IND vs SA, 1st Test Match Live Streaming: ಭಾರತ- ಆಫ್ರಿಕಾ ಮೊದಲ ಪಂದ್ಯದ ಸಂಪೂರ್ಣ ಮಾಹಿತಿ ಇಲ್ಲಿದೆ
IND vs SA, 1st Test Match Live Streaming: ಟೀಂ ಇಂಡಿಯಾ ಭಾನುವಾರದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಿಸಲಿದೆ. ಸರಣಿಯ ಮೊದಲ ಪಂದ್ಯ ಸೆಂಚುರಿಯನ್‌ನಲ್ಲಿ ನಡೆಯಲಿದೆ.
ಟೀಂ ಇಂಡಿಯಾ ಭಾನುವಾರದಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಿಸಲಿದೆ. ಸರಣಿಯ ಮೊದಲ ಪಂದ್ಯ ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈ ಸರಣಿಯು ರಾಹುಲ್ ದ್ರಾವಿಡ್ ಅವರ ಮೊದಲ ವಿದೇಶಿ ಸರಣಿಯಾಗಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಇಲ್ಲಿಯವರೆಗೆ ಯಾವುದೇ ಟೆಸ್ಟ್ ಸರಣಿಯನ್ನು ಗೆಲ್ಲಲು ಟೀಂ ಇಂಡಿಯಾಕ್ಕೆ ಸಾಧ್ಯವಾಗಿಲ್ಲ, ಹೀಗಾಗಿ ಈ ಬಾರಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡ ಅದ್ಭುತಗಳನ್ನು ಮಾಡುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಭಾನುವಾರ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಭಾರತ ಒಂದು ವಾರದಿಂದ ಇಲ್ಲಿ ತರಬೇತಿ ಪಡೆಯುತ್ತಿದೆ. ಜೊತೆಗೆ ಹೊಸದಾಗಿ ನೇಮಕಗೊಂಡ ಉಪನಾಯಕ ಕನ್ನಡಿಗ ರಾಹುಲ್ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲಲು ಉತ್ತಮ ಆರಂಭದ ಅಗತ್ಯವಿದೆ ಎಂದಿದ್ದಾರೆ. ರೋಹಿತ್ ಶರ್ಮಾ ಅವರನ್ನು ಈ ಸರಣಿಗೆ ಉಪನಾಯಕರನ್ನಾಗಿ ಮಾಡಲಾಯಿತು, ಆದರೂ ಅವರು ಗಾಯದ ಕಾರಣದಿಂದ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ನಂತರ ಕೆಎಲ್ ರಾಹುಲ್ ಅವರನ್ನು ತಂಡದ ಉಪನಾಯಕರನ್ನಾಗಿ ಮಾಡಲಾಗಿದೆ. ಟೆಸ್ಟ್ ಸರಣಿಯನ್ನು ಗೆಲ್ಲದ ದಕ್ಷಿಣ ಆಫ್ರಿಕಾದಲ್ಲಿ ವೇಗವನ್ನು ಹೊಂದಿಸಲು ಉತ್ತಮ ಆರಂಭದ ಅಗತ್ಯವಿದೆ ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.
ಪಂದ್ಯದ ಪೂರ್ಣ ಮಾಹಿತಿ ಹೀಗಿದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ? ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ (ಭಾನುವಾರ) ಆರಂಭವಾಗಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ? ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಸೆಂಚುರಿಯನ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವಾಗ ಆರಂಭವಾಗುತ್ತದೆ? ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ 01:30 ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ಹಾಟ್ಸ್ಟಾರ್ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.
ಇದನ್ನೂ ಓದಿ:IND vs SA: ಐವರು ವೇಗಿಗಳಿಗೆ ಅವಕಾಶ, ಆದರೆ..? ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆ ರಾಹುಲ್ ಮಾತು
Published On - 2:46 pm, Sat, 25 December 21