India vs South Africa, 1st T20: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ಬವುಮಾ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ ಹಾಗೂ ರುತುರಾಜ್ ಸ್ಪೋಟಕ ಆರಂಭ ಒದಗಿಸಿದ್ದರು. ಅದರಲ್ಲೂ 48 ಎಸೆತಗಳಲ್ಲಿ 76 ರನ್ ಬಾರಿಸುವ ಮೂಲಕ ಅಬ್ಬರಿಸಿದ ಇಶಾನ್ ಕಿಶನ್ ಸೌತ್ ಆಫ್ರಿಕಾ ಬೌಲರ್ಗಳ ಬೆಂಡೆತ್ತಿದರು. ಅಂತಿಮ ಹಂತದಲ್ಲಿ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 31 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ಕ್ಕೆ ತಂದು ನಿಲ್ಲಿಸಿದರು.
212 ರನ್ಗಳ ಬೃಹತ್ ಗುರಿ ಪಡೆದ ಸೌತ್ ಆಫ್ರಿಕಾ ತಂಡವು ಬಿರುಸಿನ ಆರಂಭ ಪಡೆಯಿತು. ಪವರ್ಪ್ಲೇನಲ್ಲಿ ತಂಡದ ಮೊತ್ತ 60 ರನ್ಗಳ ಗಡಿದಾಟಿತ್ತು. ಇದಾಗ್ಯೂ ಕಂಬ್ಯಾಕ್ ಮಾಡಿದ ಟೀಮ್ ಇಂಡಿಯಾ ಬೌಲರ್ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆದಿದ್ದರು. ಆದರೆ 4ನೇ ವಿಕೆಟ್ಗೆ ಜೊತೆಯಾದ ರಸ್ಸಿ ವಂಡರ್ ಡುಸ್ಸೆನ್ ಹಾಗೂ ಡೇವಿಡ್ ಮಿಲ್ಲರ್ ಅಜೇಯ 131 ರನ್ಗಳ ಜೊತೆಯಾಟವಾಡುವ ಮೂಲಕ ತಂಡ ಇಡೀ ಪಂದ್ಯದ ಚಿತ್ರಣ ಬದಲಿಸಿದರು.
ಅದರಂತೆ ಅಜೇಯರಾಗಿ ಉಳಿದ ಡುಸ್ಸೆನ್ 46 ಎಸೆತಗಳಲ್ಲಿ 75 ರನ್ ಬಾರಿಸಿದರೆ, ಡೇವಿಡ್ ಮಿಲ್ಲರ್ 31 ಎಸೆತಗಳಲ್ಲಿ 64 ರನ್ ಸಿಡಿಸಿದರು. ಪರಿಣಾಮ 19.1 ಓವರ್ನಲ್ಲಿ 212 ರನ್ಗಳ ಗುರಿ ಮುಟ್ಟುವ ಮೂಲಕ ಸೌತ್ ಆಫ್ರಿಕಾ ತಂಡವು 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಟೀಮ್ ಇಂಡಿಯಾ ವಿರುದ್ದ ಬೃಹತ್ ಮೊತ್ತವನ್ನು ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆಯನ್ನು ಸೌತ್ ಆಫ್ರಿಕಾ ಬರೆದಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಟಿ20 ಪಂದ್ಯಗಳಲ್ಲಿ ಗೆಲುವಿನ ನಾಗಾಲೋಟಕ್ಕೆ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಇದಕ್ಕೂ ಮುನ್ನ ಭಾರತ ಸತತವಾಗಿ 12 ಟಿ20 ಪಂದ್ಯಗಳನ್ನು ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಗೆದ್ದಿದ್ರೆ ವಿಶ್ವ ದಾಖಲೆ ಬರೆಯುವ ಅವಕಾಶ ಟೀಮ್ ಇಂಡಿಯಾ ಮುಂದಿತ್ತು. ಆದರೆ ಸೌತ್ ಆಫ್ರಿಕಾ ವಿರುದ್ದ ಸೋಲುವ ಈ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ. ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.
ಭಾರತ (ಪ್ಲೇಯಿಂಗ್ ಇಲೆವೆನ್): ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ ಪ್ಲೇಯಿಂಗ್): ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ತಬ್ರೇಝ್ ಶಮ್ಸಿ, ಕಗಿಸೊ ರಬಾಡ, ಅನ್ರಿಕ್ ನೋಕಿಯಾ
ಈ ಸರಣಿಗಾಗಿ ಉಭಯ ತಂಡಗಳು ಹೀಗಿವೆ:
ಟೀಮ್ ಇಂಡಿಯಾ ಟಿ20 ತಂಡ: ರಿಷಭ್ ಪಂತ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ , ಅವೇಶ್ ಖಾನ್, ಅರ್ಷ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.
ದಕ್ಷಿಣ ಆಫ್ರಿಕಾ ಟಿ20 ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವಾಯ್ನೆ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ತಬ್ರೇಝ್ ಶಮ್ಸಿ, ಸ್ಟೀಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಯಾನ್ಸೆನ್
Published On - 6:20 pm, Thu, 9 June 22