
T20 World Cup 2026: ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಇಂದು (ಫೆ.15) ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ಆಯ್ಕೆ ಏನಾಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಅದರಲ್ಲೂ ಟೀಮ್ ಇಂಡಿಯಾ ಟಾಸ್ ಗೆದ್ದರೆ ಏನನ್ನು ಆಯ್ಕೆ ಮಾಡಬೇಕೆಂಬುದರ ವಿಶ್ಲೇಷಣೆ ಇಲ್ಲಿದೆ…
ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದರೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಏಕೆಂದರೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನ ಇತಿಹಾಸ ಮತ್ತು ಪ್ರಸ್ತುತ ಟೂರ್ನಿಯ ಟ್ರೆಂಡ್ ಗಮನಿಸಿದರೆ, ಇಲ್ಲಿ ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಲಾಭವಿದೆ. ಚೇಸಿಂಗ್ (ಗುರಿ ಬೆನ್ನಟ್ಟುವುದು) ಇಲ್ಲಿ ಹೆಚ್ಚು ಸುಲಭ ಎಂದು ಅಂದಾಜಿಸಲಾಗಿದೆ.
ಅಂದರೆ ಇಲ್ಲಿ ಟಾಸ್ ಗೆದ್ದರೆ ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಇದಾಗ್ಯೂ ಮೊದಲು ಬ್ಯಾಟ್ ಮಾಡಿದ ತಂಡವು 26 ಬಾರಿ ಗೆಲುವು ದಾಖಲಿಸಿದೆ ಇತಿಹಾಸವಿದೆ. ಹೀಗಾಗಿ ಟಾಸ್ ಸೋತರೂ ಬೃಹತ್ ಮೊತ್ತ ಪೇರಿಸಲು ಪ್ರಯತ್ನಿಸಬೇಕಾಗುತ್ತದೆ.
ಈ ಪಂದ್ಯಕ್ಕೆ ‘ಬಳಸಿದ ಪಿಚ್’ ನೀಡಲಾಗುತ್ತಿದೆ. ಅಂದರೆ ಈ ಹಿಂದೆ ಪಂದ್ಯಗಳನ್ನಾಡಲಾದ ಪಿಚ್ನಲ್ಲೇ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಇಂತಹ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದ್ದು, ಪಂದ್ಯ ಮುಂದುವರಿದಂತೆ ಪಿಚ್ ನಿಧಾನವಾಗಬಹುದು.
ಇದರ ಸಂಪೂರ್ಣ ಲಾಭವನ್ನು ಸ್ಪಿನ್ನರ್ಗಳು ಪಡೆದುಕೊಳ್ಳಬಹುದು. ಇನ್ನು ದ್ವಿತೀಯ ಇನಿಂಗ್ಸ್ ವೇಳೆ ಇಬ್ಬನಿ ಪ್ರಭಾವ ಬೀರಬಹುದಾದ್ದರಿಂದ ಚೇಸಿಂಗ್ ಮಾಡುವ ತಂಡಕ್ಕೆ ಬ್ಯಾಟಿಂಗ್ ಸುಲಭವಾಗಲಿದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ಈ ಪಂದ್ಯದ ವೇಳೆ ಮಳೆಯಾಗುವ ಮುನ್ಸೂಚನೆ ಇದೆ. ಇದರಿಂದ ದ್ವಿತೀಯ ಇನಿಂಗ್ಸ್ ಆಡುವ ತಂಡಕ್ಕೆ ಡಕ್ವರ್ತ್ ಲೂಯಿಸ್ (DLS) ನಿಯಮ ಅನ್ವಯವಾಗುವ ಸಾಧ್ಯತೆ ಹೆಚ್ಚು.
ಈ ಎಲ್ಲಾ ಕಾರಣಗಳಿಂದಾಗಿ ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ದುಕೊಳ್ಳುವುದು ಸೂಕ್ತ. ಅದರಂತೆ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಯಾರು ಟಾಸ್ ಗೆಲ್ಲಲಿದ್ದಾರೆ? ಯಾರು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಕಾದು ನೋಡಬೇಕಿದೆ.
ಪಾಕಿಸ್ತಾನ್ ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್).
ಇದನ್ನೂ ಓದಿ: ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.