India vs Pakistan Playing XI: ಟಾಸ್ ಗೆದ್ದ ಬಾಬರ್; ಪಾಕ್ ವಿರುದ್ಧ ಭಾರತದ ಪ್ಲೇಯಿಂಗ್ 11 ಹೀಗಿದೆ

|

Updated on: Jun 09, 2024 | 8:56 PM

India vs Pakistan Playing XI: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.

India vs Pakistan Playing XI: ಟಾಸ್ ಗೆದ್ದ ಬಾಬರ್; ಪಾಕ್ ವಿರುದ್ಧ ಭಾರತದ ಪ್ಲೇಯಿಂಗ್ 11 ಹೀಗಿದೆ
ಭಾರತ- ಪಾಕಿಸ್ತಾನ
Follow us on

ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (Nassau County International Cricket Stadium) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಟಿ20 ವಿಶ್ವಕಪ್‌ನ (T20 World Cup 2024) 19 ನೇ ಪಂದ್ಯ ನಡೆಯುತ್ತಿದೆ. ಕೋಟ್ಯಂತರ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲೆ ನೆಟ್ಟಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಗೆದ್ದರೆ, ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಟೀಂ ಇಂಡಿಯಾ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ ಪಾಕಿಸ್ತಾನ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನು ಈ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಆಝಂ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.

IND vs PAK T20 World Cup LIVE Score: ಭಾರತದ ಬ್ಯಾಟಿಂಗ್ ಆರಂಭ

ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಸಾಧನೆ

ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಇದುವರೆಗೆ ಒಟ್ಟು 45 ಪಂದ್ಯಗಳನ್ನು ಆಡಿದೆ. ಈ 45 ಪಂದ್ಯಗಳಲ್ಲಿ ಒಟ್ಟು 29 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ, 15 ಪಂದ್ಯಗಳಲ್ಲಿ ಸೋತಿದೆ. ಉಳಿದಂತೆ 1 ಪಂದ್ಯ ಟೈ ಆಗಿದ್ದು, ಟೀಂ ಇಂಡಿಯಾ ಗೆಲುವಿನ ಪ್ರಮಾಣ ಶೇ.66 ರಷ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Sun, 9 June 24