IND vs SA: ಭಾರತ-ಸೌತ್ ಆಫ್ರಿಕಾ ಮೊದಲ ಏಕದಿನ ಪಂದ್ಯಕ್ಕೆ ಮಳೆ ಭೀತಿ..!
India vs South Africa, 1st ODI: ಡರ್ಬನ್ನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಇನ್ನು ಗೆಬ್ಬೆಗಾದಲ್ಲಿ ನಡೆದ 2ನೇ ಟಿ20 ಪಂದ್ಯದ ವೇಳೆ ಮಳೆ ಅಡ್ಡಿಪಡಿಸಿದ ಕಾರಣ ಓವರ್ಗಳ ಕಡಿತದೊಂದಿಗೆ ಮ್ಯಾಚ್ ಅನ್ನು ಪೂರ್ಣಗೊಳಿಸಲಾಗಿತ್ತು. ಇದೀಗ ಏಕದಿನ ಸರಣಿಯ ಮೊದಲ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.
ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಏಕದಿನ ಸರಣಿಯು ಇಂದಿನಿಂದ (ಡಿ.17) ಶುರುವಾಗಲಿದೆ. ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ವರದಿ ಪ್ರಕಾರ, ಭಾನುವಾರ ಜೋಹಾನ್ಸ್ಬರ್ಗ್ನ ಸುತ್ತ ಮುತ್ತ ಮಳೆಯಾಗಲಿದೆ. ಹೀಗಾಗಿ ಮೊದಲ ಏಕದಿನ ಪಂದ್ಯಕ್ಕೆ ಅಡಚಣೆಯುಂಟಾಗಬಹುದು.
ಜೋಹಾನ್ಸ್‌ಬರ್ಗ್‌ನಲ್ಲಿ ಬೆಳಿಗ್ಗೆ ಗುಡುಗು ಸಹಿತ ಬಿರುಗಾಳಿ ಇರಲಿದೆ. ಅಲ್ಲದೆ ಸ್ಥಳೀಯ ಸಮಯ ಬೆಳಿಗ್ಗೆ 6 ಗಂಟೆಯಿಂದ 8 ಗಂಟೆ ನಡುವೆ 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಆದರೆ ಮಧ್ಯಾಹ್ನದ ಹೊತ್ತಿಗೆ ಪರಿಸ್ಥಿತಿ ತಿಳಿಗೊಳ್ಳಲಿದ್ದು, 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೂ ಮ್ಯಾಚ್ ನಡೆಯುವುದು ಖಚಿತ ಎನ್ನಬಹುದು.
ಒಂದು ವೇಳೆ ಮಳೆಯಿಂದಾಗಿ ಪಂದ್ಯ ಆರಂಭವಾಗಲು ವಿಳಂಬವಾದರೆ ಓವರ್ಗಳ ಕಡಿತದೊಂದಿಗೆ ಮ್ಯಾಚ್ ನಡೆಯಲಿದೆ. ಅಂದರೆ ಫಲಿತಾಂಶ ನಿರ್ಧರಿಸಲು ತಲಾ ಕನಿಷ್ಠ 20 ಓವರ್ಗಳ ಪಂದ್ಯವನ್ನು ನಿರೀಕ್ಷಿಸಬಹುದು.
ಇದಕ್ಕೂ ಮುನ್ನ ಡರ್ಬನ್ನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಇನ್ನು ಗೆಬ್ಬೆಗಾದಲ್ಲಿ ನಡೆದ 2ನೇ ಟಿ20 ಪಂದ್ಯದ ವೇಳೆ ಮಳೆ ಅಡ್ಡಿಪಡಿಸಿದ ಕಾರಣ ಓವರ್ಗಳ ಕಡಿತದೊಂದಿಗೆ ಮ್ಯಾಚ್ ಅನ್ನು ಪೂರ್ಣಗೊಳಿಸಲಾಗಿತ್ತು.
ಇದೀಗ ಏಕದಿನ ಸರಣಿಯ ಮೊದಲ ಪಂದ್ಯ ಕೂಡ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿದ್ದು, ಈ ಪಂದ್ಯಕ್ಕೂ ಮಳೆಯ ಭೀತಿ ಎದುರಾಗಿದೆ. ಇದಾಗ್ಯೂ ಪಂದ್ಯ ಆಯೋಜನೆಗೊಳ್ಳುವುದು ಬಹುತೇಕ ಖಚಿತ ಎನ್ನಬಹುದು.
ಸೌತ್ ಆಫ್ರಿಕಾ ತಂಡ: ರೀಝ ಹೆಂಡ್ರಿಕ್ಸ್, ಟೋನಿ ಡಿ ಜೊರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಆಂಡಿಲ್ ಫೆಹ್ಲುಕ್ವಾಯೊ, ಕೇಶವ್ ಮಹಾರಾಜ್ , ನಾಂದ್ರೆ ಬರ್ಗರ್, ತಬ್ರೇಝ್ ಶಮ್ಸಿ, ಲಿಝಾಡ್ ವಿಲಿಯಮ್ಸ್, ವಿಯಾನ್ ಮುಲ್ಡರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮಿಹ್ಲಾಲಿ ಎಂಪೊಂಗ್ವಾನಾ, ಕೈಲ್ ವೆರ್ರೆನ್ನೆ.
ಇದನ್ನೂ ಓದಿ: IPL 2024: ಈ ಬಾರಿಯ ಐಪಿಎಲ್ನೊಂದಿಗೆ 3 ಆಟಗಾರರು ವಿದಾಯ..!
ಭಾರತ ತಂಡ: ರಜತ್ ಪಾಟಿದಾರ್, ಸಾಯಿ ಸುದರ್ಶನ್, ಸಂಜು ಸ್ಯಾಮ್ಸನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್, ಯುಜ್ವೇಂದ್ರ ಚಹಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಆಕಾಶ್ ದೀಪ್.
ಏಕದಿನ ಸರಣಿ ವೇಳಾಪಟ್ಟಿ:
- ಡಿಸೆಂಬರ್ 17- ಮೊದಲ ಏಕದಿನ ಪಂದ್ಯ (ಜೋಹಾನ್ಸ್ಬರ್ಗ್)
- ಡಿಸೆಂಬರ್ 19- ಎರಡನೇ ಏಕದಿನ ಪಂದ್ಯ (ಗೆಬ್ಬೆಗಾ)
- ಡಿಸೆಂಬರ್ 21- ಮೂರನೇ ಏಕದಿನ ಪಂದ್ಯ (ಪಾರ್ಲ್)