ಅಪಸ್ವರಗಳು ಕೇಳಿ ಬಂದಿದ್ದವು.
ಅಲ್ಲದೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪಾಕ್ ತಂಡದ ಅಭ್ಯಾಸದ ವೇಳೆಯೂ ಆಝಂ ಖಾನ್ ಕಾಣಿಸಿಕೊಂಡಿಲ್ಲ. ಅಂದರೆ ಭಾರತದ ವಿರುದ್ಧದ ಪಂದ್ಯಕ್ಕೆ ಆಯ್ಕೆ ಮಾಡಲಾಗುವ ಪ್ಲೇಯಿಂಗ್ ಇಲೆವೆನ್ನಿಂದ ಯುವ ದಾಂಡಿಗನನ್ನು ಕೈ ಬಿಡುವುದು ಖಚಿತ. ಹೀಗಾಗಿಯೇ ಬ್ಯಾಟಿಂಗ್ ಅಭ್ಯಾಸ ನಡೆಸಿಲ್ಲ ಎಂದು ವರದಿಯಾಗಿದೆ.
ಆಝಂ ಖಾನ್ ಹೊರಗುಳಿದರೆ ಇಮಾದ್ ವಾಸಿಂ ಕಣಕ್ಕಿಳಿಯಲಿದ್ದಾರೆ. ಏಕೆಂದರೆ ಕಳೆದ ಪಂದ್ಯದಲ್ಲಿ ಗಾಯದ ಕಾರಣ ಅವರು ಆಡಿರಲಿಲ್ಲ. ಹೀಗಾಗಿ ಆಝಂ ಖಾನ್ ಸ್ಥಾನದಲ್ಲಿ ಆಲ್ರೌಂಡರ್ ಇಮಾದ್ ವಾಸಿಂ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ಪಾಕಿಸ್ತಾನ್ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಇದನ್ನೂ ಓದಿ: India vs Pakistan Playing XI: ಪಾಕ್ ವಿರುದ್ಧ ಭಾರತದ ಪ್ಲೇಯಿಂಗ್ XI ಹೀಗಿರಲಿದೆ
ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಉಸ್ಮಾನ್ ಖಾನ್, ಫಖರ್ ಝಮಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹ್ಯಾರಿಸ್ ರೌಫ್.
ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್
ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.