IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿ: ಹೈವೋಲ್ಟೇಜ್ ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ

India vs Pakistan Women's T20 World Cup 2024: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಸೆಣಸಲಿದೆ. ಉಭಯ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಭಾರತ ತಂಡವು ಒಟ್ಟು 12 ಪಂದ್ಯಗಳನ್ನು ಗೆದ್ದುಕೊಂಡಿದೆ. ಹೀಗಾಗಿ ಈ ಬಾರಿ ಕೂಡ ಪಾಕ್ ವಿರುದ್ಧ ಭಾರತ ತಂಡ ಗೆಲ್ಲುವ ವಿಶ್ವಾಸದಲ್ಲಿದೆ.

IND vs PAK: ಭಾರತ vs ಪಾಕಿಸ್ತಾನ್ ಮುಖಾಮುಖಿ: ಹೈವೋಲ್ಟೇಜ್ ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ
India vs Pakistan
Follow us
ಝಾಹಿರ್ ಯೂಸುಫ್
|

Updated on: Oct 05, 2024 | 6:13 PM

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿರುವುದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಎಂಬುದು ವಿಶೇಷ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯ ಸಾಧಿಸಿದರೆ, ಇತ್ತ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಸೋಲನುಭವಿಸಿದೆ. ಹೀಗಾಗಿ ಎರಡನೇ ಪಂದ್ಯವು  ಭಾರತದ ಪಾಲಿಗೆ ತುಂಬಾ ಮಹತ್ವದ್ದು.

ಅದರಲ್ಲೂ ಪಾಕ್ ಪಡೆಯನ್ನು ಬಗ್ಗು ಬಡಿಯುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಟಿ20 ಇತಿಹಾಸದಲ್ಲಿ ಭಾರತ ಮಹಿಳಾ ತಂಡವು ಪಾಕ್ ವಿರುದ್ಧ ಮೂರು ಬಾರಿ ಮಾತ್ರ ಸೋತಿದೆ. ಇನ್ನುಳಿದ 12 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಹೀಗಾಗಿ ಈ ಬಾರಿ ಕೂಡ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ಅದರಲ್ಲೂ ಕೊನೆಯ 5 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ಗೆದ್ದಿರುವುದು ಕೇವಲ ಒಂದು ಮ್ಯಾಚ್​ನಲ್ಲಿ ಮಾತ್ರ. ಹೀಗಾಗಿಯೇ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲೂ ಭಾರತ ತಂಡ ಗೆಲುವನ್ನು ಎದುರು ನೋಡಬಹುದು.

ಭಾರತ vs ಪಾಕಿಸ್ತಾನ್ ಕೊನೆಯ 5 ಪಂದ್ಯಗಳ ಫಲಿತಾಂಶ:

  • 2024 – ಟೀಮ್ ಇಂಡಿಯಾಗೆ 7 ವಿಕೆಟ್‌ಗಳ ಜಯ
  • 2023 – ಭಾರತ ತಂಡಕ್ಕೆ 7 ವಿಕೆಟ್‌ಗಳ ಜಯ
  • 2022 – ಪಾಕಿಸ್ತಾನ್ ತಂಡಕ್ಕೆ 13 ರನ್‌ಗಳ ಜಯ
  • 2022 – ಟೀಮ್ ಇಂಡಿಯಾಗೆ 8 ವಿಕೆಟ್‌ಗಳ ಜಯ
  • 2018 – ಭಾರತ ತಂಡಕ್ಕೆ 7 ವಿಕೆಟ್‌ಗಳ ಜಯ

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 3.30 ರಿಂದ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ-ಹಾಟ್​ ಸ್ಟಾರ್ ಆ್ಯಪ್​ನಲ್ಲೂ ಉಚಿತ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಇದನ್ನೂ ಓದಿ: IPL 2025: ಐಪಿಎಲ್ ಫ್ರಾಂಚೈಸಿಗಳ ಚಿಂತೆ ಹೆಚ್ಚಿಸಿದ ಹೊಸ ರೂಲ್ಸ್

ಪಾಕಿಸ್ತಾನ್ ತಂಡ: ಫಾತಿಮಾ ಸನಾ (ನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಗುಲ್ ಫಿರೋಜಾ, ಇರಾಮ್ ಜಾವೇದ್, ಮುನೀಬಾ ಅಲಿ, ನಶ್ರಾ ಸುಂಧು, ನಿದಾ ದಾರ್, ಒಮೈಮಾ ಸೊಹೈಲ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಸಿದ್ರಾ ಅಮೀನ್, ಸೈಯದಾ ಅರೂಬ್ ಶಾ , ತಸ್ಮಿಯಾ ರುಬಾಬ್, ತುಬಾ ಹಸನ್.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ