Women’s T20 World Cup: ಭಾರತ- ಪಾಕ್ ನಡುವೆ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ?
India vs Pakistan Women's T20 World Cup 2026: 10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಹೈವೋಲ್ಟೇಜ್ ಭಾರತ vs ಪಾಕಿಸ್ತಾನ ಪಂದ್ಯ ಜೂನ್ 14 ರಂದು ನಡೆಯಲಿದೆ. ಈ ಉಭಯ ತಂಡಗಳ ಮೊದಲ ಪಂದ್ಯ ಇದಾಗಿದ್ದು, ಭಾರತ ಗೆಲುವಿನ ಫೇವರಿಟ್ ಎನಿಸಿದೆ. ಭಾರತೀಯ ಮಹಿಳಾ ತಂಡ ಪಾಕಿಸ್ತಾನದ ವಿರುದ್ಧದ ಮುಖಾಮುಖಿ ದಾಖಲೆಯಲ್ಲಿ ಪ್ರಾಬಲ್ಯ ಸಾಧಿಸಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ (Women’s T20 World Cup) ಅದ್ಧೂರಿ ಚಾಲನೆ ಸಿಕ್ಕಿದೆ. ಲೀಗ್ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್, ಶ್ರೀಲಂಕಾ ತಂಡವನ್ನು 87 ರನ್ಗಳಿಂದ ಮಣಿಸಿ ಗೆಲುವಿನ ಶುಭಾರಂಭ ಮಾಡಿದೆ. ಇದೀಗ ಈ ಪಂದ್ಯಾವಳಿಯ ಹೈವೋಲ್ಟೇಜ್ ಕದನ ಭಾರತ ಹಾಗೂ ಪಾಕಿಸ್ತಾನದ (India vs Pakistan Women) ನಡುವೆ ಭಾನುವಾರದಂದು ಅಂದರೆ ಜೂನ್ 14 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಸಕಲ ತಯಾರಿ ಮಾಡಿಕೊಂಡಿವೆ. ಈ ಲೀಗ್ನಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಆರಂಭಿಸುವ ಇರಾದೆಯಲ್ಲಿವೆ. ಟೀಂ ಇಂಡಿಯಾಕ್ಕೆ ಹೋಲಿಸಿಕೊಂಡರೆ, ಪಾಕಿಸ್ತಾನ ಅಷ್ಟು ಬಲಿಷ್ಠವಾಗಿರದ ಕಾರಣ, ಈ ಪಂದ್ಯದಲ್ಲಿ ಭಾರತವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.
ಮುಖಾಮುಖಿ ದಾಖಲೆ
ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ಮುಖಾಮುಖಿಯಲ್ಲಿ ಭಾರತ ತಂಡ ಪ್ರಾಬಲ್ಯ ಸಾಧಿಸಿದೆ. ಆದಾಗ್ಯೂ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಎಂದಿಗೂ ಟಿ20 ಸರಣಿಯನ್ನು ಆಡಿಲ್ಲ. ಆದರೆ ಈ ಎರಡೂ ತಂಡಗಳು ಐಸಿಸಿ ಟೂರ್ನಿಗಳು, ಏಷ್ಯಾಕಪ್ ಮತ್ತು ಏಷ್ಯನ್ ಗೇಮ್ಸ್ ಅಥವಾ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ. ಇಲ್ಲಿಯವರೆಗೆ, ಈ ಎರಡೂ ತಂಡಗಳು 16 ಪಂದ್ಯಗಳನ್ನು ಆಡಿದ್ದು, ಇವುಗಳಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ.
ಟಿ20 ವಿಶ್ವಕಪ್‌ನಲ್ಲಿ ಪ್ರದರ್ಶನ
ಇಲ್ಲಿಯವರೆಗೆ, ಟಿ20 ವಿಶ್ವಕಪ್‌ನಲ್ಲಿ ಈ ಎರಡೂ ತಂಡಗಳ ನಡುವೆ 8 ಪಂದ್ಯಗಳು ನಡೆದಿವೆ. ಈ ಪೈಕಿ 6 ಪಂದ್ಯಗಳಲ್ಲಿ ಭಾರತ ಗೆದ್ದಿದ್ದರೆ, ಪಾಕಿಸ್ತಾನ ಕೇವಲ ಎರಡು ಪಂದ್ಯಗಳನ್ನು ಗೆದ್ದಿದೆ. ಈಗ, ಈ ಎರಡೂ ತಂಡಗಳು ಒಂಬತ್ತನೇ ಬಾರಿಗೆ ಮುಖಾಮುಖಿಯಾಗಲಿವೆ. ಕೊನೆಯ ಬಾರಿಗೆ ಎರಡೂ ತಂಡಗಳು 2024 ರ ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತ್ತು.
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಜೂನ್ 14 ರಂದು ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಹಾಗೂ ಪಾಕಿಸ್ತಾನ ಮಹಿಳಾ ತಂಡಗಳ ಟಿ20 ವಿಶ್ವಕಪ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ನಲ್ಲೂ ಲೈವ್ ಸ್ಟ್ರೀಮಿಂಗ್ ಲಭ್ಯವಿದೆ.
Womens T20 World Cup 2026: ಮಹಿಳಾ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ
ಉಭಯ ತಂಡಗಳು
ಭಾರತ ಟಿ20 ವಿಶ್ವಕಪ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೀ ಚರಣಿ, ಯಾಸ್ತಿಕಾ ಭಾಟಿಯಾ, ನಂದನಿ ಶರ್ಮಾ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್.
ಪಾಕಿಸ್ತಾನ ಟಿ20 ವಿಶ್ವಕಪ್ ತಂಡ: ಫಾತಿಮಾ ಸನಾ (ನಾಯಕಿ), ಗುಲ್ ಫಿರೋಜಾ, ಆಯೇಶಾ ಜಾಫರ್, ಇರಾಮ್ ಜಾವೇದ್, ಐಮನ್ ಫಾತಿಮಾ, ಅಲಿಯಾ ರಿಯಾಜ್, ನತಾಲಿಯಾ ಪರ್ವೈಜ್, ಸೈರಾ ಜಬೀನ್, ಮುನೀಬಾ ಅಲಿ, ತುಬಾ ಹಸನ್, ರಮೀನ್ ಶಮೀಮ್, ಸಾದಿಯಾ ಇಕ್ಬಾಲ್, ನಶ್ರಾ ಸಂಧು, ಡಯಾನಾ ಬೇಗ್, ತಸ್ಮಿಯಾ ರುಬಾಬ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:10 pm, Sat, 13 June 26




