ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗುತ್ತಿರುವುದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಎಂಬುದು ವಿಶೇಷ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯ ಸಾಧಿಸಿದರೆ, ಇತ್ತ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಸೋಲನುಭವಿಸಿದೆ. ಹೀಗಾಗಿ ಎರಡನೇ ಪಂದ್ಯವು ಭಾರತದ ಪಾಲಿಗೆ ತುಂಬಾ ಮಹತ್ವದ್ದು.
ಅದರಲ್ಲೂ ಪಾಕ್ ಪಡೆಯನ್ನು ಬಗ್ಗು ಬಡಿಯುವ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಟಿ20 ಇತಿಹಾಸದಲ್ಲಿ ಭಾರತ ಮಹಿಳಾ ತಂಡವು ಪಾಕ್ ವಿರುದ್ಧ ಮೂರು ಬಾರಿ ಮಾತ್ರ ಸೋತಿದೆ. ಇನ್ನುಳಿದ 12 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಹೀಗಾಗಿ ಈ ಬಾರಿ ಕೂಡ ಭಾರತ ತಂಡವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.
ಅದರಲ್ಲೂ ಕೊನೆಯ 5 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ಗೆದ್ದಿರುವುದು ಕೇವಲ ಒಂದು ಮ್ಯಾಚ್ನಲ್ಲಿ ಮಾತ್ರ. ಹೀಗಾಗಿಯೇ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲೂ ಭಾರತ ತಂಡ ಗೆಲುವನ್ನು ಎದುರು ನೋಡಬಹುದು.
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 3.30 ರಿಂದ ಶುರುವಾಗಲಿದೆ.
ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ-ಹಾಟ್ ಸ್ಟಾರ್ ಆ್ಯಪ್ನಲ್ಲೂ ಉಚಿತ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ಇದನ್ನೂ ಓದಿ: IPL 2025: ಐಪಿಎಲ್ ಫ್ರಾಂಚೈಸಿಗಳ ಚಿಂತೆ ಹೆಚ್ಚಿಸಿದ ಹೊಸ ರೂಲ್ಸ್
ಪಾಕಿಸ್ತಾನ್ ತಂಡ: ಫಾತಿಮಾ ಸನಾ (ನಾಯಕಿ), ಅಲಿಯಾ ರಿಯಾಜ್, ಡಯಾನಾ ಬೇಗ್, ಗುಲ್ ಫಿರೋಜಾ, ಇರಾಮ್ ಜಾವೇದ್, ಮುನೀಬಾ ಅಲಿ, ನಶ್ರಾ ಸುಂಧು, ನಿದಾ ದಾರ್, ಒಮೈಮಾ ಸೊಹೈಲ್, ಸದಾಫ್ ಶಮಾಸ್, ಸಾದಿಯಾ ಇಕ್ಬಾಲ್, ಸಿದ್ರಾ ಅಮೀನ್, ಸೈಯದಾ ಅರೂಬ್ ಶಾ , ತಸ್ಮಿಯಾ ರುಬಾಬ್, ತುಬಾ ಹಸನ್.