IND vs PAK, T20 World Cup 2024 Live Streaming: ಭಾರತ-ಪಾಕ್ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ

India vs Pakistan, T20 World Cup 2024: ಟಿ20 ಕ್ರಿಕೆಟ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಟ್ಟು 12 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 9 ಬಾರಿ ಗೆಲುವು ದಾಖಲಿಸಿದರೆ, ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಇನ್ನು 2021 ರ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ಜಯ ಸಾಧಿಸಿತ್ತು.

IND vs PAK, T20 World Cup 2024 Live Streaming: ಭಾರತ-ಪಾಕ್ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ
IND vs PAK
Follow us
|

Updated on: Jun 08, 2024 | 11:44 AM

T20 World Cup 2024: ಟಿ20 ವಿಶ್ವಕಪ್​ನ ಹೈವೊಲ್ಟೇಜ್ ಪಂದ್ಯಕ್ಕಾಗಿ ವೇದಿಕೆ ಸಿದ್ಧವಾಗಿದೆ. ಭಾನುವಾರ ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕಿಸ್ತಾನ್ ಪಾಲಿಗೆ ನಿರ್ಣಾಯಕ.

ಏಕೆಂದರೆ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಇದೀಗ ಭಾರತದ ವಿರುದ್ಧ ಸೋತರೆ ಮುಂದಿನ ಹಂತಕ್ಕೇರುವುದು ಪಾಕ್ ಪಾಲಿಗೆ ಕಷ್ಟಕರವಾಗಲಿದೆ. ಹೀಗಾಗಿ ಪಾಕಿಸ್ತಾನ್ ಪಾಲಿಗೆ ನಾಳಿನ (ಜೂ.9) ಪಂದ್ಯ ನಿರ್ಣಾಯಕ.

ಮತ್ತೊಂದೆಡೆ ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿಯುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ. ಅದರಂತೆ ಪಾಕ್ ವಿರುದ್ಧ ಕೂಡ ಭಾರತ ತಂಡ ಪಾರುಪತ್ಯ ಮೆರೆಯುವುದನ್ನು ಎದುರು ನೋಡಬಹುದು.  ಇನ್ನು ಈ ಪಂದ್ಯದ ಕುರಿತಾದ ಮತ್ತಷದಟು ಮಾಹಿತಿ ಈ ಕೆಳಗಿನಂತಿದೆ…

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಯುಎಸ್​ಎ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ.

ಭಾರತ ಮತ್ತು ಪಾಕ್ ಪಂದ್ಯ ನಡೆಯುತ್ತಿರುವುದು ಎಲ್ಲಿ?

ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕೆ ಈ ಬಾರಿ ನ್ಯೂಯಾರ್ಕ್​​ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಸ್ಟಾರ್ ಸ್ಪೋರ್ಟ್ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ನೇರ ಪ್ರಸಾರ ಇರಲಿದೆ. ಹಾಗೆಯೇ ಡಿಸ್ನಿ ಹಾಟ್​ ಸ್ಟಾರ್​ ವೆಬ್​ಸೈಟ್​ನಲ್ಲೂ ಲೈವ್ ವೀಕ್ಷಿಸಬಹುದು.

ಯಾವೆಲ್ಲಾ ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದೆ?

  • ಸ್ಟಾರ್ ಸ್ಪೋರ್ಟ್ಸ್​ 1,
  • ಸ್ಟಾರ್ ಸ್ಪೋರ್ಟ್ಸ್​ 2
  • ಸ್ಟಾರ್ ಸ್ಪೋರ್ಟ್ಸ್​ 3
  • ಸ್ಟಾರ್ ಸ್ಪೋರ್ಟ್ಸ್​ 1 (ಹಿಂದಿ)
  • ಸ್ಟಾರ್ ಸ್ಪೋರ್ಟ್ಸ್​ 1 (ಕನ್ನಡ)
  • ಸ್ಟಾರ್ ಸ್ಪೋರ್ಟ್ಸ್​ 1 (ತಮಿಳ್)
  • ಸ್ಟಾರ್ ಸ್ಪೋರ್ಟ್ಸ್​ 1 (ತೆಲುಗು)

ಉಚಿತವಾಗಿ ವೀಕ್ಷಿಸುವುದು ಹೇಗೆ?

ಡಿಸ್ನಿ ಹಾಟ್​ ಸ್ಟಾರ್ ಆ್ಯಪ್​ನಲ್ಲಿ ಭಾರತ vs ಪಾಕ್ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು:

ಭಾರತ ತಂಡರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

ತಾಜಾ ಸುದ್ದಿ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
ಆಧಾರ್ ಕಾರ್ಡ್ ಅಪ್​ಡೇಟ್ ಮಾಡಲು ಮತ್ತೊಂದು ಅವಕಾಶ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ