ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಏಕದಿನ ಸರಣಿಯ ಎರಡನೇ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದೆ. ದಕ್ಷಿಣ ಆಫ್ರಿಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಮಾಡಿಕೊಂಡಿದ್ದು, ಅದರಂತೆ RCB ಆಟಗಾರ ಶಹಬಾಜ್ ಅಹ್ಮದ್ ಚೊಚ್ಚಲ ಏಕದಿನ ಪಂದ್ಯವಾಡತ್ತಿದ್ದಾರೆ. ಇವರಲ್ಲದೆ ವಾಷಿಂಗ್ಟನ್ ಸುಂದರ್ ಕೂಡ ಅವಕಾಶ ಪಡೆದಿದ್ದಾರೆ. ಇವರಿಬ್ಬರ ಎಂಟ್ರಿಯೊಂದಿಗೆ ರುತುರಾಜ್ ಗಾಯಕ್ವಾಡ್ ಮತ್ತು ರವಿ ಬಿಷ್ಣೋಯ್ ತಂಡದಿಂದ ಹೊರಗುಳಿದಿದ್ದಾರೆ.
ಟಾಸ್ ನಂತರ, ಭಾರತ ತಂಡದ ನಾಯಕ ಶಿಖರ್ ಧವನ್, ‘ನಾವು ಕೂಡ ಈ ವಿಕೆಟ್‌ನಲ್ಲಿ ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡುತ್ತಿದ್ದೆವು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಇರುತ್ತದೆ. ನಾವು ಅದರ ಲಾಭವನ್ನು ಪಡೆಯಲು ಬಯಸುತ್ತೇವೆ. ನಮ್ಮ ತಂಡದಲ್ಲಿ ಎರಡು ಬದಲಾವಣೆಗಳಾಗಿವೆ. ವಾಷಿಂಗ್ಟನ್ ಸುಂದರ್ ತಂಡದಲ್ಲಿದ್ದಾರೆ. ಹಾಗೆಯೇ ಶಹಬಾಜ್ ಅಹ್ಮದ್ ತಮ್ಮ ಚೊಚ್ಚಲ ಏಕದಿನ ಪಂದ್ಯವಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾಗೆ ಈ ಪಂದ್ಯವು ನಿರ್ಣಾಯಕ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆದ್ದರೆ ಸರಣಿ ಹರಿಣರ ಪಾಲಾಗಲಿದೆ. ಹೀಗಾಗಿ ಈ ಪಂದ್ಯುದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.
ಭಾರತದ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ಜಾನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಟ್ಯುಯ್ನ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ.