India vs Pakistan T20, Asia Cup 2022 Live Streaming: ಏಷ್ಯಾಕಪ್ನ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಗ್ರೂಪ್ ಹಂತದಲ್ಲಿ ಪಾಕ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸಿರುವ ಟೀಮ್ ಇಂಡಿಯಾ ಈ ಬಾರಿ ಕೂಡ ಗೆಲ್ಲುವ ವಿಶ್ವಾಸದಲ್ಲಿದೆ. ಈ ಟೂರ್ನಿಯ ನೇರ ಪ್ರಸಾರ ಹಾಗೂ ಭಾರತ-ಪಾಕಿಸ್ತಾನ್ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಏಷ್ಯಾ ಕಪ್-2022 ರ ಎಲ್ಲಾ ಪಂದ್ಯಗಳ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಇರಲಿದೆ. ಹಾಗೆಯೇ ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲೂ ಲೈವ್ ಪ್ರಸಾರವಾಗಲಿದೆ.
ಸೆಪ್ಟೆಂಬರ್ 4, ಭಾನುವಾರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.
ಈ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಈ ಪಂದ್ಯವು ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, ಟಾಸ್ 7 ಗಂಟೆಗೆ ನಡೆಯಲಿದೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.
ಪಾಕಿಸ್ತಾನ ತಂಡ ಹೀಗಿದೆ:
ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಹಸನ್ ಅಲಿ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್ ದಹಾನಿ, ಉಸ್ಮಾನ್ ಖಾದಿರ್.
ಟೀಮ್ ಇಂಡಿಯಾ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಯುಜ್ವೇಂದ್ರ ಚಹಲ್, ಆರ್ ಅಶ್ವಿನ್, ರವಿ ಬಿಷ್ಣೋಯ್.
ಮೀಸಲು ಆಟಗಾರರು: ದೀಪಕ್ ಚಹರ್ ಮತ್ತು ಶ್ರೇಯಸ್ ಅಯ್ಯರ್.