
India vs Pakistan T20, Asia Cup 2022 Live Streaming: ಏಷ್ಯಾ ರಾಷ್ಟ್ರಗಳ ಚುಟುಕು ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಇಂದಿನಿಂದ ಶುರುವಾಗಲಿದೆ. ಯುಎಇನಲ್ಲಿ ನಡೆಯುತ್ತಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು 2ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸುತ್ತಿನಲ್ಲಿ ಗ್ರೂಪ್ ಹಂತದ ಪಂದ್ಯಗಳು ನಡೆಯಲಿದ್ದು, ಇದಾದ ಬಳಿಕ ಸೂಪರ್-4 ಹಂತದ ಮ್ಯಾಚ್ಗಳು ನಡೆಯಲಿದೆ. ಆಗಸ್ಟ್ 27 ರಿಂದ ಶುರುವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಂದು ಜರುಗಲಿದೆ. ಈ ಟೂರ್ನಿಯ ನೇರ ಪ್ರಸಾರ ಹಾಗೂ ಭಾರತ-ಪಾಕಿಸ್ತಾನ್ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಪಾಕಿಸ್ತಾನ ತಂಡ ಹೀಗಿದೆ:
ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಹಸನ್ ಅಲಿ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್ ದಹಾನಿ, ಉಸ್ಮಾನ್ ಖಾದಿರ್.
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್. ಮೀಸಲು ಆಟಗಾರರು: ಅಕ್ಷರ್ ಪಟೇಲ್, ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.