IND vs SA: ಕೊನೆಗೂ ಟಾಸ್ ಗೆದ್ದ ಸೂರ್ಯ; ಆಫ್ರಿಕಾ ತಂಡದಲ್ಲಿ 3 ಬದಲಾವಣೆ
India vs South Africa 2nd T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯ ಚಂಡೀಗಢದ ಹೊಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ಪುರುಷರ ಮೊದಲ ಅಂತರರಾಷ್ಟ್ರೀಯ ಪಂದ್ಯ. ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ನಾಯಕ ಸೂರ್ಯಕುಮಾರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ್ದು, ಇಬ್ಬನಿಯ ಪ್ರಭಾವದಿಂದಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಸುಲಭವಾಗಲಿದೆ. ಟೀಂ ಇಂಡಿಯಾ ತನ್ನ ಗೆಲುವಿನ ಸಂಯೋಜನೆಯನ್ನು ಬದಲಿಸಿಲ್ಲ.

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ನಡೆಯುತ್ತಿರುವ ಟಿ20 ಸರಣಿಯ ಎರಡನೇ ಪಂದ್ಯ ಇಂದು ಚಂಡೀಗಢದ ಹೊಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ಇದಾಗಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾದ ಮಹಿಳಾ ತಂಡಗಳ ನಡುವೆ ಈ ಮೈದಾನದಲ್ಲಿ ಇದುವರೆಗೆ ಕೇವಲ ಎರಡು ಅಂತರರಾಷ್ಟ್ರೀಯ ಪಂದ್ಯಗಳನ್ನು ಮಾತ್ರ ಆಡಲಾಗಿದೆ. ಹೀಗಾಗಿ ಈ ಮೈದಾನದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿಯೇ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು 101 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗ, ಟೀಂ ಇಂಡಿಯಾ ಮತ್ತೆ ಅದೇ ರೀತಿಯಲ್ಲಿ ದಕ್ಷಿಣ ಆಫ್ರಿಕಾದ ಮೇಲೆ ಪ್ರಾಬಲ್ಯ ಸಾಧಿಸುವ ಭರವಸೆಯಲ್ಲಿದೆ.
ಟಾಸ್ ಗೆದ್ದ ಟೀಂ ಇಂಡಿಯಾ
ಪುರುಷರ ತಂಡದ ಮೊಟ್ಟ ಮೊದಲ ಪಂದ್ಯಕ್ಕೆ ಆತಿಥ್ಯ ನೀಡುತ್ತಿರುವ ಚಂಡೀಗಢದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಪಿಚ್ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವ ಕಾರಣದಿಂದಾಗಿ ಬೌಲಿಂಗ್ ಮಾಡುತ್ತಿರುವುದಾಗಿ ಸೂರ್ಯ ಹೇಳಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಪ್ರಕಟವಾಗಿದ್ದು, ಟೀಂ ಇಂಡಿಯಾ ತನ್ನ ಗೆಲುವಿನ ಸಂಯೋಜನೆಯನ್ನು ಬದಲಿಸಲು ಹೋಗಿಲ್ಲ. ಅಂದರೆ ಮೊದಲ ಪಂದ್ಯದಲ್ಲಿ ಆಡಿದ್ದ ತಂಡವೇ ಇಂದು ಸಹ ಕಣಕ್ಕಿಳಿಯುತ್ತಿದೆ. ಇತ್ತ ದಕ್ಷಿಣ ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ.
🚨 Toss 🚨#TeamIndia have won the toss and elected to bowl first.
Updates ▶️ https://t.co/japA2CIofo#INDvSA | @IDFCFIRSTBank pic.twitter.com/8tJ7yPziRH
— BCCI (@BCCI) December 11, 2025
ಉಭಯ ತಂಡಗಳು
ಟೀಂ ಇಂಡಿಯಾ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಶಿವಂ ದುಬೆ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೀರಾ, ಜಾರ್ಜ್ ಲಿಂಡಾ, ಮಾರ್ಕೊ ಯಾನ್ಸನ್, ಲುಥೋ ಸಿಪಾಮ್ಲಾ, ಲುಂಗಿ ಎನ್‌ಗಿಡಿ ಮತ್ತು ಒಟ್ನೀಲ್ ಬಾರ್ಟ್‌ಮನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Thu, 11 December 25
