AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಭಾನುವಾರ ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿ?: ಭಾರತದ ಸೂಪರ್ 4 ವೇಳಾಪಟ್ಟಿ ಇಲ್ಲಿದೆ

India vs Pakistan: ಈಗಾಗಲೇ ಭಾರತ, ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಇಂದು ಗ್ರೂಪ್ ಹಂತದ ಕೊನೆಯ ಪಂದ್ಯ ನಡೆಯಲಿದ್ದು ಪಾಕಿಸ್ತಾನ ಹಾಗೂ ಹಾಂಗ್ ಕಾಂಗ್ (Pakistan vs Hong Kong) ತಂಡ ಮುಖಾಮುಖಿ ಆಗಲಿದೆ.

Asia Cup 2022: ಭಾನುವಾರ ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿ?: ಭಾರತದ ಸೂಪರ್ 4 ವೇಳಾಪಟ್ಟಿ ಇಲ್ಲಿದೆ
Asia cup 2022 Super 4
TV9 Web
| Edited By: |

Updated on:Sep 02, 2022 | 10:49 AM

Share

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಈಗಾಗಲೇ ಭಾರತ, ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಇಂದು ಗ್ರೂಪ್ ಹಂತದ ಕೊನೆಯ ಪಂದ್ಯ ನಡೆಯಲಿದ್ದು ಪಾಕಿಸ್ತಾನ ಹಾಗೂ ಹಾಂಗ್ ಕಾಂಗ್ (Pakistan vs Hong Kong) ತಂಡ ಮುಖಾಮುಖಿ ಆಗಲಿದೆ. ಇದರಲ್ಲಿ ಗೆದ್ದ ತಂಡ ನಾಲ್ಕನೇ ಟೀಮ್ ಆಗಿ ಸೂಪರ್ 4 ಗೆ ಅರ್ಹತೆ ಪಡೆಯಲಿದೆ. ಎಲ್ಲಾದರು ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ಭಾರತ ವಿರುದ್ಧ ಪುನಃ ಸೆಣೆಸಾಟ ನಡೆಸಲಿದೆ. ಸೂಪರ್ 4 ಹಂತದ ವೇಳಾಪಟ್ಟಿಯಲ್ಲಿ ಟೀಮ್ ಇಂಡಿಯಾ (Team India) ಒಟ್ಟು ಮೂರು ಪಂದ್ಯಗಳನ್ನು ಆಡಲಿದೆ. ರೋಹಿತ್ ಪಡೆಯ ಎದುರಾಳಿ ಯಾರೆಲ್ಲ?, ಯಾವಾಗ ಪಂದ್ಯ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಸೂಪರ್ 4 ಹಂತದ ಪಂದ್ಯ ಸೆ. 3 ಶನಿವಾರದಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಎದುರಾಳಿ ಯಾರು ಎಂಬುದು ಇಂದು ನಿರ್ಧಾರ ಆಗಲಿದೆ. ಪಾಕಿಸ್ತಾನ–ಹಾಂಗ್ ಕಾಂಗ್ ನಡುವಣ ಮ್ಯಾಚ್​ನಲ್ಲಿ ಗೆದ್ದ ತಂಡ ಸೆ. 4 ರಂದು ಭಾರತ ವಿರುದ್ಧ ಕಣಕ್ಕಿಳಿಯಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ಸೆಪ್ಟೆಂಬರ್ 7 ರಂದು ಪಾಕ್–ಹಾಂಗ್ ಕಾಂಗ್ ಪಂದ್ಯದಲ್ಲಿ ಗೆದ್ದ ತಂಡ ಶ್ರೀಲಂಕಾ ವಿರುದ್ಧ ಆಡಬೇಕು. ಹಾಗೂ ಸೂಪರ್ 4 ಹಂತದ ಕೊನೆಯ ಪಂದ್ಯ ಸೆಪ್ಟೆಂಬರ್ 8 ರಂದು ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿದೆ.

ಸೂಪರ್ 4 ಹಂತದಲ್ಲಿ ಕೂಡ ಪಾಯಿಂಟ್ ಟೇಬಲ್​ ಇರಲಿದ್ದು, ಇದರಲ್ಲಿ ಮೊದಲ ಮತ್ತು 2ನೇ ಸ್ಥಾನ ಪಡೆಯುವ ತಂಡಗಳು ಫೈನಲ್​ ಪ್ರವೇಶಿಸಲಿದೆ. ಅಂದರೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಮತ್ತು ದ್ವಿತೀಯ ಸ್ಥಾನ ಪಡೆಯುವ ತಂಡಗಳೇ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಸೂಪರ್– 4 ವೇಳಾಪಟ್ಟಿ:

ಸೆಪ್ಟೆಂಬರ್ 3 – ಅಫ್ಘಾನಿಸ್ತಾನ್ vs ಶ್ರೀಲಂಕಾ- ಶಾರ್ಜಾ

ಸೆಪ್ಟೆಂಬರ್ 4 – ಭಾರತ vs A2- ದುಬೈ

ಸೆಪ್ಟೆಂಬರ್ 6 – ಭಾರತ vs ಅಫ್ಘಾನಿಸ್ತಾನ್ – ದುಬೈ

ಸೆಪ್ಟೆಂಬರ್ 7 – A2 vs ಶ್ರೀಲಂಕಾ- ದುಬೈ

ಸೆಪ್ಟೆಂಬರ್ 8 – ಭಾರತ vs ಶ್ರೀಲಂಕಾ- ದುಬೈ

ಸೆಪ್ಟೆಂಬರ್ 9 – ಅಫ್ಘಾನಿಸ್ತಾನ vs- A2- ದುಬೈ

ಸೆಪ್ಟೆಂಬರ್ 11 – ಫೈನಲ್ ಪಂದ್ಯ– ದುಬೈ

ಭಾರತ ತಂಡ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌. ಮೀಸಲು ಆಟಗಾರರು: ಅಕ್ಷರ್‌ ಪಟೇಲ್‌, ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 10:49 am, Fri, 2 September 22

Follow Us
TV9 Web
TV9 Web

TV9 Kannada

Read More
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಅಮುಲ್​ನಿಂದಲೂ ಬೆಲೆ ಏರಿಕೆಯ ಶಾಕ್; ಹಾಲಿನ ದರ ಲೀಟರ್​​ಗೆ 2 ರೂ. ಹೆಚ್ಚಳ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಹಾಸನಾಂಬೆ ಜಾತ್ರಾಮಹೋತ್ಸವ: ರಾತ್ರಿ 12ರಿಂದ ದೇವರ ದರ್ಶನಕ್ಕೆ ಅವಕಾಶವಿಲ್ಲ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಸಿನಿಮಾ ಹಾಕಿ ಎಂದ ತಾಂಡವ್​​, ಐಡಿಯಾ ಕೊಟ್ಟ ಪ್ರಶಾಂತ್: ವಿಡಿಯೋ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಬಾಗಲಕೋಟೆಯಲ್ಲೂ ಸ್ಟಿಂಗ್ ಸದ್ದು: ಕಾಶಪ್ಪನವರ, ಪಾಟೀಲ್​​ ಮಧ್ಯೆ ವಾಕ್ಸಮರ
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಶಾಲಾ ಮಕ್ಕಳಿಂದಲೇ ರಸ್ತೆ ದುರಸ್ತಿ!
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಮತ್ತೆ ಮಂತ್ರಿಯಾಗ್ತಾರಾ ಬಿ.ನಾಗೇಂದ್ರ?: ಮಾಜಿ ಸಚಿವ ಹೇಳಿದ್ದಿಷ್ಟು
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಆನೆ ಯಾವುದು ಅಂತಾನೇ ಹೇಳಿಲ್ಲ ಅಂದ್ರೆ ಅಂಬಾರಿ ಯಾಕೆ ಕೊಡಬೇಕು?
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್