IND vs SA: 124 ರನ್​ಗಳ ಗುರಿ ಬೆನ್ನತ್ತಲಾಗದೇ ಸೋತ ಟೀಮ್ ಇಂಡಿಯಾ

India vs South Africa, 1st Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಮುಗಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 159 ರನ್​ಗಳಿಸಿದರೆ, ಟೀಮ್ ಇಂಡಿಯಾ 189 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 30 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

IND vs SA: 124 ರನ್​ಗಳ ಗುರಿ ಬೆನ್ನತ್ತಲಾಗದೇ ಸೋತ ಟೀಮ್ ಇಂಡಿಯಾ
Team India 2025 11 16t131822.109

Updated on: Nov 16, 2025 | 2:18 PM

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಮಾಡಿದ ಟೀಮ್ ಇಂಡಿಯಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ 12 ರನ್​ಗಳಿಸಿ ಔಟಾದರೆ, ಕೆಎಲ್ ರಾಹುಲ್ 39 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಾಷಿಂಗ್ಟನ್ ಸುಂದರ್ ಕಲೆಹಾಕಿದ್ದು 29 ರನ್​ಗಳು ಮಾತ್ರ.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ ಕೇವಲ 4 ರನ್​ಗಳಿಸಿ ಗಾಯಗೊಂಡು ಹೊರ ನಡೆದರು. ಆ ಬಳಿಕ ಬಂದ ರಿಷಭ್ ಪಂತ್ 27 ರನ್​ಗಳಿಸಿದರೆ, ರವೀಂದ್ರ ಜಡೇಜಾ 27 ರನ್​ ಬಾರಿಸಿದರು.

ಇನ್ನು ಧ್ರುವ್ ಜುರೆಲ್ ಕಲೆಹಾಕಿದ್ದು ಕೇವಲ 14 ರನ್​ ಮಾತ್ರ. ಇದರ ಬೆನ್ನಲ್ಲೇ ಅಕ್ಷರ್ ಪಟೇಲ್ (16) ಕೂಡ ವಿಕೆಟ್ ಒಪ್ಪಿಸಿದರು.  ಇನ್ನುಳಿದಂತೆ ಕುಲ್ದೀಪ್ ಯಾದವ್, ಜಸ್​​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ರನ್​ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 62.2 ಓವರ್​ಗಳಲ್ಲಿ 189 ರನ್​ಗಳಿಸಿ ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿತ್ತು

30 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡಕ್ಕೆ ರವೀಂದ್ರ ಜಡೇಜಾ ಆಘಾತದ ಮೇಲೆ ಆಘಾತ ನೀಡಿದರು. ಪರಿಣಾಮ ಸೌತ್ ಆಫ್ರಿಕಾ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 153 ರನ್​ಗಳಿಸಿ ಆಲೌಟ್ ಆಯಿತು.

124 ರನ್​​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿನ 30 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 124 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡ 30 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಫ್ರಿಕಾ ಪಡೆ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಭಾರತ ಪ್ಲೇಯಿಂಗ್ 11:  ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್, ವಾಷಿಂಗ್ಟನ್ ಸುಂದರ್ , ಶುಭ್​ಮನ್ ಗಿಲ್ (ನಾಯಕ) ,
ರಿಷಭ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ಧ್ರುವ್ ಜುರೆಲ್ , ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್ , ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಬರೋಬ್ಬರಿ 3977 ದಿನಗಳು… ನಿಧಾನದೊಂದಿಗೆ ದಾಖಲೆ ಪಟ್ಟಿ ಸೇರಿದ ಕೆಎಲ್ ರಾಹುಲ್

ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್ , ರಯಾನ್ ರಿಕಲ್ಟನ್ , ವಿಯಾನ್ ಮುಲ್ಡರ್ , ಟೆಂಬಾ ಬವುಮಾ (ನಾಯಕ) , ಟೋನಿ ಡಿ ಝೋರ್ಝಿ , ಟ್ರಿಸ್ಟನ್ ಸ್ಟಬ್ಸ್ , ಕೈಲ್ ವೆರ್ರೆನ್ (ವಿಕೆಟ್ ಕೀಪರ್ ), ಮಾರ್ಕೊ ಯಾನ್ಸೆನ್ , ಕಾರ್ಬಿನ್ ಬಾಷ್ , ಸೈಮನ್ ಹಾರ್ಮರ್ , ಕೇಶವ ಮಹಾರಾಜ್.

 

Published On - 2:12 pm, Sun, 16 November 25