VIDEO: ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡು ಸಂಭ್ರಮಿಸಿದ ರಾಹುಲ್ ದ್ರಾವಿಡ್
India vs Pakistan: ಹ್ಯಾರಿಸ್ ರೌಫ್ ಎಸೆದ 19ನೇ ಓವರ್ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು.
T20 W0rld Cup 2022: ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲೇ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ (India vs Pakistan) ವಿರುದ್ಧ ಆಡಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.
ಹ್ಯಾರಿಸ್ ರೌಫ್ ಎಸೆದ 19ನೇ ಓವರ್ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್ನಲ್ಲಿ 16 ರನ್ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು.
ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತು. ಈ ಗೆಲುವಿನ ಸಂಭ್ರಮ ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್ನಲ್ಲೂ ಕಂಡು ಬಂತು. ಅದರಲ್ಲೂ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಕೊಹ್ಲಿಯ ಪ್ರದರ್ಶನಕ್ಕೆ ಫುಲ್ ಖುಷ್ ಆಗಿದ್ದರು.
ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್ನತ್ತ ಆಗಮಿಸುತ್ತಿದ್ದಂತೆ ರಾಹುಲ್ ದ್ರಾವಿಡ್ ಅವರನ್ನು ಬಹಳ ಹೊತ್ತು ತಬ್ಬಿಕೊಂಡು ಅಭಿನಂದಿಸಿದರು. ಇದು ಈ ಗೆಲುವಿನ ಮಹತ್ವವನ್ನು ತೋರಿಸುತ್ತದೆ. ಇದೀಗ ಈ ವಿಡಿಯೋವನ್ನು ಐಸಿಸಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದು ವಿಶೇಷ.
View this post on Instagram
ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ವಿರಾಟ್ ಕೊಹ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.