IND Vs SA Playing XI: ಟಾಸ್ ಗೆದ್ದ ಆಫ್ರಿಕಾ.. ಸರಣಿ ಗೆಲ್ಲುವ ತವಕದಲ್ಲಿ ಭಾರತ; ಹೀಗಿವೆ ಉಭಯ ತಂಡಗಳು
IND Vs SA Playing XI: ಆಸ್ಟ್ರೇಲಿಯಾದಲ್ಲಿ ಇದೇ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಮುನ್ನ ಎರಡೂ ತಂಡಗಳಿಗೆ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಲು ಈ ಸರಣಿಯು ಕೊನೆಯ ಅವಕಾಶವಾಗಿದೆ.

ತಿರುವನಂತಪುರಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಚಕ ಗೆಲುವು ಸಾದಿಸಿದ್ದ ಟೀಂ ಇಂಡಿಯಾ (Team India) ಇದೀಗ 2ನೇ ಟಿ20 ಪಂದ್ಯವನ್ನು ಗೆದ್ದು ಸರಣಿ ತಮ್ಮದಾಗಿಸಿಕೊಳ್ಳಲು ಗುವಾಹಟಿ ತಲುಪಿದೆ. ಸರಣಿಯ ಎರಡನೇ ಟಿ20 ಪಂದ್ಯ ನಗರದ ಬರ್ಸಾಪರಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ನಾಯಕ ತೆಂಬಾ ಬವುಮಾ (Temba Bavuma) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದು 1-0 ಮುನ್ನಡೆ ಸಾಧಿಸಿರುವ ಭಾರತ ತಂಡ ಇಂದು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯ ಗೆಲ್ಲುವ ಮೂಲಕ ಹರಿಣಗಳ ವಿರುದ್ಧ ತವರಿನಲ್ಲಿ ಮೊದಲ ಟಿ20 ಸರಣಿಯನ್ನು ಗೆದ್ದ ಇತಿಹಾಸ ನಿರ್ಮಿಸುವ ತವಕದಲ್ಲಿದೆ.
ಆಸ್ಟ್ರೇಲಿಯಾದಲ್ಲಿ ಇದೇ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಮುನ್ನ ಎರಡೂ ತಂಡಗಳಿಗೆ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳಲು ಈ ಸರಣಿಯು ಕೊನೆಯ ಅವಕಾಶವಾಗಿದೆ. ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾದ ಬೌಲಿಂಗ್ ಮೇಲೆ ಕಣ್ಣು ನೆಟ್ಟಿದೆ. ತಿರುವನಂತಪುರಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ದೀಪಕ್ ಚಹಾರ್ ಕೇವಲ 15 ಎಸೆತಗಳಲ್ಲಿ ದಕ್ಷಿಣ ಆಫ್ರಿಕಾದ ಹಣೆಬರಹ ಬರೆದಿದ್ದರು. ಆ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಗೆದ್ದಿತ್ತು. ಟೀಂ ಇಂಡಿಯಾ ಮತ್ತೊಮ್ಮೆ ಅದೇ ಪ್ರದರ್ಶನವನ್ನು ಪುನರಾವರ್ತಿಸಲು ಸಾಧ್ಯವಾಗುತ್ತದೆಯೇ? ಎಂಬುದನ್ನು ನಾವು ಈಗ ಕಾದು ನೋಡಬೇಕಿದೆ.
ಉಭಯ ತಂಡಗಳು
ಟೀಂ ಇಂಡಿಯಾದ ಪ್ಲೇಯಿಂಗ್-11 ಹೀಗಿದೆ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ದೀಪಕ್ ಚಹಾರ್, ಹರ್ಷಲ್ ಪಟೇಲ್.
ದಕ್ಷಿಣ ಆಫ್ರಿಕಾ ತಂಡ
ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಿಲೆ ರುಸ್ಸೋ, ಡೇವಿಡ್ ಮಿಲ್ಲರ್, ಏಡನ್ ಮಾರ್ಕ್ರಾಮ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪೆರ್ನೆಲ್, ಕಗಿಸೊ ರಬಾಡ, ಎನ್ರಿಕ್ ನೋಕಿಯಾ, ಲುಂಗಿ ಎನ್‌ಗಿಡಿ, ಕೇಶವ್ ಮಹಾರಾಜ್
ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ
ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದುಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್
Published On - 6:50 pm, Sun, 2 October 22
