AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2025: ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ; ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?

India vs Pakistan Women's World Cup 2025: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 5, 2025 ರಂದು ಕೊಲಂಬೊದಲ್ಲಿ ನಡೆಯಲಿದೆ. ಭಾರತ ಪಾಕಿಸ್ತಾನದ ವಿರುದ್ಧ ಅಜೇಯ ದಾಖಲೆ ಹೊಂದಿದ್ದು, ಎಲ್ಲಾ 11 ಏಕದಿನ ಪಂದ್ಯಗಳನ್ನು ಗೆದ್ದಿದೆ. ಪಂದ್ಯ ಮಧ್ಯಾಹ್ನ 3ಕ್ಕೆ ಆರಂಭವಾಗಲಿದೆ. ಲೈವ್ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಸಿನಿಮಾದಲ್ಲಿ ವೀಕ್ಷಿಸಬಹುದು. ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

ODI World Cup 2025: ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ; ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?
Ind W Vs Pak W
ಪೃಥ್ವಿಶಂಕರ
|

Updated on: Oct 04, 2025 | 8:23 PM

Share

2025 ರ ಏಷ್ಯಾಕಪ್‌ನಲ್ಲಿ ಭಾರತ ಪುರುಷರ ತಂಡ ಪಾಕಿಸ್ತಾನವನ್ನು ಸೋಲಿಸಿ ಒಂಬತ್ತನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಇದೀಗ ಪಾಕಿಸ್ತಾನ ಮತ್ತೊಮ್ಮೆ ಭಾರತ (India vs Pakistan) ತಂಡವನ್ನು ಎದುರಿಸಲಿದ್ದು, ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್​​ನಲ್ಲಿ (Women’s World Cup 2025) ಪರಸ್ಪರ ಮುಖಾಮುಖಿಯಾಗುತ್ತಿವೆ. ಪಾಕಿಸ್ತಾನ ತಂಡ ಭಾರತಕ್ಕೆ ಬದರ ಕಾರಣ ಉಭಯ ತಂಡಗಳು ಶ್ರೀಲಂಕಾದ ಕೊಲಂಬೊದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಭಾರತ ತಂಡ, ಶ್ರೀಲಂಕಾವನ್ನು ಮಣಿಸುವ ಮೂಲಕ ಗೆಲುವಿನ ಆರಂಭ ಪಡೆದರೆ, ಇತ್ತ ಪಾಕಿಸ್ತಾನ, ಬಾಂಗ್ಲಾದೇಶ ವಿರುದ್ಧ ಹೀನಾಯವಾಗಿ ಸೋಲನುಭವಿಸಿ, ಸೋಲಿನ ಆರಂಭ ಪಡೆದುಕೊಂಡಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದಲ್ಲಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ಮುಖಾಮುಖಿ ದಾಖಲೆ ಹೇಗಿದೆ?

ಭಾರತ ಮಹಿಳಾ ತಂಡವು ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಎಂದಿಗೂ ಸೋತಿಲ್ಲ. ಇದೀಗ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಈ ಇತಿಹಾಸವನ್ನು ಪುನರಾವರ್ತಿಸಲು ಟೀಂ ಇಂಡಿಯಾ ಪ್ರಯತ್ನಿಸುತ್ತಿದೆ. ಇಲ್ಲಿಯವರೆಗೆ, ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳ ನಡುವೆ 11 ಏಕದಿನ ಪಂದ್ಯಗಳು ನಡೆದಿದ್ದು, ಭಾರತ ತಂಡವು ಎಲ್ಲವನ್ನೂ ಗೆದ್ದಿದೆ. ವಿಶ್ವಕಪ್‌ನಲ್ಲಿ ಎರಡೂ ತಂಡಗಳು ನಾಲ್ಕು ಬಾರಿ ಪರಸ್ಪರ ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ ಎಲ್ಲವನ್ನೂ ಗೆದ್ದಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಏಕದಿನ ವಿಶ್ವಕಪ್‌ನ ಆರನೇ ಪಂದ್ಯ ಯಾವಾಗ ನಡೆಯಲಿದೆ?

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಆರನೇ ಪಂದ್ಯ ಅಕ್ಟೋಬರ್ 5 ರ ಭಾನುವಾರ ನಡೆಯಲಿದೆ.

ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ- ಪಾಕಿಸ್ತಾನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಭಾರತ-ಪಾಕಿಸ್ತಾನ ನಡುವಿ ವಿಶ್ವಕಪ್ ಪಂದ್ಯ ಶ್ರೀಲಂಕಾದ ಯಾವ ಮೈದಾನದಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವನ್ನು ಯಾವ ಟಿವಿ ಚಾನೆಲ್ ಪ್ರಸಾರ ಮಾಡುತ್ತದೆ?

ಮಹಿಳಾ ವಿಶ್ವಕಪ್‌ನ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದೆ. ನೀವು ಸ್ಟಾರ್ ಸ್ಪೋರ್ಟ್ಸ್‌ನ ಪ್ರತ್ಯೇಕ ಚಾನೆಲ್‌ಗಳಾದ ಸ್ಟಾರ್ ಸ್ಪೋರ್ಟ್ಸ್ 1/HD ಮತ್ತು ಸ್ಟಾರ್ ಸ್ಪೋರ್ಟ್ಸ್ ಹಿಂದಿ/HD ಗಳಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವನ್ನು ಆನ್‌ಲೈನ್‌ನಲ್ಲಿ ಯಾವ ವೇದಿಕೆಯಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ?

ಅಕ್ಟೋಬರ್ 5 ರ ಭಾನುವಾರದಂದು ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು JIOHotstar ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ನೋಡಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ