India vs Pakistan: ತಂಡದ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ ರೋಹಿತ್ ಶರ್ಮಾ
India vs Pakistan ICC T20 World Cup 2024: ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಭಾರತ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 120 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಭಾರತೀಯ ಬೌಲರ್ಗಳು ಕರಾರುವಾಕ್ ದಾಳಿಗೆ ರನ್ ಗಳಿಸಲು ಪರದಾಡಿದರು. ಅಲ್ಲದೆ ಅಂತಿಮವಾಗಿ ಪಾಕ್ ಪಡೆ 6 ರನ್ಗಳಿಂದ ಸೋಲೊಪ್ಪಿಕೊಂಡಿತು.
T20 World Cup 2024: ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಜಯಗಳಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 6 ರನ್ಗಳ ಗೆಲುವು ದಾಖಲಿಸಿತು. ಈ ಗೆಲುವಿನ ಹೊರತಾಗಿಯೂ ನಾಯಕ ರೋಹಿತ್ ಶರ್ಮಾ ತಂಡದ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಪಾಕ್ ವಿರುದ್ಧದ ಗೆಲುವು ಖುಷಿ ನೀಡಿದೆ. ಆದರೆ ನಾವು ಈ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿಲ್ಲ ಎಂಬುದೇ ಸತ್ಯ. ನಮ್ಮ ಅರ್ಧ ಇನಿಂಗ್ಸ್ ಉತ್ತಮವಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದೇವೆ. ಯಾರೂ ಸಹ ಉತ್ತಮ ಜೊತೆಯಾಟವಾಡಲಿಲ್ಲ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕಳೆದ ಪಂದ್ಯಕ್ಕೆ ಹೋಲಿಸಿದರೆ ಈ ಬಾರಿ ಉತ್ತಮ ಪಿಚ್ ಹೊಂದಿತ್ತು. ಹೀಗಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಬಹುದಾಗಿತ್ತು. ಆದರೆ ನಮ್ಮ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾದೆವು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಬೌಲರ್ಗಳಿಗೆ ಬಹುಪರಾಕ್:
ನಮ್ಮ ಬೌಲಿಂಗ್ ವಿಭಾಗವು ಅತ್ಯುತ್ತಮ ಪ್ರದರ್ಶನ ನೀಡಿದೆ. ಇಂತಹ ಪ್ರದರ್ಶನ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನಾವು ಬ್ಯಾಟಿಂಗ್ನಲ್ಲಿ ಹೇಗೆ ಸಾಂಘಿಕ ಪ್ರದರ್ಶನ ನೀಡಬಲ್ಲದೊ, ಅದೇ ರೀತಿ ಬೌಲಿಂಗ್ನಲ್ಲೂ ನೀಡಬಹುದು. ಇದಕ್ಕೆ ಸಾಕ್ಷಿ ಈ ಪಂದ್ಯ.
ಇಲ್ಲಿ ಪ್ರತಿಯೊಬ್ಬರ ಸಣ್ಣ ಕೊಡುಗೆಯು ದೊಡ್ಡ ಬದಲಾವಣೆಯನ್ನು ತರುತ್ತದೆ. ಅದರಲ್ಲೂ ಜಸ್ಪ್ರೀತ್ ಬುಮ್ರಾ ಏನು ಮಾಡಬಹುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಅವರ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ. ಇದೇ ಫಾರ್ಮ್ ಅನ್ನು ಬುಮ್ರಾ ವಿಶ್ವಕಪ್ನ ಉದ್ಧಕ್ಕೂ ಪ್ರದರ್ಶಿಸಲಿ ಎಂದು ಬಯಸುತ್ತೇನೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಇದು ಪ್ರಾರಂಭವಷ್ಟೇ, ಇನ್ನೂ ಬಹಳ ದೂರ ಕ್ರಮಿಸಬೇಕಿದೆ. ಹೀಗಾಗಿ ಭಾರತ ತಂಡವು ಇದೇ ಲಯವನ್ನು ಮುಂಬರುವ ಪಂದ್ಯಗಳಲ್ಲೂ ಮುಂದುವರೆಸುವ ವಿಶ್ವಾಸವಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಗೆದ್ದು ಬೀಗಿದ ಭಾರತ:
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 19 ಓವರ್ಗಳಲ್ಲಿ 119 ರನ್ಗಳಿಸಿ ಆಲೌಟ್ ಆಯಿತು.
ಇದನ್ನೂ ಓದಿ: India vs Pakistan: ಪಾಕ್ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
120 ರನ್ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ವಿರುದ್ಧ ಭಾರತೀಯ ಬೌಲರ್ಗಳು ಕರಾರುವಾಕ್ ದಾಳಿ ಸಂಘಟಿಸಿದ್ದರು. ಪರಿಣಾಮ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ ತಂಡ ಕೇವಲ 113 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ.