IND vs SA: ಮೊದಲ ಟೆಸ್ಟ್‌ಗಾಗಿ ಕೋಲ್ಕತ್ತಾಗೆ ಬಂದಿಳಿದ ಭಾರತ- ಆಫ್ರಿಕಾ ಆಟಗಾರರು
India vs South Africa 1st Test: ನವೆಂಬರ್ 14 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡ ಕೋಲ್ಕತ್ತಾಗೆ ಆಗಮಿಸಿದೆ. ನಾಯಕ ತೆಂಬಾ ಬವುಮಾ ತಂಡವನ್ನು ಸೇರಿಕೊಂಡಿದ್ದು, ಭಾರತ ಎ ವಿರುದ್ಧ ಆಡಿ ಸಿದ್ಧತೆ ನಡೆಸಿದ್ದಾರೆ. ಇತ್ತ ಭಾರತ ತಂಡವೂ ಆಗಮಿಸಿದೆ. ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಭಾರತ ಈ ವರ್ಷದ ಕೊನೆಯ ಟೆಸ್ಟ್ ಸರಣಿಯನ್ನು ಗೆಲ್ಲುವ ಗುರಿಯಲ್ಲಿದೆ.

ನವೆಂಬರ್ 14 ರಿಂದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರಂಭವಾಗಲಿರುವ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕಾಗಿ ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ (India vs South Africa) ಕೋಲ್ಕತ್ತಾಗೆ ಆಗಮಿಸಿದೆ. ಇತ್ತ ಬೆಂಗಳೂರಿನಲ್ಲಿ ನಡೆದ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳಲ್ಲಿ ಭಾರತ ಎ ವಿರುದ್ಧ ಆಡಿದ್ದ ನಾಯಕ ತೆಂಬಾ ಬವುಮಾ (Temba Bavuma) ಕೂಡ ತಂಡವನ್ನು ಸೇರಿಕೊಂಡಿದ್ದಾರೆ. ಹಾಗೆಯೇ ಮುಖ್ಯ ಕೋಚ್ ಶುಕ್ರಿ ಕಾನ್ರಾಡ್, ವೇಗಿಗಳಾದ ಕಗಿಸೊ ರಬಾಡ ಮತ್ತು ಮಾರ್ಕೊ ಯಾನ್ಸೆನ್ ಮತ್ತು ಪಾಕಿಸ್ತಾನದಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಆಡಿದ ಆಟಗಾರರು ಸೇರಿದಂತೆ ದಕ್ಷಿಣ ಆಫ್ರಿಕಾ ತಂಡದ ಮೊದಲ ಬ್ಯಾಚ್ ಭಾನುವಾರ ಕೋಲ್ಕತ್ತಾಗೆ ಆಗಮಿಸಿತ್ತು. ಬವುಮಾ ಇಂದು ಬೆಳಿಗ್ಗೆ ಬೆಂಗಳೂರಿನಿಂದ ಮತ್ತೊಬ್ಬ ಆಟಗಾರ ಮತ್ತು ಕೆಲವು ಅಧಿಕಾರಿಗಳೊಂದಿಗೆ ಆಗಮಿಸಿದ್ದಾರೆ. ಮುಖ್ಯ ಕೋಚ್ ಸೇರಿದಂತೆ ತಂಡದ ಹೆಚ್ಚಿನ ಸದಸ್ಯರು ಭಾನುವಾರವೇ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಎರಡೂ ತಂಡಗಳು ಮಂಗಳವಾರ ತರಬೇತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ದಕ್ಷಿಣ ಆಫ್ರಿಕಾ ತಂಡದ ಸ್ಥಳೀಯ ವ್ಯವಸ್ಥಾಪಕರು ಪಿಟಿಐಗೆ ತಿಳಿಸಿದ್ದಾರೆ.
ವಾಸ್ತವವಾಗಿ ಆಫ್ರಿಕಾ ಟೆಸ್ಟ್ ತಂಡದ ನಾಯಕ ಬವುಮಾ ಸ್ನಾಯು ಸೆಳೆತದಿಂದಾಗಿ ಪಾಕಿಸ್ತಾನದಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿರಲಿಲ್ಲ. ಹೀಗಾಗಿ ಭಾರತ ಎ ವಿರುದ್ಧದ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಬವುಮಾ ತಂಡದ ಪರ ಕಣಕ್ಕಿಳಿದಿದ್ದರು. ಆದಾಗ್ಯೂ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಬವುಮಾ ಎರಡನೇ ಇನ್ನಿಂಗ್ಸ್‌ನಲ್ಲಿ 101 ಎಸೆತಗಳಲ್ಲಿ 59 ರನ್ ಬಾರಿಸಿದ್ದರು. ಇದರಿಂದಾಗಿ ಆಫ್ರಿಕಾ ತಂಡವು ಟೀಂ ಇಂಡಿಯಾವನ್ನು ಮಣಿಸುವಲ್ಲಿ ಯಶಸ್ವಿಯಾಗಿತ್ತು. ಬವುಮಾ ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಜುಬೇರ್ ಹಮ್ಜಾ ಕೂಡ ತಂಡವನ್ನು ಸೇರಿಕೊಂಡಿದ್ದಾರೆ.
ಕೋಲ್ಕತ್ತಾಗೆ ಬಂದಿಳಿದ ಟೀಂ ಇಂಡಿಯಾ
ಇತ್ತ ಆಸ್ಟ್ರೇಲಿಯಾ ಪ್ರವಾಸವನ್ನು ಮುಗಿಸಿರುವ ಭಾರತ ತಂಡ ಕೂಡ ಕೋಲ್ಕತ್ತಾಗೆ ಬಂದಿದೆ. ಇದರಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್, ನಾಯಕ ಶುಭ್‌ಮನ್ ಗಿಲ್, ವೇಗಿಗಳಾದ ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಸೇರಿದ್ದಾರೆ. ಉಳಿದ ಆಟಗಾರರು ಪ್ರತ್ಯೇಕ ಬ್ಯಾಚ್‌ಗಳಲ್ಲಿ ಆಗಮಿಸುವ ನಿರೀಕ್ಷೆಯಿದೆ. ಗಿಲ್ ನಾಯಕತ್ವದಲ್ಲಿ ಭಾರತ 2025- 27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಭಿಯಾನವನ್ನು ಪ್ರಾರಂಭಿಸಿತು. ಅವರ ನಾಯಕತ್ವದಲ್ಲಿ, ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು 2-2ರಿಂದ ಡ್ರಾ ಮಾಡಿಕೊಂಡಿತು.
IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಕನ್ನಡಿಗನಿಗಿಲ್ಲ ಸ್ಥಾನ
ಇದರ ನಂತರ, ಭಾರತ ತಂಡವು ತವರು ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 2-0 ಅಂತರದಿಂದ ಸೋಲಿಸಿತು. ಇದು ಭಾರತದ ಈ ವರ್ಷದ ಕೊನೆಯ ಟೆಸ್ಟ್ ಸರಣಿಯಾಗಲಿದೆ. ಮುಂದಿನ ವರ್ಷ ಜೂನ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದವರೆಗೆ ಗಿಲ್ ಪಡೆ ಯಾವುದೇ ರೆಡ್-ಬಾಲ್ ಪಂದ್ಯಗಳನ್ನು ಆಡುವುದಿಲ್ಲ. ಹೀಗಾಗಿ ಈ ಸರಣಿಯನ್ನು ಗೆಲ್ಲುವ ಮೂಲಕ ಈ ವರ್ಷಕ್ಕೆ ವಿದಾಯ ಹೇಳುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
