IND vs SA: ಟೀಮ್ ಇಂಡಿಯಾ ಪರ ಕನ್ನಡಿಗ ಪಾದಾರ್ಪಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs South Africa 1st Test: ಭಾರತ-ಸೌತ್ ಆಫ್ರಿಕಾ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಇದುವರೆಗೆ 42 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 17 ಬಾರಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 15 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಮ್ಯಾಚ್ಗಳು ಡ್ರಾನಲ್ಲಿ ಅಂತ್ಯ ಕಂಡಿತ್ತು.
ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿ ಆರಂಭವಾಗಿದೆ. ಸೆಂಚುರಿಯನ್ನಲ್ಲಿನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯದ ಮೂಲಕ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಭಾರತದ ಪರ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಹೆಸರಿಸಿದ ಪ್ಲೇಯಿಂಗ್ ಇಲೆವೆನ್ನಲ್ಲಿ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ. ಫಿಟ್ನೆಸ್ ಸಮಸ್ಯೆಯ ಕಾರಣ ಜಡ್ಡು ಹೊರಗುಳಿದಿದ್ದು, ಅವರ ಬದಲಿಗೆ ಶಾರ್ದೂಲ್ ಠಾಕೂರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟೀಮ್ ಇಂಡಿಯಾ ಪರ ಈ ಪಂದ್ಯದಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ಶುಭ್ಮನ್ ಗಿಲ್ ಬ್ಯಾಟ್ ಬೀಸಿದರೆ, 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಝೋರ್ಝಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಝಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್.
ಮುಖಾಮುಖಿ ಅಂಕಿ ಅಂಶಗಳು:
ಭಾರತ-ಸೌತ್ ಆಫ್ರಿಕಾ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಇದುವರೆಗೆ 42 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 17 ಬಾರಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 15 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 10 ಮ್ಯಾಚ್ಗಳು ಡ್ರಾನಲ್ಲಿ ಅಂತ್ಯ ಕಂಡಿತ್ತು. ಇದೀಗ 43ನೇ ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಬಾರಿ ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದೆ ಕಾದು ನೋಡಬೇಕಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.
ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್‌ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಝಿ, ಟೋನಿ ಡಿ ಝೋರ್ಝಿ, ಡೀನ್ ಎಲ್ಗರ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕೀಗನ್ ಪೀಟರ್‌ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್, ಕೈಲ್ ವೆರ್ರೆನ್ನೆ.
Published On - 1:52 pm, Tue, 26 December 23