ಗ್ರೀನ್​ಫೀಲ್ಡ್​ನಲ್ಲಿ ಮೊದಲ ಮುಖಾಮುಖಿ: ಈ ಪಿಚ್​ನಲ್ಲಿ ಗೆಲ್ಲೋರು ಯಾರು?

India vs South Africa, 1st T20I: ಇದೇ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಏಕದಿನ ಪಂದ್ಯ ನಡೆದಿತ್ತು. ನವೆಂಬರ್ 2018 ರಲ್ಲಿ ನಡೆದ ಆ ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ ಕೇವಲ 104 ರನ್‌ಗಳಿಗೆ ಕುಸಿಯಿತು.

ಗ್ರೀನ್​ಫೀಲ್ಡ್​ನಲ್ಲಿ ಮೊದಲ ಮುಖಾಮುಖಿ: ಈ ಪಿಚ್​ನಲ್ಲಿ ಗೆಲ್ಲೋರು ಯಾರು?
India vs South Africa, 1st T20I
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 27, 2022 | 12:55 PM

India vs South Africa, 1st T20I: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೇರಳದ ರಾಜಧಾನಿಯಲ್ಲಿರುವ ಈ ಕ್ರೀಡಾಂಗಣವನ್ನು 2015 ರಲ್ಲಿ ನವನಿರ್ಮಾಣ ಮಾಡಲಾಗಿತ್ತು. ಇಲ್ಲಿ ಟೀಮ್ ಇಂಡಿಯಾ (Team India) 2017 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿತ್ತು. ಈ ಮೈದಾನದಲ್ಲಿ ಇದುವರೆಗೆ ಒಂದು ಏಕದಿನ ಹಾಗೂ ಎರಡು ಟಿ20 ಪಂದ್ಯಗಳು ಮಾತ್ರ ಆಡಲಾಗಿದೆ. ಅಂದರೆ ಗ್ರೀನ್​ಫೀಲ್ಡ್​ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಭಾರತ-ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ.

ಇನ್ನು ಈ ಮೈದಾನದ ಅಂಕಿ ಅಂಶಗಳನ್ನು ನೋಡುವುದಾದರೆ, 2017 ರಲ್ಲಿ, ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಈ ಮೈದಾದಲ್ಲಿ ಟಿ20 ಪಂದ್ಯವಾಡಿತ್ತು. ಮಳೆ ಬಾಧಿತವಾಗಿದ್ದ ಆ ಪಂದ್ಯವನ್ನು 8 ಓವರ್​ಗಳಿಗೆ ಸೀಮಿತಗೊಳಿಸಲಾಗಿತ್ತು. ಅಂದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 8 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿತು. ಇದಾದ ಬಳಿಕ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಅವರ ಮಾರಕ ಬೌಲಿಂಗ್‌ನಿಂದ ಕಿವೀಸ್ ತಂಡ ಕೇವಲ 61 ರನ್‌ಗಳಿಸಲಷ್ಟೇ ಶಕ್ರರಾದರು. ಅದರಂತೆ ಅಂದು ಆ ಪಂದ್ಯವನ್ನು ಭಾರತ 6 ರನ್‌ಗಳಿಂದ ಗೆದ್ದುಕೊಂಡಿತು. 9 ರನ್‌ಗಳಿಗೆ ಎರಡು ವಿಕೆಟ್ ಪಡೆದ ಬುಮ್ರಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

ಇದಾದ ಬಳಿಕ ಇದೇ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಏಕದಿನ ಪಂದ್ಯ ನಡೆದಿತ್ತು. ನವೆಂಬರ್ 2018 ರಲ್ಲಿ ನಡೆದ ಆ ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿ ಕೇವಲ 104 ರನ್‌ಗಳಿಗೆ ಕುಸಿಯಿತು. ಅಂದು ಆಲ್ ರೌಂಡರ್ ರವೀಂದ್ರ ಜಡೇಜಾ 35 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದ್ದರು. ಇನ್ನು 105 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅಜೇಯ 63 ಮತ್ತು ವಿರಾಟ್ ಕೊಹ್ಲಿ ಅವರ ಅಜೇಯ 33 ರ ನೆರವಿನಿಂದ 9 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತ್ತು.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಗ್ರೀನ್​ಫೀಲ್ಡ್​ ಮೈದಾನದಲ್ಲಿ 3 ವರ್ಷಗಳ ಹಿಂದೆ ಭಾರತ-ವೆಸ್ಟ್ ಇಂಡೀಸ್ ಕೊನೆಯ ಟಿ20 ಪಂದ್ಯವಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 171 ರನ್ ಗಳ ಗುರಿ ನೀಡಿತು. ಶಿವಂ ದುಬೆ 54 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ವಿಂಡೀಸ್ ಪರ ಲೆಂಡ್ಲ್ ಸಿಮನ್ಸ್ (67*), ಎವಿನ್ ಲೂಯಿಸ್ (40), ಶಿಮ್ರಾನ್ ಹೆಟ್ಮೆಯರ್ (23) ಮತ್ತು ನಿಕೋಲಸ್ ಪೂರನ್ (38*) ಭರ್ಜರಿ ಇನಿಂಗ್ಸ್ ಆಡಿದ್ದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 8 ವಿಕೆಟ್​ಗಳಿಂದ ಟೀಮ್ ಇಂಡಿಯಾಗೆ ಸೋಲುಣಿಸಿತ್ತು.

ಅಂದರೆ ಈ ಮೈದಾನದಲ್ಲಿ ಟೀಮ್ ಇಂಡಿಯಾ ಆಡಿದ 2 ಟಿ20 ಪಂದ್ಯಗಳಲ್ಲಿ 1 ರಲ್ಲಿ ಗೆಲುವು ದಾಖಲಿಸಿದರೆ, ಮತ್ತೊಂದರಲ್ಲಿ ಸೋಲುಂಡಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಅನಿರೀಕ್ಷಿತ ಫಲಿತಾಂಶವನ್ನು ಎದುರು ನೋಡಬಹುದು. ಇನ್ನು ಈ ಪಿಚ್​ ಬ್ಯಾಟಿಂಗ್​ಗೆ ಸಹಕಾರಿ. ಹೀಗಾಗಿ ಬೃಹತ್ ಮೊತ್ತವನ್ನು ನಿರೀಕ್ಷಿಸಬಹುದು. ಇದಾಗ್ಯೂ ಆರಂಭಿಕ ಹಂತದಲ್ಲಿ ಬೌಲರ್​ಗಳು ಯಶಸ್ಸು ಸಾಧಿಸುತ್ತಾರೆ. ಆ ಮೇಲುಗೈಯನ್ನು ಮುಂದುವರೆಸಿದರೆ ಕಡಿಮೆ ಮೊತ್ತಕ್ಕೆ ಎದುರಾಳಿಗಳನ್ನು ಕಟ್ಟಿಹಾಕಬಹುದು.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್ ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಶಹಬಾಜ್ ಅಹ್ಮದ್ ಮತ್ತು ಶ್ರೇಯಸ್ ಅಯ್ಯರ್.

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್