AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಲ್ಪ ಮುನ್ನಡೆಯೊಂದಿಗೆ 7 ವಿಕೆಟ್ ಕಳೆದುಕೊಂಡ ಸೌತ್ ಆಫ್ರಿಕಾ

India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್​ಗಳಿಸಿದರೆ, ಟೀಮ್ ಇಂಡಿಯಾ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 30 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

IND vs SA: ಅಲ್ಪ ಮುನ್ನಡೆಯೊಂದಿಗೆ 7 ವಿಕೆಟ್ ಕಳೆದುಕೊಂಡ ಸೌತ್ ಆಫ್ರಿಕಾ
IND vs SA
ಝಾಹಿರ್ ಯೂಸುಫ್
|

Updated on: Nov 15, 2025 | 4:39 PM

Share

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಮೂರನೇ ದಿನದಲ್ಲೇ ಅಂತ್ಯಗೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಮಾಡಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ 12 ರನ್​ಗಳಿಸಿ ಔಟಾದರೆ, ಕೆಎಲ್ ರಾಹುಲ್ 39 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಾಷಿಂಗ್ಟನ್ ಸುಂದರ್ ಕಲೆಹಾಕಿದ್ದು 29 ರನ್​ಗಳು ಮಾತ್ರ.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ ಕೇವಲ 4 ರನ್​ಗಳಿಸಿ ಗಾಯಗೊಂಡು ಹೊರ ನಡೆದರು. ಆ ಬಳಿಕ ಬಂದ ರಿಷಭ್ ಪಂತ್ 27 ರನ್​ಗಳಿಸಿದರೆ, ರವೀಂದ್ರ ಜಡೇಜಾ 27 ರನ್​ ಬಾರಿಸಿದರು.

ಇನ್ನು ಧ್ರುವ್ ಜುರೆಲ್ ಕಲೆಹಾಕಿದ್ದು ಕೇವಲ 14 ರನ್​ ಮಾತ್ರ. ಇದರ ಬೆನ್ನಲ್ಲೇ ಅಕ್ಷರ್ ಪಟೇಲ್ (16) ಕೂಡ ವಿಕೆಟ್ ಒಪ್ಪಿಸಿದರು.  ಇನ್ನುಳಿದಂತೆ ಕುಲ್ದೀಪ್ ಯಾದವ್, ಜಸ್​​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 62.2 ಓವರ್​ಗಳಲ್ಲಿ 189 ರನ್​ಗಳಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು

30 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡಕ್ಕೆ ರವೀಂದ್ರ ಜಡೇಜಾ ಆಘಾತದ ಮೇಲೆ ಆಘಾತ ನೀಡಿದ್ದಾರೆ. 2ನೇ ಇನಿಂಗ್ಸ್​ನಲ್ಲಿ 13 ಓವರ್​ ಎಸೆದ ಜಡ್ಡು ಕೇವಲ 29 ರನ್ ನೀಡಿ 4 ವಿಕೆಟ್ ಕಬಳಿಸಿದ್ದಾರೆ. ಮತ್ತೊಂದೆಡೆ ಕುಲ್ದೀಪ್ ಯಾದವ್ 2 ವಿಕೆಟ್ ಉರುಳಿಸಿದ್ದಾರೆ. ಇನ್ನು ಅಕ್ಷರ್ ಪಟೇಲ್ ಕೂಡ ಒಂದು ವಿಕೆಟ್ ಪಡೆದಿದ್ದಾರೆ.

ಪರಿಣಾಮ ಸೌತ್ ಆಫ್ರಿಕಾ ತಂಡವು 93 ರನ್​ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಅಂದರೆ ದ್ವಿತೀಯ ದಿನದಾಟದ ಅಂತ್ಯಕ್ಕೆ ಸೌತ್ ಆಫ್ರಿಕಾ ತಂಡ ಕೇವಲ 63 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಸದ್ಯ ಕ್ರೀಸ್​ನಲ್ಲಿ ಟೆಂಬಾ ಬವುಮಾ (29) ಹಾಗೂ ಕಾರ್ಬಿನ್ ಬಾಷ್ (1) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನುಳಿದ ಮೂರು ವಿಕೆಟ್​ಗಳನ್ನು ಮೂರನೇ ದಿನದಾಟದಲ್ಲೇ ಉರುಳಿಸುವುದು ಖಚಿತ. ಅದರಂತೆ ಭಾರತ-ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಮೂರೇ ದಿನಕ್ಕೆ ಅಂತ್ಯವಾಗುವ ಸಾಧ್ಯತೆ ಹೆಚ್ಚಿದೆ.

ಭಾರತ ಪ್ಲೇಯಿಂಗ್ 11:  ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್ , ಶುಭ್​ಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಧ್ರುವ್ ಜುರೆಲ್ , ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಬರೋಬ್ಬರಿ 3977 ದಿನಗಳು… ನಿಧಾನದೊಂದಿಗೆ ದಾಖಲೆ ಪಟ್ಟಿ ಸೇರಿದ ಕೆಎಲ್ ರಾಹುಲ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ , ರಯಾನ್ ರಿಕಲ್ಟನ್ , ವಿಯಾನ್ ಮುಲ್ಡರ್ , ಟೆಂಬಾ ಬವುಮಾ (ನಾಯಕ) , ಟೋನಿ ಡಿ ಝೋರ್ಝಿ , ಟ್ರಿಸ್ಟನ್ ಸ್ಟಬ್ಸ್ , ಕೈಲ್ ವೆರ್ರೆನ್ (ವಿಕೆಟ್ ಕೀಪರ್ ), ಮಾರ್ಕೊ ಯಾನ್ಸೆನ್ , ಕಾರ್ಬಿನ್ ಬಾಷ್ , ಸೈಮನ್ ಹಾರ್ಮರ್ , ಕೇಶವ ಮಹಾರಾಜ್.