India Playing XI: ಭಾರತ ತಂಡದಲ್ಲಿ 2 ಬದಲಾವಣೆ: ಟೀಮ್ ಇಂಡಿಯಾಗೆ RCB ಆಟಗಾರ ಎಂಟ್ರಿ

India vs South Africa 2nd ODI Playing XI: ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾಗೆ ಈ ಪಂದ್ಯವು ನಿರ್ಣಾಯಕ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ ಸರಣಿ ಹರಿಣರ ಪಾಲಾಗಲಿದೆ. ಹೀಗಾಗಿ ಈ ಪಂದ್ಯುದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

India Playing XI: ಭಾರತ ತಂಡದಲ್ಲಿ 2 ಬದಲಾವಣೆ: ಟೀಮ್ ಇಂಡಿಯಾಗೆ RCB ಆಟಗಾರ ಎಂಟ್ರಿ
India vs South Africa
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 09, 2022 | 1:46 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಏಕದಿನ ಸರಣಿಯ ಎರಡನೇ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 2 ಬದಲಾವಣೆ ಮಾಡಿಕೊಂಡಿದ್ದು, ಅದರಂತೆ RCB ಆಟಗಾರ ಶಹಬಾಜ್ ಅಹ್ಮದ್ ಚೊಚ್ಚಲ ಏಕದಿನ ಪಂದ್ಯವಾಡತ್ತಿದ್ದಾರೆ. ಇವರಲ್ಲದೆ ವಾಷಿಂಗ್ಟನ್ ಸುಂದರ್ ಕೂಡ ಅವಕಾಶ ಪಡೆದಿದ್ದಾರೆ. ಇವರಿಬ್ಬರ ಎಂಟ್ರಿಯೊಂದಿಗೆ ರುತುರಾಜ್ ಗಾಯಕ್ವಾಡ್ ಮತ್ತು ರವಿ ಬಿಷ್ಣೋಯ್ ತಂಡದಿಂದ ಹೊರಗುಳಿದಿದ್ದಾರೆ.

ಟಾಸ್ ನಂತರ, ಭಾರತ ತಂಡದ ನಾಯಕ ಶಿಖರ್ ಧವನ್, ‘ನಾವು ಕೂಡ ಈ ವಿಕೆಟ್‌ನಲ್ಲಿ ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡುತ್ತಿದ್ದೆವು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಇರುತ್ತದೆ. ನಾವು ಅದರ ಲಾಭವನ್ನು ಪಡೆಯಲು ಬಯಸುತ್ತೇವೆ. ನಮ್ಮ ತಂಡದಲ್ಲಿ ಎರಡು ಬದಲಾವಣೆಗಳಾಗಿವೆ. ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದಾರೆ. ಹಾಗೆಯೇ ಶಹಬಾಜ್ ಅಹ್ಮದ್ ತಮ್ಮ ಚೊಚ್ಚಲ ಏಕದಿನ ಪಂದ್ಯವಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾಗೆ ಈ ಪಂದ್ಯವು ನಿರ್ಣಾಯಕ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ ಸರಣಿ ಹರಿಣರ ಪಾಲಾಗಲಿದೆ. ಹೀಗಾಗಿ ಈ ಪಂದ್ಯುದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತದ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ಜಾನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಟ್ಯುಯ್ನ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ