AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st ODI: ಭಾರತ vs ದ. ಆಫ್ರಿಕಾ ಮೊದಲ ಏಕದಿನ ಪಂದ್ಯ ಯಾವಾಗ, ಎಷ್ಟು ಗಂಟೆಗೆ?

India vs South Africa 1st ODI Live Streaming: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ನವೆಂಬರ್ 30 ರಂದು ನಡೆಯಲಿದೆ. ಭಾರತ ತಂಡವನ್ನು ಕೆ.ಎಲ್. ರಾಹುಲ್ ಮುನ್ನಡೆಸಿದರೆ, ದಕ್ಷಿಣ ಆಫ್ರಿಕಾ ತಂಡವನ್ನು ಟೆಂಬಾ ಬವುಮಾ ಮುನ್ನಡೆಸುತ್ತಿದ್ದಾರೆ. ಈ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ನಡೆಯಲಿದೆ, ಲೈವ್ ಸ್ಟ್ರೀಮಿಂಗ್ ಯಾವುದರಲ್ಲಿ ಎಂಬ ಕುರಿತ ಮಾಹಿತಿ ಮಾಹಿತಿ.

IND vs SA 1st ODI: ಭಾರತ vs ದ. ಆಫ್ರಿಕಾ ಮೊದಲ ಏಕದಿನ ಪಂದ್ಯ ಯಾವಾಗ, ಎಷ್ಟು ಗಂಟೆಗೆ?
India Vs South Africa 1st Odi
ಮಾಲಾಶ್ರೀ ಅಂಚನ್​
| Edited By: |

Updated on: Nov 29, 2025 | 9:01 AM

Share

ಬೆಂಗಳೂರು (ನ. 29): ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಇದೀಗ ಏಕದಿನ ಸರಣಿಯಲ್ಲಿ ಭಾರತ (Indian Cricket Team) ತಂಡ ಕಣಕ್ಕಿಳಿಯಲು ಸಜ್ಜಾಗಿದೆ. ಟೆಸ್ಟ್ ಸರಣಿಯಲ್ಲಿ ಭಾರತೀಯ ತಂಡದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರಿಂದ ಸೋಲಿಗೆ ಕಾರಣವಾಯಿತು. ಶುಭ್​ಮನ್ ಗಿಲ್ ಅಲಭ್ಯತೆಯನ್ನು ಈ ಏಕದಿನ ಸರಣಿಗೆ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಹಾಗಾದರೆ ಮೊದಲ ಏಕದಿನ ಪಂದ್ಯ ಯಾವಾಗ?, ಎಲ್ಲಿ, ಎಷ್ಟು ಗಂಟೆಗೆ?, ಇಲ್ಲಿದೆ ಮಾಹಿತಿ.

ಭಾರತ vs ದ. ಆಫ್ರಿಕಾ ಮೊದಲ ಏಕದಿನ ಪಂದ್ಯ ಯಾವಾಗ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ನವೆಂಬರ್ 30 ರಂದು ರಾಂಚಿ ಮೈದಾನದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ನಡೆಯಲಿದೆ. ಭಾರತದಲ್ಲಿ, ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹೆಚ್ಚುವರಿಯಾಗಿ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಇಲ್ಲಿಯವರೆಗೆ ಒಟ್ಟು 94 ಏಕದಿನ ಪಂದ್ಯಗಳು ನಡೆದಿದ್ದು, ಅವುಗಳಲ್ಲಿ ಭಾರತ 40 ಪಂದ್ಯಗಳಲ್ಲಿ ಗೆದ್ದು 51 ಪಂದ್ಯಗಳಲ್ಲಿ ಸೋತಿದೆ. ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಮೇಲಿನ ಅಂಕಿಅಂಶಗಳ ಆಧಾರದ ಮೇಲೆ, ಭಾರತದ ವಿರುದ್ಧ ಏಕದಿನ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸಿದೆ.

IND vs SA 1st ODI Playing XI: ರೋಹಿತ್ ಜೊತೆ ಓಪನರ್ ಯಾರು?, ರಿಷಭ್ ಪಂತ್​ಗೆ ಬೆಂಚ್ ಸಾಧ್ಯತೆ

ಯುವ ಆಟಗಾರರಿಗೆ ಸುವರ್ಣ ಅವಕಾಶ

ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಆಟಗಾರರು ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಇದು ಯುವ ಆಟಗಾರರಿಗೆ ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅವಕಾಶ ನೀಡುತ್ತದೆ. ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಮತ್ತು ಅರ್ಷದೀಪ್ ಸಿಂಗ್ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಸುವರ್ಣಾವಕಾಶವನ್ನು ಹೊಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ