
2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವನ್ನು ವೀಕ್ಷಿಸಲು ಕೋಟ್ಯಾಂತರ ವೀಕ್ಷಕರು ಕಾತರದಿಂದ ಕಾಯುತ್ತಿದ್ದಾರೆ . ಇಲ್ಲಿಯವರೆಗೆ, ಎರಡೂ ತಂಡಗಳು 2026 ರ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿವೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ಯುಎಸ್ಎ ಮತ್ತು ನಮೀಬಿಯಾ ವಿರುದ್ಧದ ಪಂದ್ಯಗಳನ್ನು ಸುಲಭವಾಗಿ ಗೆದ್ದಿದ್ದರೆ, ಇತ್ತ ಪಾಕಿಸ್ತಾನ ಕೂಡ ನೆದರ್ಲ್ಯಾಂಡ್ಸ್ ಮತ್ತು ಯುಎಸ್ಎ ತಂಡಗಳನ್ನು ಸೋಲಿಸಿದೆ. ಇದೀಗ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಕದನ ಯಾವಾಗ ಮತ್ತು ಯಾವ ಸಮಯದಲ್ಲಿ ಪ್ರಾರಂಭವಾಗುತ್ತದೆ, ಎಲ್ಲಿ ನೇರ ಪ್ರಸಾರವಾಗುತ್ತದೆ ಮತ್ತು ಯಾವ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಅದನ್ನು ನೇರಪ್ರಸಾರ ವೀಕ್ಷಿಸಬಹುದು ಎಂಬಿತ್ಯಾದಿ ವಿವರಗಳು ಇಲ್ಲಿವೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು 9ನೇ ಬಾರಿ. ಇದರಲ್ಲಿ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಒಟ್ಟಾರೆ ಟಿ20 ಪಂದ್ಯಗಳಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ3 ಪಂದ್ಯಗಳನ್ನು ಗೆದ್ದುಕೊಂಡಿದೆ. ಕಳೆದ 5 ಟಿ20 ಪಂದ್ಯಗಳಲ್ಲಿ ಭಾರತ, ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದೆ. 2022 ರಿಂದ ಪಾಕಿಸ್ತಾನ, ಭಾರತದ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಸೆಪ್ಟೆಂಬರ್ 27, 2025 ರಂದು ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿತ್ತು.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಫೆಬ್ರವರಿ 15 ರಂದು ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯಸಂಜೆ 7 ಗಂಟೆಗೆ ಆರಂಭವಾಗಲಿದೆ.
ಟಿ20 ವಿಶ್ವಕಪ್‌ನ ಎಲ್ಲಾ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಲಭ್ಯವಿರುತ್ತವೆ. ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಮೊಬೈಲ್/ಲ್ಯಾಪ್‌ಟಾಪ್ ಮತ್ತು ಟಿವಿಯಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದು.
IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ- ಪಾಕ್ ದಾಖಲೆ ಹೇಗಿದೆ?
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಮ್, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ನಫಯ್, ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ಶಾದಾಬ್ ಖಾನ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ