India vs Pakistan: ಮಳೆಯಿಂದ ಭಾರತ- ಪಾಕ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ?

IND vs PAK Weather report: ಒಂದು ವೇಳೆ ಈ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಬಂದರೆ, ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಂದರೆ ವಿಜೇತರು ಯಾರಾಗಲಿದ್ದಾರೆ ಎಂಬುದು ಕ್ರಿಕೆಟ್ ಅಭಿಮಾನಿಗಳ ಪ್ರಶ್ನೆಯಾಗಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

India vs Pakistan: ಮಳೆಯಿಂದ ಭಾರತ- ಪಾಕ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ?
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Oct 14, 2023 | 6:38 AM

ರೋಹಿತ್ ಶರ್ಮಾ (Rohit Sharma) ನಾಯಕತ್ವದ ಟೀಂ ಇಂಡಿಯಾ 2023 ರ ಐಸಿಸಿ ಏಕದಿನ ವಿಶ್ವಕಪ್‌ನ (ICC World Cup 2023) 11 ನೇ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಕದನದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗುತ್ತಿವೆ. ಹೀಗಾಗಿ ಪಂದ್ಯ ರೋಚಕತೆಯಿಂದ ಕೂಡಿರುವುದಂತೂ ಖಚಿತ. ಏಕೆಂದರೆ ಟೀಂ ಇಂಡಿಯಾದಂತೆ (Team India) ಪಾಕಿಸ್ತಾನ ತಂಡ ಕೂಡ ಸತತ 2 ಪಂದ್ಯಗಳನ್ನು ಗೆದ್ದಿದೆ. ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನವನ್ನು ಸೋಲಿಸಿದರೆ, ನೆದರ್ಲೆಂಡ್ಸ್ ಮತ್ತು ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಗೆದ್ದು ಬೀಗಿದೆ. ಈ ಬಿಗ್ ಮ್ಯಾಚ್ ನಡೆಯುವ ದಿನದಂದು ಅಹಮದಾಬಾದ್​ನಲ್ಲಿ ಹವಾಮಾನ ಹೇಗಿರುತ್ತದೆ? ಒಂದು ವೇಳೆ ಮಳೆ ಬಂದರೆ ಪಂದ್ಯ ವಿಜೇತರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ? ಪಂದ್ಯಕ್ಕೆ ಮೀಸಲು ದಿನವಿದೆಯೇ? ಎಂಬುದರ ಪೂರ್ಣ ವಿವರ ಇಲ್ಲಿದೆ.

ಸಂಗೀತ ಕಾರ್ಯಕ್ರಮ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಟಾಸ್ ಮಧ್ಯಾಹ್ನ 1:30 ಕ್ಕೆ ನಡೆಯಲಿದೆ. ಇದಕ್ಕೂ ಒಂದು ಗಂಟೆ ಮೊದಲು ಅಂದರೆ 12.30ಕ್ಕೆ ಸಂಗೀತ ಕಾರ್ಯಕ್ರಮ ಆರಂಭವಾಗಲಿದೆ. ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯುವ ಈ ಪಂದ್ಯಕ್ಕೂ ಮುನ್ನ ಈ ವರ್ಣರಂಜಿತ ಕಾರ್ಯಕ್ರಮ ನಡೆಯಲಿದ್ದು, ಅರಿಜಿತ್ ಸಿಂಗ್, ನೇಹಾ ಕಕ್ಕರ್, ಶಂಕರ್ ಮಹದೇವನ್ ಸೇರಿದಂತೆ ಹಲವು ತಾರೆಯರು ಪ್ರದರ್ಶನ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಪ್ರೇಕ್ಷಕರಿಗಾಗಿ ಕ್ರೀಡಾಂಗಣದ ಗೇಟ್‌ಗಳು ತೆರೆಯಲಿದೆ.

IND vs PAK, ICC World Cup: ವಿಶ್ವಕಪ್​ನಲ್ಲಿಂದು ಭಾರತ-ಪಾಕಿಸ್ತಾನ ಸೆಣೆಸಾಟ: ಹೈವೋಲ್ಟೇಜ್ ಪಂದ್ಯಕ್ಕೆ ಮೋದಿ ಸ್ಟೇಡಿಯಂ ಸಜ್ಜು

ಮಳೆಯ ಸಾಧ್ಯತೆಯು ತುಂಬಾ ಕಡಿಮೆ

ಹವಾಮಾನ ವರದಿಯ ಪ್ರಕಾರ, ಅಹಮದಾಬಾದ್‌ನಲ್ಲಿ ಬೆಳಿಗ್ಗೆ 10 ರ ಸುಮಾರಿಗೆ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಇರುತ್ತದೆ. 45ರಷ್ಟು ಆರ್ದ್ರತೆ ಇರಲಿದ್ದು, ಗಂಟೆಗೆ 5 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಈ ವೇಳೆ ತಾಪಮಾನ ಸ್ವಲ್ಪಮಟ್ಟಿಗೆ ಇಳಿಕೆಯಾಗಲಿದ್ದು, ಆರ್ದ್ರತೆ ಶೇ.58ರಷ್ಟಿರುವುದು ಅಭಿಮಾನಿಗಳಿಗೆ ಸಂತಸದ ಸುದ್ದಿಯಾಗಿದೆ. ಸಮಯ ಕಳೆದಂತೆ ಹವಾಮಾನವು ತಂಪಾಗಿರಲ್ಲಿದ್ದು, ಮೋಡ ಕವಿದ ವಾತಾವರಣವಿರುತ್ತದೆ. ಆದರೆ ಮಳೆಯ ಸಾಧ್ಯತೆಯು ತುಂಬಾ ಕಡಿಮೆ ಇರುತ್ತದೆ. ಹೀಗಾಗಿ ಅಭಿಮಾನಿಗಳು ಆತಂಕವಿಲ್ಲದೆ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಆದರೆ ಒಂದು ವೇಳೆ ಈ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಬಂದರೆ, ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಂದರೆ ವಿಜೇತರು ಯಾರಾಗಲಿದ್ದಾರೆ ಎಂಬುದು ಕ್ರಿಕೆಟ್ ಅಭಿಮಾನಿಗಳ ಪ್ರಶ್ನೆಯಾಗಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

ಪಂದ್ಯ ರದ್ದಾದರೆ ವಿಜೇತರು ಯಾರು?

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಯಾವುದೇ ಮೀಸಲು ದಿನವಿಲ್ಲ. ಹೀಗಾಗಿ ಪಂದ್ಯದ ಫಲಿತಾಂಶ ಮುಖ್ಯ ದಿನವೇ ನಿರ್ಧಾರವಾಗಲಿದೆ. ಆದರೆ ಮಳೆಯಿಂದಾಗಿ ಮುಖ್ಯ ದಿನದಂದು ಪಂದ್ಯವನ್ನು ಆಡದಿದ್ದರೆ ಅಥವಾ ಪಂದ್ಯವನ್ನು ರದ್ದುಗೊಳಿಸಿದರೆ ಯಾವ ತಂಡವನ್ನು ವಿಜಯಿ ಎಂದು ಘೋಷಿಸುವುದಿಲ್ಲ. ಬದಲಿಗೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ಹಂಚಲಾಗುತ್ತದೆ. ಆದರೆ ಫೈನಲ್​ಗೇರುವ ದೃಷ್ಟಿಯಿಂದ ಎರಡೂ ತಂಡಗಳಿಗೂ ಈ ಪಂದ್ಯ ನಡೆಯುವುದು ಮುಖ್ಯವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 am, Sat, 14 October 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು