Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ-ಸೌತ್ ಆಫ್ರಿಕಾ ಆಟಗಾರರ ಮುಂದಿದೆ 11 ದಾಖಲೆಗಳು

India vs South Africa, 1st Test: ಭಾರತ-ಸೌತ್ ಆಫ್ರಿಕಾ ತಂಡಗಳ ಆಟಗಾರರು ದಾಖಲೆಗಳ ಹೊಸ್ತಿಲಲ್ಲಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲೇ ಒಟ್ಟು 11 ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆಗಳಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

IND vs SA: ಭಾರತ-ಸೌತ್ ಆಫ್ರಿಕಾ ಆಟಗಾರರ ಮುಂದಿದೆ 11 ದಾಖಲೆಗಳು
IND vs SA
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 26, 2023 | 11:16 AM

ಭಾರತ ಮತ್ತು ಸೌತ್ ಆಫ್ರಿಕಾ (India vs South Africa) ತಂಡಗಳ ನಡುವಣ ಟೆಸ್ಟ್ ಸರಣಿಯು ಇಂದಿನಿಂದ (ಡಿ.26) ಶುರುವಾಗಲಿದೆ. 2 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ಸೆಂಚುರಿಯನ್​ನಲ್ಲಿನ ಸೂಪರ್​​ಸ್ಪೋರ್ಟ್​ ಪಾರ್ಕ್​ ಮೈದಾನ ಆತಿಥ್ಯವಹಿಸಲಿದೆ. ಬಾಕ್ಸಿಂಗ್ ಡೇ ಟೆಸ್ಟ್​ ಎಂದೇ ಗುರುತಿಸಿಕೊಂಡಿರುವ ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಬಹುದು.

ಏಕೆಂದರೆ ಉಭಯ ತಂಡಗಳ ಆಟಗಾರರು ದಾಖಲೆಗಳ ಹೊಸ್ತಿಲಲ್ಲಿದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲೇ ಒಟ್ಟು 11 ದಾಖಲೆಗಳು ನಿರ್ಮಾಣವಾಗುವ ಸಾಧ್ಯತೆಗಳಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ…

  1. ರೋಹಿತ್ ಶರ್ಮಾ (1904) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸೌತ್ ಆಫ್ರಿಕಾ ವಿರುದ್ಧ 2000 ರನ್ ಪೂರೈಸಲು 96 ರನ್‌ಗಳ ಅಗತ್ಯವಿದೆ.
  2. ವಿರಾಟ್ ಕೊಹ್ಲಿಗೆ (1934) 2023ರಲ್ಲಿ 2000 ರನ್ ಪೂರ್ಣಗೊಳಿಸಲು ವಿಶ್ವ ದಾಖಲೆ ನಿರ್ಮಿಸಲು 66 ರನ್​ಗಳ ಅವಶ್ಯಕತೆಯಿದೆ.
  3. ಶುಭಮನ್ ಗಿಲ್ (966) ಟೆಸ್ಟ್ ಕ್ರಿಕೆಟ್‌ನಲ್ಲಿ 1000 ರನ್‌ಗಳ ಮೈಲುಗಲ್ಲನ್ನು ದಾಟಲು 34 ರನ್‌ ಕಲೆಹಾಕಬೇಕಿದೆ.
  4. ಶ್ರೇಯಸ್ ಅಯ್ಯರ್ (949) 2023 ರಲ್ಲಿ 1000 ರನ್‌ಗಳನ್ನು ಪೂರ್ಣಗೊಳಿಸಲು 51 ರನ್‌ಗಳ ಅಗತ್ಯವಿದೆ.
  5. ರವಿಚಂದ್ರನ್ ಅಶ್ವಿನ್ (489) ಟೆಸ್ಟ್ ಮಾದರಿಯಲ್ಲಿ 500 ವಿಕೆಟ್‌ಗಳ ಮೈಲಿಗಲ್ಲನ್ನು ತಲುಪಲು 11 ವಿಕೆಟ್‌ಗಳ ಅವಶ್ಯಕತೆಯಿದೆ.
  6. ರವೀಂದ್ರ ಜಡೇಜಾ (548) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 550 ವಿಕೆಟ್‌ಗಳನ್ನು ಪೂರ್ಣಗೊಳಿಸಲು ಎರಡು ವಿಕೆಟ್‌ಗಳ ಅಗತ್ಯವಿದೆ.
  7. ಟೆಂಬಾ ಬಾವುಮಾ (2997) ಟೆಸ್ಟ್ ಕ್ರಿಕೆಟ್​ನಲ್ಲಿ 3000 ರನ್ ಪೂರೈಸಲು ಮೂರು ರನ್ ಅಗತ್ಯವಿದೆ.
  8. ಮಾರ್ಕೊ ಯಾನ್ಸೆನ್ (44) ಟೆಸ್ಟ್ ಕ್ರಿಕೆಟ್‌ನಲ್ಲಿ 50 ವಿಕೆಟ್‌ಗಳನ್ನು 6 ಮಂದಿಯನ್ನು ಔಟ್ ಮಾಡಬೇಕಿದೆ.
  9. ಕಗಿಸೊ ರಬಾಡ (495) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 500 ವಿಕೆಟ್‌ಗಳ ಸಾಧನೆ ಮಾಡಲು ಇನ್ನೂ ಐದು ವಿಕೆಟ್‌ಗಳ ಅಗತ್ಯವಿದೆ.
  10. ಲುಂಗಿ ಎನ್‌ಗಿಡಿ (199) ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200 ವಿಕೆಟ್​​ಗಳನ್ನು ಪೂರ್ಣಗೊಳಿಸಲು ಒಂದು ವಿಕೆಟ್​ನ ಅವಶ್ಯಕತೆಯಿದೆ.
  11. ಕಗಿಸೊ ರಬಾಡ (44) ಟೆಸ್ಟ್‌ನಲ್ಲಿ ಭಾರತದ ವಿರುದ್ಧ 50 ವಿಕೆಟ್‌ಗಳನ್ನು ಪೂರೈಸಲು ಆರು ವಿಕೆಟ್‌ಗಳ ಅಗತ್ಯವಿದೆ.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಝಿ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್‌ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್, ಕೈಲ್ ವೆರ್ರೆನ್ನೆ.

Published On - 11:15 am, Tue, 26 December 23

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ