AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಟಾಸ್ ಗೆದ್ದವರೇ ಬಾಸ್: ಯಾರು ಗೆಲ್ತಾರೆ?

India vs Pakistan T20: ಟೀಮ್ ಇಂಡಿಯಾವನ್ನು ಕೇವಲ 151 ರನ್​ಗಳಿಗೆ ನಿಯಂತ್ರಿಸಿತು. ಅಲ್ಲದೆ 17.5 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿತ್ತು.

India vs Pakistan: ಟಾಸ್ ಗೆದ್ದವರೇ ಬಾಸ್: ಯಾರು ಗೆಲ್ತಾರೆ?
IND vs PAK
TV9 Web
| Updated By: ಝಾಹಿರ್ ಯೂಸುಫ್|

Updated on: Aug 28, 2022 | 5:00 PM

Share

Asia Cup 2022: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಏಷ್ಯಾಕಪ್​ನ 2ನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಈ ಹಿಂದೆ ಇದೇ ಮೈದಾನದಲ್ಲಿ ಟೀಮ್ ಇಂಡಿಯಾಗೆ ಪಾಕ್ ತಂಡವು 10 ವಿಕೆಟ್​ಗಳಿಂದ ಹೀನಾಯ ಸೋಲುಣಿಸಿತ್ತು ಎಂಬುದು ವಿಶೇಷ. ಅಂದು ಕೂಡ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ (Team India) ಪಾಲಿಗೆ ಶಾಪವಾಗಿದ್ದು ಟಾಸ್ ಎನ್ನಬಹುದು. ಏಕೆಂದರೆ ಟಾಸ್ ಗೆದ್ದ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಟೀಮ್ ಇಂಡಿಯಾವನ್ನು ಕೇವಲ 151 ರನ್​ಗಳಿಗೆ ನಿಯಂತ್ರಿಸಿತು. ಅಲ್ಲದೆ 17.5 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿತ್ತು. ಇಲ್ಲಿ ಟೀಮ್ ಇಂಡಿಯಾ ಪಾಕ್ ತಂಡದ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗದಿರಲು ಮುಖ್ಯ ಕಾರಣ ಇಬ್ಬನಿ. 2ನೇ ಇನಿಂಗ್ಸ್​ ವೇಳೆ ದುಬೈನಲ್ಲಿ ಕಂಡು ಬರುವ ಇಬ್ಬನಿ ಟಾಸ್ ಗೆದ್ದ ತಂಡಕ್ಕೆ ಪ್ಲಸ್ ಪಾಯಿಂಟ್ ಎಂದೇ ಹೇಳಬಹುದು. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

  • 2021 ರ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಆಡಲಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿತು. ಇದಾಗ್ಯೂ ನ್ಯೂಜಿಲೆಂಡ್ ತಂಡವು 172 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಆದರೆ 18.5 ಓವರ್​ಗಳಲ್ಲಿ 173 ರನ್​ ಬಾರಿಸುವ ಮೂಲಕ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದು ಈಗ ಇತಿಹಾಸ.
  • ಇದಕ್ಕೂ ಮುನ್ನ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡತು. ಇನ್ನು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ನೀಡಿದ 176 ರನ್​ಗಳ ಟಾರ್ಗೆಟ್ ಅನ್ನು 19 ಓವರ್​ಗಳಲ್ಲಿ ಚೇಸ್ ಮಾಡಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿತ್ತು.
  • ಇನ್ನು ಇದೇ ಮೈದಾನದಲ್ಲಿ ಕಳೆದ ಟಿ20 ವಿಶ್ವಕಪ್​ನಲ್ಲಿ ನಮೀಬಿಯಾ ವಿರುದ್ದ ಪಂದ್ಯವಾಡಿದ್ದ ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಅಲ್ಲದೆ ನಮೀಬಿಯಾವನ್ನು 132 ರನ್​ಗಳಿಗೆ ನಿಯಂತ್ರಿಸಿ 15.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಗೆಲುವು ದಾಖಲಿಸಿತ್ತು.
  • ಹಾಗೆಯೇ ಸ್ಕಾಟ್ಲೆಂಡ್ ವಿರುದ್ದ ಕೂಡ ಇದೇ ಮೈದಾನದಲ್ಲಿ ಟಾಸ್ ಗೆದ್ದ ಭಾರತ ತಂಡವು ಮೊದಲು ಫೀಲ್ಡಿಂಗ್ ಮಾಡಿತು. ಅಲ್ಲದೆ ಕೇವಲ 85 ರನ್​ಗಳಿಗೆ ಎದುರಾಳಿಗಳನ್ನು ಆಲೌಟ್ ಮಾಡಿ 6.3 ಓವರ್​ಗಳಲ್ಲಿ ಟೀಮ್ ಇಂಡಿಯಾ ಪಂದ್ಯವನ್ನು ಮುಗಿಸಿದ್ದು ಈಗ ಇತಿಹಾಸ.
  • ದುಬೈ ಮೈದಾನದಲ್ಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಮಾಡಿ,  ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವನ್ನು 73 ರನ್​ಗಳಿಗೆ ಆಲೌಟ್ ಮಾಡಿತ್ತು. ಅಲ್ಲದೆ 6.2 ಓವರ್​ಗಳಲ್ಲಿ ಚೇಸ್ ಮಾಡುವ ಆಸೀಸ್ ಪಡೆ ಭರ್ಜರಿ ಜಯ ಸಾಧಿಸಿತ್ತು.

ಅಂದರೆ ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಟಾಸ್ ಗೆದ್ದ ತಂಡವು ಬೌಲಿಂಗ್ ಅನ್ನೇ ಆಯ್ದುಕೊಳ್ಳುತ್ತದೆ. ಏಕೆಂದರೆ 2ನೇ ಇನಿಂಗ್ಸ್​ ವೇಳೆ ಇಬ್ಬನಿ ಇರುವುದರಿಂದ ಬೌಲಿಂಗ್ ಮಾಡುವುದು ಕೂಡ ಕಷ್ಟಕರ. ಅದರಲ್ಲೂ ಬೌಲರ್​ಗಳಿಗೆ ಚೆಂಡಿನ ಮೇಲೆ ನಿಯಂತ್ರಣ ಹೊಂದಲು ಸಾಧ್ಯವಾಗುವುದಿಲ್ಲ. ಇದರ ಸಂಪೂರ್ಣ ಲಾಭ ಪಡೆಯುವ ಬ್ಯಾಟ್ಸ್​ಮನ್​ಗಳು ಸುಲಭವಾಗಿ ಬೃಹತ್ ಮೊತ್ತವನ್ನು ಚೇಸ್ ಮಾಡುತ್ತಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ

ಇದಕ್ಕೆ ಸಾಕ್ಷಿಯೇ ಶನಿವಾರ ದುಬೈ ಪಿಚ್​ನಲ್ಲಿ ನಡೆದ ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ನಡುವಣ ಪಂದ್ಯ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡವು ಶ್ರೀಲಂಕಾವನ್ನು 105 ರನ್​ಗಳಿಗೆ ಆಲೌಟ್ ಮಾಡಿತು. ಅಲ್ಲದೆ 10.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.

ಅಂದರೆ ದುಬೈ ಪಿಚ್​ನಲ್ಲಿ ಆಡಲಾದ ಕಳೆದ 7 ಪಂದ್ಯಗಳಲ್ಲೂ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ತಂಡಗಳೇ ಗೆದ್ದಿದೆ. ಹೀಗಾಗಿ ಭಾರತ-ಪಾಕ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ಟಾಸ್ ನಿರ್ಣಾಯಕ ಎಂದೇ ಹೇಳಬಹುದು.

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ