VIDEO: ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡು ಸಂಭ್ರಮಿಸಿದ ರಾಹುಲ್ ದ್ರಾವಿಡ್

| Updated By: ಝಾಹಿರ್ ಯೂಸುಫ್

Updated on: Oct 23, 2022 | 11:09 PM

India vs Pakistan: ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು.

VIDEO: ವಿರಾಟ್ ಕೊಹ್ಲಿಯನ್ನು ಅಪ್ಪಿಕೊಂಡು ಸಂಭ್ರಮಿಸಿದ ರಾಹುಲ್ ದ್ರಾವಿಡ್
Rahul Dravid-Virat Kohli
Follow us on

T20 W0rld Cup 2022: ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ (India vs Pakistan) ವಿರುದ್ಧ ಆಡಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು.
ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

ಇದನ್ನೂ ಓದಿ
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು.

ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು.
ಈ ಗೆಲುವಿನ ಸಂಭ್ರಮ ಟೀಮ್ ಇಂಡಿಯಾದ ಡ್ರೆಸ್ಸಿಂಗ್ ರೂಮ್​ನಲ್ಲೂ ಕಂಡು ಬಂತು. ಅದರಲ್ಲೂ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಕೊಹ್ಲಿಯ ಪ್ರದರ್ಶನಕ್ಕೆ ಫುಲ್ ಖುಷ್ ಆಗಿದ್ದರು.

ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್​ನತ್ತ ಆಗಮಿಸುತ್ತಿದ್ದಂತೆ ರಾಹುಲ್ ದ್ರಾವಿಡ್ ಅವರನ್ನು ಬಹಳ ಹೊತ್ತು ತಬ್ಬಿಕೊಂಡು ಅಭಿನಂದಿಸಿದರು. ಇದು ಈ ಗೆಲುವಿನ ಮಹತ್ವವನ್ನು ತೋರಿಸುತ್ತದೆ. ಇದೀಗ ಈ ವಿಡಿಯೋವನ್ನು ಐಸಿಸಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದು ವಿಶೇಷ.

ಒಟ್ಟಿನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ವಿರಾಟ್ ಕೊಹ್ಲಿ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ 2021 ರ ಟಿ20 ವಿಶ್ವಕಪ್ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ.