
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ (135) ಶತಕದೊಂದಿಗೆ 50 ಓವರ್ಗಳಲ್ಲಿ 349 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 49.2 ಓವರ್ಗಳಲ್ಲಿ 332 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 17 ರನ್ಗಳ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ರಾಯ್ಪುರದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಸೌತ್ ಆಫ್ರಿಕಾ ತಂಡ ದ್ವಿತೀಯ ಪಂದ್ಯದಲ್ಲಿ ಗೆಲ್ಲಲೇಬೇಕು.
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಪಂದ್ಯವು ಡಿಸೆಂಬರ್ 3 ರಂದು ನಡೆಯಲಿದೆ. ರಾಯ್ಪುರದ ಎಸ್ವಿಎನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ.
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 1.30 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಈ ಸರಣಿಯ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್ ಆ್ಯಪ್ ಹಾಗೂ ವೆಬ್ ಸೈಟ್ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದೆ.
ಉಭಯ ತಂಡಗಳು:
ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ನಾಂಡ್ರೆ ಬರ್ಗರ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ರೂಬಿನ್ ಹರ್ಮನ್, ಕೇಶವ್ ಮಹಾರಾಜ್, ಮಾರ್ಕೊ ಯಾನ್ಸೆನ್, ಐಡೆನ್ ಮಾರ್ಕ್ರಾಮ್, ಲುಂಗಿ ಎನ್ಗಿಡಿ, ರಯಾನ್ ರಿಕೆಲ್ಟನ್, ಪ್ರೆನೆಲನ್ ಸುಬ್ರಯೆನ್.