IND vs SA, 2nd ODI: ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತದ ದಾಖಲೆ ಹೇಗಿದೆ ಗೊತ್ತಾ?
IND vs SA, 2nd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 19 ರ ಮಂಗಳವಾರದಂದು ನಡೆಯಲ್ಲಿದೆ. ಉಭಯ ತಂಡಗಳು ಗ್ಕೆಬರ್ಹಾದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಡಿಸೆಂಬರ್ 19 ರ ಮಂಗಳವಾರದಂದು ನಡೆಯಲ್ಲಿದೆ. ಉಭಯ ತಂಡಗಳು ಗ್ಕೆಬರ್ಹಾದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ ( St George’s Park) ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಇನ್ನು ಎರಡೂ ತಂಡಗಳ ನಡುವೆ ಜೋಹಾನ್ಸ್ಬರ್ಗ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಆಫ್ರಿಕಾ ತಂಡವನ್ನು ಟೀಂ ಇಂಡಿಯಾ (Team India) ಏಕಪಕ್ಷೀಯವಾಗಿ ಸೋಲಿಸಿತ್ತು. ಹೀಗಾಗಿ ಮೊದಲ ಪಂದ್ಯದ ಸೋಲಿನಿಂದ ಸರಣಿಯಲ್ಲಿ 1-0 ಅಂತರದ ಹಿನ್ನಡೆ ಅನುಭವಿಸಿರುವ ಹರಿಣಗಳಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯದಂತ್ತಾಗಿದೆ. ಈ ಪಂದ್ಯದಲ್ಲಿ ಆತಿಥೇಯರು ಗೆದ್ದರೆ ಸರಣಿಯಲ್ಲಿ ಜೀವಂತವಾಗಿರಲಿದ್ದರೆ, ಸೋತರೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಭಾರತ ಸರಣಿಯನ್ನು ಕೈವಶ ಮಾಡಿಕೊಳ್ಳಲಿದೆ. ಇನ್ನು ಎರಡನೇ ಏಕದಿನ ಪಂದ್ಯ ನಡೆಯುತ್ತಿರುವ ಮೈದಾನದಲ್ಲಿ ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡುವುದಾದರೆ..
ಈ ಮೈದಾನದಲ್ಲಿ ಭಾರತಕ್ಕೆ ಕಹಿ ಅನುಭವ
ಗ್ಕೆಬರ್ಹಾದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಇದುವರೆಗೆ 6 ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ ಟೀಂ ಇಂಡಿಯಾ ಕೇವಲ 1 ಪಂದ್ಯವನ್ನು ಗೆಲ್ಲಲು ಶಕ್ತವಾಗಿದ್ದು, 5 ರಲ್ಲಿ ಸೋಲನ್ನು ಎದುರಿಸಿದೆ. ಈ ಮೈದಾನದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 4 ಪಂದ್ಯಗಳಲ್ಲಿ ಸೋತಿದ್ದು, 1ರಲ್ಲಿ ಮಾತ್ರ ಗೆದ್ದಿದೆ. ಇದಲ್ಲದೇ ಇದೇ ಮೈದಾನದಲ್ಲಿ ಕೀನ್ಯಾ ವಿರುದ್ಧ ನಡೆದ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲನುಭವಿಸಿದೆ.
IND vs SA 2nd ODI: ಭಾರತ-ದ. ಆಫ್ರಿಕಾ ಎರಡನೇ ಏಕದಿನ ಪಂದ್ಯ ಯಾವಾಗ?, ಎಲ್ಲಿ?, ಎಷ್ಟು ಗಂಟೆಗೆ?
ಸೇಂಟ್ ಜಾರ್ಜ್ ಪಾರ್ಕ್ ಕ್ರೀಡಾಂಗಣದ ಇತಿಹಾಸ
ಸೇಂಟ್ ಜಾರ್ಜ್ ಪಾರ್ಕ್ ಸ್ಟೇಡಿಯಂನಲ್ಲಿ ಇದುವರೆಗೆ 42 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 20 ಪಂದ್ಯಗಳನ್ನು ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದೆ. ನಂತರ ಬ್ಯಾಟಿಂಗ್ ಮಾಡಿದ ತಂಡ 21 ಪಂದ್ಯಗಳನ್ನು ಗೆದ್ದಿದೆ. ಈ ಮೈದಾನದಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 233 ರನ್. ಅದೇ ಸಮಯದಲ್ಲಿ, ಇತ್ತೀಚೆಗೆ ಆಡಿದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಕೂಡ ಇದೇ ಮೈದಾನದಲ್ಲಿ ಪಂದ್ಯವನ್ನು ಆಡಿತ್ತು. ಈ ಪಂದ್ಯದಲ್ಲೂ ಭಾರತ ತಂಡ ಸೋಲನುಭವಿಸಿತ್ತು.
ಉಭಯ ತಂಡಗಳು
ಭಾರತ: ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಆಕಾಶ್ ದೀಪ್.
ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ನಾಂಡ್ರೆ ಬರ್ಗರ್, ಟೋನಿ ಡಿ ಜೊರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮಲ್ಡರ್ , ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವರ್ನಿ, ಲಿಜಾಡ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:17 pm, Mon, 18 December 23