ಭಾರತ-ಪಾಕಿಸ್ತಾನ್ (India vs Pakistan) ಪಂದ್ಯಕ್ಕಾಗಿ ವೇದಿಕೆ ಸಿದ್ಧವಾಗಿದೆ. ಶ್ರೀಲಂಕಾದ ಕೊಲಂಬೊದಲ್ಲಿನ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಸೂಪರ್-ಫೋರ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ (Team India) ಇಬ್ಬರು ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಪಾಕ್ ವಿರುದ್ಧದ ಪಂದ್ಯಕ್ಕಾಗಿ ಭಾರತ ತಂಡದ ಆಡುವ ಬಳಗದಲ್ಲಿ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಆದರೆ ಇಲ್ಲಿ ಯಾರು ಹೊರಗುಳಿಯಲಿದ್ದಾರೆ ಎಂಬುದೇ ಪ್ರಶ್ನೆ.
ಏಕೆಂದರೆ ಗಾಯದ ಕಾರಣ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಇದೀಗ ತಂಡವನ್ನು ಸೇರಿಸಿಕೊಂಡಿದ್ದಾರೆ. ಮತ್ತೊಂದೆಡೆ ಮೊದಲ ಮಗುವನ್ನು ಸ್ವಾಗತಿಸಲು ಭಾರತಕ್ಕೆ ಮರಳಿದ್ದ ಜಸ್ಪ್ರೀತ್ ಬುಮ್ರಾ ನೇಪಾಳ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಬುಮ್ರಾ ಕೂಡ ಟೀಮ್ ಇಂಡಿಯಾವನ್ನು ಕೂಡಿಕೊಂಡಿದ್ದಾರೆ.
ಈ ಇಬ್ಬರ ರಿ-ಎಂಟ್ರಿಯೊಂದಿಗೆ ಟೀಮ್ ಇಂಡಿಯಾದಿಂದ ಮತ್ತಿಬ್ಬರು ಹೊರಗುಳಿಯುವುದು ಖಚಿತ. ಆದರೆ ಇಲ್ಲಿ ಯಾರು ಹೊರಗುಳಿಯುತ್ತಾರೆ ಎಂಬುದೇ ಕುತೂಹಲ. ಏಕೆಂದರೆ ಕೆಎಲ್ ರಾಹುಲ್ ಬದಲಿಗೆ ತಂಡದಲ್ಲಿ ಅವಕಾಶ ಪಡೆದ ಇಶಾನ್ ಕಿಶನ್ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 82 ರನ್ ಬಾರಿಸಿ ಮಿಂಚಿದ್ದರು.
ಇನ್ನು ನೇಪಾಳ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ಬುಮ್ರಾ ಆಗಮನದಿಂದಾಗಿ ಯಾರು ಬೇಕಾದರೂ ತಂಡದಿಂದ ಹೊರಬೀಳಬಹುದು.
ಆದರೆ ಪಾಕ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಕಾರಣ ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಇಲ್ಲಿ ಇಶಾನ್ ಕಿಶನ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದರೆ ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್ ಹೊರಗುಳಿಯಬೇಕಾಗಿ ಬರಬಹುದು. ಹೀಗಾಗಿ ಈ ಮೂವರಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬುದೇ ಪ್ರಶ್ನೆ.
ಒಟ್ಟಿನಲ್ಲಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಕಂಡು ಬರುವುದಂತು ಖಚಿತ. ಆದರೆ ಈ ಬದಲಾವಣೆಗಾಗಿ ಯಾರು ಅವಕಾಶ ವಂಚಿತರಾಗಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.
ಇದನ್ನೂ ಓದಿ: ಏಕದಿನದಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದವರ ಪೈಕಿ ಕೊಹ್ಲಿಗೆ 4ನೇ ಸ್ಥಾನ..!
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.