IND vs SA, 2nd ODI Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಧವನ್ ಪಡೆ; ಪಂದ್ಯ ಯಾವಾಗ ಆರಂಭ?
IND vs SA, 2nd ODI Live Streaming: ಮೊದಲ ಪಂದ್ಯದ ಅಭ್ಯಾಸದ ವೇಳೆ ಇಂಜರಿಗೊಂಡಿರುವ ಟೀಂ ಇಂಡಿಯಾ ವೇಗಿ ದೀಪಕ್ ಚಹರ್ ಉಳಿದ ಎರಡು ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿಲ್ಲದ ಕಾರಣ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ.
ಭಾನುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ 2ನೇ ಪಂದ್ಯವನ್ನು ಗೆಲ್ಲುವುದರೊಂದಿಗೆ ಸರಣಿಯನ್ನು ಜೀವಂತವಾಗಿರಿಸುವ ಸಲುವಾಗಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ. ಕಾನ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದ ಸೋಲಿನ ನಂತರ ಭಾರತ ತಂಡ ಈಗ ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದೆ. ಈ ಪಂದ್ಯ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ (JSCA Stadium in Ranchi) ನಡೆಯಲಿದೆ. ಲಕ್ನೋದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಒಂಬತ್ತು ರನ್‌ಗಳಿಂದ ಸೋಲನುಭವಿಸಿತ್ತು. ಆ ಪಂದ್ಯದಲ್ಲಿ ಭಾರತ ತಂಡದ ನಾಯಕ ಶಿಖರ್ ಧವನ್ (Shikhar Dhawan) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ್ದ ಪ್ರವಾಸಿ ತಂಡ ಭಾರತದ ಮುಂದೆ 250 ರನ್‌ಗಳ ಗುರಿಯನ್ನು ನೀಡಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 40 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 240 ರನ್ ಗಳಿಸಲಷ್ಟೇ ಶಕ್ತವಾಯಿತು.
ಚಹರ್ ಅನುಮಾನ?
ಮೊದಲ ಪಂದ್ಯದ ಅಭ್ಯಾಸದ ವೇಳೆ ಇಂಜರಿಗೊಂಡಿರುವ ಟೀಂ ಇಂಡಿಯಾ ವೇಗಿ ದೀಪಕ್ ಚಹರ್ ಉಳಿದ ಎರಡು ಪಂದ್ಯಗಳಲ್ಲಿ ಆಡುವ ಸಾಧ್ಯತೆಯಿಲ್ಲದ ಕಾರಣ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿದೆ. ಚಹರ್ ಮೊದಲ ಏಕದಿನ ಪಂದ್ಯದಲ್ಲೂ ಕಣಕ್ಕಿಳಿದಿರಲಿಲ್ಲ. ಮೂಲಗಳ ಪ್ರಕಾರ, ದೀಪಕ್ಗೆ ಆಗಿರುವ ಇಂಜುರಿ ಅಷ್ಟೇನೂ ಗಂಭೀರವಾಗಿಲ್ಲ. ಆದಾಗ್ಯೂ, ಅವರಿಗೆ ಕೆಲವು ದಿನಗಳ ವಿಶ್ರಾಂತಿ ಬೇಕಾಗಬಹುದು ಎಂದು ವರದಿಯಲ್ಲಿ ತಿಳಿದುಬಂದಿದೆ.
2ನೇ ಏಕದಿನ ಪಂದ್ಯದ ಬಗ್ಗೆ ಪೂರ್ಣ ಮಾಹಿತಿ
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ, ಅಕ್ಟೋಬರ್ 9 ರಂದು ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಲಕ್ನೋದ ರಾಂಚಿಯಲ್ಲಿರುವ ಜೆಎಸ್‌ಸಿಎ ಇಂಟರ್‌ನ್ಯಾಶನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 1 ನೇ ODI ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?
ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.