ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಾಳೆ ಅಂದರೆ, ಡಿಸೆಂಬರ್ 17 ರಿಂದ ಜೋಹಾನ್ಸ್‌ಬರ್ಗ್‌ನ ಝೀಲ್ಯಾಂಡ್ ಸ್ಟೇಡಿಯಂ ವಾಂಡರರ್ಸ್ ಸ್ಟೇಡಿಯಂನಲ್ಲಿ (New Wanderers in Johannesburg) ನಡೆಯಲಿದೆ. ಟಿ20 ಸರಣಿಯನ್ನು 1-1 ರಿಂದ ಸಮಬಲಗೊಳಿಸಿದ ಟೀಂ ಇಂಡಿಯಾ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಎದುರು ನೋಡುತ್ತಿದೆ. ಇನ್ನು ಟಿ20 ಸರಣಿಯಲ್ಲಿ ಹೊಸ ಮುಖಗಳಿಗೆ ಹೆಚ್ಚಿನ ಆಧ್ಯತೆ ನೀಡಿದ್ದ ಆಯ್ಕೆ ಮಂಡಳಿ, ಏಕದಿನ ಸರಣಿಗೂ ಅದೇ ಕೆಲಸವನ್ನು ಮುಂದುವರೆಸಿದೆ. ಹೀಗಾಗಿ ಈ ಸರಣಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯಂತಹ ಸ್ಟಾರ್ ಆಟಗಾರರು ಆಡುತ್ತಿಲ್ಲ. ಅದರಂತೆ ತಂಡದ ನಾಯಕತ್ವವನ್ನು ಕನ್ನಡಿಗ ಕೆಎಲ್ ರಾಹುಲ್ಗೆ (KL Rahul) ಹಸ್ತಾಂತರಿಸಲಾಗಿದ್ದು, ಹರಿಣಗಳ ನಾಡಲ್ಲಿ ರಾಹುಲ್ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದು ಕೌತುಕ ಹೆಚ್ಚಿಸಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇದುವರೆಗೆ 91 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಈ ಪೈಕಿ ಭಾರತ ಕೇವಲ 38ರಲ್ಲಿ ಗೆದ್ದಿದ್ದರೆ, 50ರಲ್ಲಿ ಸೋಲು ಅನುಭವಿಸಿದೆ. ಇಬ್ಬರ ನಡುವೆ ಇದುವರೆಗೆ 6 ದ್ವಿಪಕ್ಷೀಯ ಸರಣಿಗಳು ನಡೆದಿದ್ದು, ಅದರಲ್ಲಿ ಭಾರತ ಒಂದನ್ನು ಮಾತ್ರ ಗೆದ್ದಿದ್ದರೆ, ಉಳಿದ ಐದರಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದೆ. ಫೆಬ್ರವರಿ 2018 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಏಕದಿನ ಸರಣಿಯನ್ನು ಗೆದ್ದುಕೊಂಡಿತ್ತು.
IND vs SA: ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ್ ಚಹರ್; ಆರ್ಸಿಬಿ ಹುಲಿಗೆ ಒಲಿದ ಅದೃಷ್ಟ..!
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಡಿಸೆಂಬರ್ 17 ರ ಭಾನುವಾರದಂದು ನಡೆಯಲ್ಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಜೋಹಾನ್ಸ್‌ಬರ್ಗ್‌ನ ಝೀಲ್ಯಾಂಡ್ ಸ್ಟೇಡಿಯಂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದ ನೇರಪ್ರಸಾರ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಇರಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ+ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಬಹುದಾಗಿದೆ.
ಭಾರತ: ಕೆಎಲ್ ರಾಹುಲ್ (ನಾಯಕ, ವಿಕೆಟ್‌ಕೀಪರ್), ರುತುರಾಜ್ ಗಾಯಕ್‌ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಅಕ್ಷರ್ ಪಟೇಲ್ , ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್‌ರಾಮ್ (ನಾಯಕ), ಒಟ್ನಿಯಲ್ ಬಾರ್ಟ್‌ಮನ್, ನಾಂಡ್ರೆ ಬರ್ಗರ್, ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮಲ್ಡರ್ , ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ, ಲಿಜಾಡ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ