T20 World Cup 2024: ಟಿ20 ವಿಶ್ವಕಪ್ನ ಹೈವೊಲ್ಟೇಜ್ ಕದನಕ್ಕಾಗಿ ವೇದಿಕೆ ಸಜ್ಜಾಗಿದೆ. ಭಾನುವಾರ ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನೇ ಕಣಕ್ಕಿಳಿಸಲಿದೆ.
ಅದರಲ್ಲೂ ಈ ಬಾರಿ ಕೂಡ ಭಾರತ ತಂಡ ನಾಲ್ವರು ಆಲ್ರೌಂಡರ್ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಏಕೆಂದರೆ ಇದೇ ಮೈದಾನದಲ್ಲಿ ಆಡಲಾದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿದಿದ್ದರು. ಇದೇ ಸಂಯೋಜನೆಯೊಂದಿಗೆ ಭಾರತ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ನಾಲ್ವರು ಆಲ್ರೌಂಡರ್ಗಳಿರುವುದರಿಂದ ನಾಯಕ ರೋಹಿತ್ ಶರ್ಮಾಗೆ 7 ಬೌಲರ್ಗಳ ಆಯ್ಕೆ ಲಭಿಸಲಿದೆ. ಅಂದರೆ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಕಣಕ್ಕಿಳಿಯುವುದು ಖಚಿತ.
ಟೀಮ್ ಇಂಡಿಯಾದಲ್ಲಿ ಹೆಚ್ಚುವರಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆಯನ್ನು ಬಳಸಿಕೊಳ್ಳಬಹುದು. ಹಾಗೆಯೇ ಸ್ಪಿನ್ನರ್ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಆಯ್ಕೆಗಳಿವೆ. ಹೀಗಾಗಿ ಟೀಮ್ ಇಂಡಿಯಾ 7 ಬೌಲರ್ಗಳೊಂದಿಗೆ ರಣತಂತ್ರ ರೂಪಿಸಬಹುದು.
ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದ್ದರು. ಹೀಗಾಗಿ ಪಾಕ್ ವಿರುದ್ಧ ಪಂದ್ಯದಲ್ಲೂ ಇದೇ ಜೋಡಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಆಡುವುದು ಖಚಿತ.
ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದರೆ, ಐದನೇ ಕ್ರಮಾಂಕದಲ್ಲಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಆರನೇ ಕ್ರಮಾಂಕದಲ್ಲಿ ಆಡಿದರೆ, ಫಿನಿಶರ್ ಪಾತ್ರಗಳಲ್ಲಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
ಇದನ್ನೂ ಓದಿ: Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ