VIDEO: ಇಮ್ರಾನ್​ ಖಾನ್​ನ ಬಿಡುಗಡೆ ಮಾಡಿ: ಭಾರತ-ಪಾಕ್ ಪಂದ್ಯದ ವೇಳೆ ಹಾರಾಡಿದ ವಿಮಾನ

India vs Pakistan: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 119 ರನ್​ಗಳಿಸಿದರೆ, ಪಾಕಿಸ್ತಾನ್ ತಂಡವು 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಾಕ್ ವಿರುದ್ಧ ಭಾರತ ತಂಡ ರೋಚಕ ಗೆಲುವು ಸಾಧಿಸಿತು.

VIDEO: ಇಮ್ರಾನ್​ ಖಾನ್​ನ ಬಿಡುಗಡೆ ಮಾಡಿ: ಭಾರತ-ಪಾಕ್ ಪಂದ್ಯದ ವೇಳೆ ಹಾರಾಡಿದ ವಿಮಾನ
Follow us
|

Updated on: Jun 10, 2024 | 12:35 PM

ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಪಂದ್ಯದ ವೇಳೆ “ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡಿ” ಎಂಬ ಸಂದೇಶದ ಬ್ಯಾನರ್ ಹೊಂದಿರುವ ವಿಮಾನವು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಮೇಲೆ ಹಾರಾಡಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಜೈಲಿನಲ್ಲಿದ್ದು, ಹೀಗಾಗಿ ಅವರನ್ನು ಬಿಡುಗಡೆ ಮಾಡುವಂತೆ ಬ್ಯಾನರ್ ಪ್ರದರ್ಶಿಸುವ ಮೂಲಕ ಒತ್ತಾಯಿಸಿದರು.

ಪಂದ್ಯದ ನಡುವೆ ವಿಮಾನವು ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡಬೇಕೆಂಬ ಬ್ಯಾನರ್​ ಪ್ರದರ್ಶಿಸುತ್ತಾ ಮೈದಾನದ ಸುತ್ತಲೂ ಹಾರಾಡುತ್ತಿರುವುದು ಕಂಡು ಬಂತು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ಈ ಪ್ರತಿಭಟನೆಯ ರೂಪಕದ ಬ್ಯಾನರ್ ಪ್ರದರ್ಶನದ ಹಿಂದೆ ಯಾರಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಇಮ್ರಾನ್ ಖಾನ್ ಬಿಡುಗಡೆ ಮಾಡಿ ಎಂದು ಹಾರಾಡಿದ ವಿಮಾನ, ವಿಡಿಯೋ:

ಪಾಕಿಸ್ತಾನ್ ತಂಡದ ಮಾಜಿ ನಾಯಕ ಇಮ್ರಾನ್ ಖಾನ್ ಅವರು ತಾವು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿದೇಶಿ ಗಣ್ಯರಿಂದ ಅಕ್ರಮವಾಗಿ ಉಡುಗೊರೆ ಪಡೆದಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಭ್ರಷ್ಟಾಚಾರ ಆರೋಪದಲ್ಲಿ ಬಂಧಿತರಾಗಿದ್ದ ಅವರನ್ನು ತಪ್ಪಿತಸ್ಥ ಎಂದು ಇಸ್ಲಾಮಾಬಾದ್ ಕೋರ್ಟ್ ತೀರ್ಪು ನೀಡಿದೆ.

ಈ ತೀರ್ಪಿನಂತೆ ಇಮ್ರಾನ್ ಖಾನ್ ಅವರಿಗೆ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ 5 ವರ್ಷಗಳ ಕಾಲ ರಾಜಕೀಯದಿಂದ ದೂರ ಉಳಿಯುವಂತೆ ಸೂಚಿಸಿದೆ. ಅದರಂತೆ ಇದೀಗ ಇಮ್ರಾನ್ ಖಾನ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಾವಲ್ಪಿಂಡಿ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

PTI ಪಕ್ಷದ ಮುಖ್ಯಸ್ಥ:

1992 ರ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದ ಇಮ್ರಾನ್ ಖಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಧುಮುಕಿದ್ದರು. ಅಲ್ಲದೆ 2018 ರಲ್ಲಿ ಪ್ರಧಾನಿಯಾಗಿ ಆಯ್ಕೆಯಾಗಿದ್ದರು. ಆ ಬಳಿಕ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಿದ್ದ ಅವರನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ಮತದ ಬಳಿಕ ಪದಚ್ಯುತಗೊಳಿಸಲಾಗಿತ್ತು.

ಇದನ್ನೂ ಓದಿ: T20 World Cup 2024: ಸೂಪರ್-8 ಹಂತಕ್ಕೇರಲು ಪಾಕಿಸ್ತಾನ್ ತಂಡಕ್ಕೆ ಇನ್ನೂ ಇದೆ ಚಾನ್ಸ್​

ಈ ಉಚ್ಚಾಟನೆಯನ್ನು ಇಮ್ರಾನ್ ಖಾನ್ ವಿದೇಶಿ ಪಿತೂರಿ ಎಂದು ಕರೆದಿದ್ದರು. ಆ ಬಳಿಕ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿಸಲಾಗಿತ್ತು. ಇದೀಗ ಈ ಬಂಧನದಿಂದ ಮುಕ್ತಗೊಳಿಸಬೇಕೆಂದು ಅವರ ಬೆಂಬಲಿಗರಿಂದ ಕೂಗುಗಳು ಕೇಳಿ ಬರುತ್ತಿವೆ. ಇದರ ನಡುವೆ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಅವರ ಬೆಂಬಲಿಗರು ವಿಮಾನದಲ್ಲಿ ಬ್ಯಾನರ್ ಪ್ರದರ್ಶಿಸಿ ಇಡೀ ವಿಶ್ವದ ಗಮನ ಸೆಳೆಯುವ ಯತ್ನ ಮಾಡಿದ್ದಾರೆ.

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್