IND vs PAK Weather Update: ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಸಿಕ್ತು ಗುಡ್ ನ್ಯೂಸ್: ಏನದು ನೋಡಿ

Melbourne Weather Forecast: ಮೆಲ್ಬೋರ್ನ್​ ಭಾಗದಲ್ಲಿ ನಿರಂತರ ಮಳೆ ಸುರಿದರೆ ಭಾರತ ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ ಎಂದೇ ಹೇಳಲಾಗಿತ್ತು. ಆದರೀಗ ಗುಡ್ ನ್ಯೂಸ್ ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದೆ.

IND vs PAK Weather Update: ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಸಿಕ್ತು ಗುಡ್ ನ್ಯೂಸ್: ಏನದು ನೋಡಿ
IND vs PAK Weather Report
Follow us
TV9 Web
| Updated By: Vinay Bhat

Updated on:Oct 22, 2022 | 10:09 AM

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ. ಇಡೀ ವಿಶ್ವವೇ ಈ ಪಂದ್ಯ ವೀಕ್ಷಿಸಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ. ಉಭಯ ತಂಡಗಳ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹೀಗಿರುವಾಗ ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಈ ಹಿಂದೆ ಮಳೆಯಿಂದಾಗಿ ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿತ್ತು.

ಯೆಲ್ಲೋ ಅಲರ್ಟ್ ಘೋಷಣೆ:

ಇದನ್ನೂ ಓದಿ
Image
Rohit Sharma: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ
Image
T20 World Cup: ಇಂದಿನಿಂದ ಸೂಪರ್ 12 ಹಂತ: ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮುಖಾಮುಖಿ
Image
T20 World Cup: ಟಿ20 ವಿಶ್ವಕಪ್ 7 ಆವೃತ್ತಿಗಳಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿತ್ತು ಗೊತ್ತಾ?
Image
T20 World Cup 2022: ಅರ್ಹತಾ ಸುತ್ತಿನಲ್ಲಿ ಗೆದ್ದು ಸೂಪರ್- 12 ಸುತ್ತಿಗೆ ಎಂಟ್ರಿಕೊಟ್ಟ 4 ತಂಡಗಳಿವು

ಎರಡು ದಿನಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ 100 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅಲ್ಲಿನ ಹವಾಮಾನ ಇಲಾಖೆ ಎಚ್ಚರಿಸಿತ್ತು. ಫೆಸಿಫಿಕ್ ಮಹಾಸಾಗರದಲ್ಲಿ ಲಾ ನಿನಾ ಶೀತ ಗಾಳಿ ಬೀಸುತ್ತಿದ್ದು, ಇದರಿಂದ ಆಸ್ಟ್ರೇಲಿಯಾದ ಬಹುತೇಕ ಕಡೆ ಮಳೆಯಾಗಲಿದೆ ಎಂದು ವೆದರ್​ ರಿಪೋರ್ಟ್ ತಿಳಿಸಿದೆ. ಮುಖ್ಯವಾಗಿ ಬ್ರಿಸ್ಬೇನ್, ಸಿಡ್ನಿ ಮತ್ತು ಮೆಲ್ಬೋರ್ನ್‌ ಭಾಗದಲ್ಲಿ ಹೆಚ್ಚಿನ ವರ್ಷಧಾರೆಯಾಗಲಿದೆ. ಅದರಲ್ಲೂ ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಭಾಗದಲ್ಲಿ ಶೇ.80 ರಷ್ಟು ಮಳೆಯಾಗಲಿದೆ. ಹೀಗಾಗಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ನಡೆಯುವುದು ಅನುಮಾನ ಎಂದು ಸ್ಕೈ ನ್ಯೂಸ್ ಹವಾಮಾನಶಾಸ್ತ್ರಜ್ಞ ರಾಬ್ ಶಾರ್ಪ್ ತಿಳಿಸಿದ್ದರು. ಅಲ್ಲದೆ ಎರಡು ದಿನಗಳ ಹಿಂದೆ ಆಸ್ಟ್ರೇಲಿಯಾದ MET ಇಲಾಖೆಯು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿತ್ತು.

ಮೆಲ್ಬೋರ್ನ್​ ಭಾಗದಲ್ಲಿ ನಿರಂತರ ಮಳೆ ಸುರಿದರೆ ಭಾರತ ಪಾಕಿಸ್ತಾನ ಪಂದ್ಯ ನಡೆಯುವುದು ಅನುಮಾನ ಎಂದೇ ಹೇಳಲಾಗಿತ್ತು. ಆದರೀಗ ಗುಡ್ ನ್ಯೂಸ್ ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದೆ. ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ. ಹೀಗಾಗಿ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಯಂ ಹೊರಗಡೆ ಅಭಿಮಾನಿಗಳು ಸಂಭ್ರಮಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಮಳೆ ಬಂದರೆ ಏನುಗತಿ?:

ಭಾರತ ಹಾಗೂ ಪಾಕಿಸ್ತಾನ ನಡುವಣ ಕದನಕ್ಕೆ ಮಳೆ ಅಡ್ಡಿಯಾದರೆ ಪಂದ್ಯವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಒಂದು ವೇಳೆ ಪಂದ್ಯ ನಡೆಸಲು ಅವಕಾಶವಿದ್ದರೆ ಭಾರತೀಯ ಕಾಲಮಾನ ಸಂಜೆ 4.30 ತನಕ ಕಾದು ನೋಡಬಹುದು. ಇದರ ನಡುವೆ ಮಳೆ ನಿಂತರೆ ಓವರ್​ ಕಡಿತದೊಂದಿಗೆ ಪಂದ್ಯವನ್ನು ಶುರು ಮಾಡಬಹುದು. ಇನ್ನು ಪಂದ್ಯ ನಡೆಸಲು ಕಟ್​ ಆಫ್​ ಟೈಮ್ ನಿಗದಿತ ಪಡಿಸಿದ ಬಳಿಕ ಮಳೆ ನಿಂತರೆ ಉಭಯ ತಂಡಗಳಿಗೂ ತಲಾ 5 ಓವರ್​ಗಳ ಪಂದ್ಯವನ್ನು ನಡೆಸಬಹುದು. ಒಂದುವೇಳೆ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ. ಯಾವುದೇ ಮೀಸಲು ದಿನ ಇರುವುದಿಲ್ಲ.

ರೋಹಿತ್ ಶರ್ಮಾ ಸುದ್ದಿಗೋಷ್ಠಿ:

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂದು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದು ಕೆಲ ವಿಚಾರಗಳಲ್ಲಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಯಾವುದೇ ಮಹತ್ವದ ಪಂದ್ಯ ನಡೆಯುವ ಮುನ್ನ ಆ ತಂಡದ ನಾಯಕರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ತಂಡದ ಸ್ಥಿತಿ-ಗತಿ ಬಗ್ಗೆ ಕೆಲ ಮಾಹಿತಿಯನ್ನು ಹಂಚಿಕೊಳ್ಳುವುದು ವಾಡಿಕೆ. ಅದರಂತೆ ಇಂದು ಬೆಳಗ್ಗೆ ರೋಹಿತ್ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯವಾಗಿ ಇಲ್ಲಿ ರೋಹಿತ್ ಶರ್ಮಾಗೆ ಪ್ಲೇಯಿಂಗ್ ಇಲೆವೆನ್ ಕುರಿತ ಪ್ರಶ್ನೆಗಳು ಎದುರಾಗಲಿದೆ. ರಿಷಭ್ ಪಂತ್​ಗೆ ಸ್ಥಾನ ಇದೆಯೇ?, ಭಾರತದ ಎರಡನೇ ಸ್ಪಿನ್ನರ್ ಯಾರು?, ಮೊಹಮ್ಮದ್ ಶಮಿ ಫುಲ್ ಫಿಟ್ ಆಗಿದ್ದಾರಾ? ಹೀಗೆ ಕೆಲ ಅಗತ್ಯ ಪ್ರಶ್ನೆಗಳಿಗೆ ರೋಹಿತ್ ಉತ್ತರಿಸಲಿದ್ದಾರೆ.

Published On - 9:49 am, Sat, 22 October 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್