AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿ: ಮೀಸಲು ದಿನದಾಟದ ನಿಯಮಗಳೇನು?

India vs Pakistan: ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಭಾನುವಾರ ಎಷ್ಟು ಓವರ್​ ವೇಳೆಗೆ ಸ್ಥಗಿತವಾಗಿತ್ತೊ ಅಲ್ಲಿಂದಲೇ ಮತ್ತೆ ಮ್ಯಾಚ್ ಶುರುವಾಗಲಿದೆ. ಅಂದರೆ ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 147/2 ರನ್​ಗಳಿಸಿದ್ದಾಗ ಪಂದ್ಯ ಸ್ಥಗಿತಗೊಂಡಿತ್ತು. ಅದರಂತೆ ಸೋಮವಾರ 24.1 ಓವರ್​ಗಳಿಂದ ಮ್ಯಾಚ್ ಶುರುವಾಗಲಿದೆ.

ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿ: ಮೀಸಲು ದಿನದಾಟದ ನಿಯಮಗಳೇನು?
India vs Pakistan
TV9 Web
| Edited By: |

Updated on: Sep 10, 2023 | 10:47 PM

Share

Asia Cup 2023: ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯವನ್ನು ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಅದರಂತೆ ಸೋಮವಾರ ಇದೇ ಮೈದಾನದಲ್ಲಿ ಭಾರತ-ಪಾಕ್ ಮತ್ತೆ ಮುಖಾಮುಖಿಯಾಗಲಿದೆ.

ಸೋಮವಾರ 50 ಓವರ್​ಗಳ ಸಂಪೂರ್ಣ ಪಂದ್ಯ ನಡೆಯಲಿದ್ದು, ಇದಾಗ್ಯೂ ಕೆಲ ನಿಯಮಗಳನ್ನು ರೂಪಿಸಲಾಗಿದೆ. ಆ ನಿಯಮಗಳೆಂದರೆ…

    1. ಸ್ಥಗಿತದಿಂದ ಪುನರಾರಂಭ: ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಭಾನುವಾರ ಎಷ್ಟು ಓವರ್​ ವೇಳೆಗೆ ಸ್ಥಗಿತವಾಗಿತ್ತೊ ಅಲ್ಲಿಂದಲೇ ಮತ್ತೆ ಮ್ಯಾಚ್ ಶುರುವಾಗಲಿದೆ. ಅಂದರೆ ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 147/2 ರನ್​ಗಳಿಸಿದ್ದಾಗ ಪಂದ್ಯ ಸ್ಥಗಿತಗೊಂಡಿತ್ತು. ಅದರಂತೆ ಸೋಮವಾರ 24.1 ಓವರ್​ಗಳಿಂದ ಮ್ಯಾಚ್ ಶುರುವಾಗಲಿದೆ.
    2.  ಬ್ಯಾಟರ್​ಗಳ ಬದಲಾವಣೆಯಿಲ್ಲ: 24.1 ಓವರ್​ಗಳ ವೇಳೆ ಕ್ರೀಸ್​ನಲ್ಲಿದ್ದ ಬ್ಯಾಟರ್​ಗಳೇ ನಾಳೆ ಕೂಡ ಇನಿಂಗ್ಸ್​ ಮುಂದುವರೆಸಲಿದ್ದಾರೆ. ಬದಲಾಗಿ ಹೊಸ ಬ್ಯಾಟರ್​ಗಳು ಕಣಕ್ಕಿಳಿಯುವಂತಿಲ್ಲ. ಅದರಂತೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
    3. ಪ್ಲೇಯಿಂಗ್ ಇಲೆವೆನ್​ನಲ್ಲೂ ನೋ ಚೇಂಜ್: ಭಾನುವಾರ ಪ್ರಕಟಿಸಿರುವ ಪ್ಲೇಯಿಂಗ್ ಇಲೆವೆನ್​ ಅನ್ನೇ ಮೀಸಲು ದಿನದಾಟದಲ್ಲೂ ಮುಂದುವರೆಸಬೇಕಾಗುತ್ತದೆ. ಇಲ್ಲಿ ಯಾವುದೇ ಕಾರಣಕ್ಕೂ ಆಟಗಾರರ ಬದಲಾವಣೆಗೆ ಅವಕಾಶವಿಲ್ಲ.
    4. ಕನಿಷ್ಠ 20 ಓವರ್: ಈ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲು ಎರಡೂ ಇನ್ನಿಂಗ್ಸ್‌ಗಳಲ್ಲಿ ಕನಿಷ್ಠ 20 ಓವರ್‌ಗಳನ್ನು ಬೌಲ್ ಮಾಡಬೇಕಾಗುತ್ತದೆ.
    5. 3 ಗಂಟೆಯಿಂದ ಪಂದ್ಯ: ಎಂದಿನಂತೆ ಸೋಮವಾರ ಕೂಡ ಮಧ್ಯಾಹ್ನ 3 ಗಂಟೆಯಿಂದ ಪಂದ್ಯ ಶುರುವಾಗಲಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಡೇವಿಡ್ ವಾರ್ನರ್

ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಆಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ