ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ (Team India) ಇದೀಗ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಬುಧವಾರ ಅಫ್ಘಾನ್ ವಿರುದ್ಧ ಪಂದ್ಯ ಮುಗಿದ ಬಳಿಕ ವಿಶ್ರಾಂತಿ ಕೂಡ ಪಡೆದುಕೊಳ್ಳದೆ ಇಂದು ಬೆಳ್ಳಂ ಬೆಳಗ್ಗೆ ರೋಹಿತ್ ಶರ್ಮಾ ಒಡೆ ಅಹ್ಮದಾಬಾದ್ಗೆ ಹೊರಟಿದೆ. ಭಾರತ ತಂಡ ವಿಶ್ವಕಪ್ನಲ್ಲಿ ತನ್ನ ನಾಲ್ಕನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನ ವಿರುದ್ಧ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಲಿದೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್ ಸೇರಿದಂತೆ ಭಾರತದ ಆಟಗಾರರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್ ಓಪನರ್ ಶುಭ್ಮನ್ ಗಿಲ್ ಕಳೆದ ರಾತ್ರಿ (ಅಕ್ಟೋಬರ್ 11) ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. ತಂಡದ ಉಳಿದ ಆಟಗಾರರು ಇಂದು ಅಹಮದಾಬಾದ್‌ನಲ್ಲಿ ಸೇರಿಕೊಳ್ಳಲಿದ್ದಾರೆ.
So the @ShubmanGill reached Ahemdabad ,hope he will be fine soon and deliver good news asap #WorldCup2023 pic.twitter.com/f7NC1JR1KU
— vipul kashyap (@kashyapvipul) October 11, 2023
ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್ ಪಂದ್ಯಕ್ಕೆ ಶುಭ್ಮನ್ ಗಿಲ್ ಫಿಟ್ ಆಗುವ ಸಾಧ್ಯತೆ ಕಡಿಮೆ. ಅವರ ಅನುಪಸ್ಥಿತಿಯಲ್ಲಿ, ಇಶಾನ್ ಕಿಶನ್ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಮುಂದುವರಿಯಲಿದ್ದಾರೆ. ಮೊದಲ ಪಂದ್ಯದಲ್ಲಿ ಸೊನ್ನೆ ಸುತ್ತಿ ವೈಫಲ್ಯ ಅನುಭವಿಸಿದ್ದ ಕಿಶನ್ ಇದೀಗ ಫಾರ್ಮ್ಗೆ ಮರಳಿದ್ದಾರೆ. ಅಫ್ಘಾನ್ ವಿರುದ್ಧದ ಪಂದ್ಯದಲ್ಲಿ ಇವರು 47 ಎಸೆತಗಳಲ್ಲಿ 47 ರನ್ ಗಳಿಸಿದ್ದರು.
ICC Rankings: ಭರ್ಜರಿ ಮುಂಬಡ್ತಿ ಪಡೆದ ಕೊಹ್ಲಿ- ರಾಹುಲ್; ನಂ.1 ಪಟ್ಟ ಕಳೆದುಕೊಂಡ ಸಿರಾಜ್..!
ಇತ್ತ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ ಬುಧವಾರವೇ ಅಹಮದಾಬಾದ್‌ಗೆ ಬಂದಿಳಿದಿತ್ತು. ಇಂದಿನಿಂದ ಪಾಕ್ ಆಟಗಾರರು ಅಭ್ಯಾಸ ಶುರುಮಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನವು ಏಕದಿನ ವಿಶ್ವಕಪ್ನಲ್ಲಿ ಏಳು ಬಾರಿ ಮುಖಾಮುಖಿಯಾಗಿದೆ. ಎಲ್ಲಾ ಏಳು ಪಂದ್ಯಗಳಲ್ಲಿ ಭಾರತವು ಗೆದ್ದ ಸಾಧನೆ ಮಾಡಿದೆ. ಹೀಗಾಗಿ ಈ ಬಾರಿಯ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ.
ಅತಿ ದೊಡ್ಡ ಕ್ರೀಡಾಂಗಣ ಎಂಬ ಹೆಸರು ಪಡೆದುಕೊಂಡಿರುವ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್‌ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಲ್ಲಿ ಬ್ಯಾಟರ್‌ಗಳಿಗೆ ಆರಂಭಿಕ ಓವರ್‌ಗಳು ಸವಾಲಾಗಬಹುದು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ