India vs South Africa: ಭಾರತ-ಸೌತ್ ಆಫ್ರಿಕಾ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
India vs South Africa 2nd T20: ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ.
India vs South Africa 2nd t20: ಭಾರತ – ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ಭಾನುವಾರ (ಅಕ್ಟೋಬರ್ 2) ಗೌಹಾಟಿಯಲ್ಲಿ ನಡೆಯಲಿದೆ. 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ 8 ವಿಕೆಟ್ಗಳಿಂದ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಈ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಹೀಗಾಗಿ ಈ ಪಂದ್ಯದಲ್ಲೂ ಅದೇ ಪ್ಲೇಯಿಂಗ್ ಇಲೆವೆನ್ ಅನ್ನು ಆಡಿಸಬಹುದು.
ಅದರಂತೆ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು 3ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದ್ರೆ, ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಆಡಲಿದ್ದಾರೆ. ಇನ್ನು ಫಿನಿಶರ್ ಪಾತ್ರ ದಿನೇಶ್ ಕಾರ್ತಿಕ್ಗೆ ಫಿಕ್ಸ್ ಎಂದೇ ಹೇಳಬಹುದು.
ಬೌಲರ್ಗಳ ವಿಭಾಗದಲ್ಲಿ ವೇಗಿಗಳಾಗಿ ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳಬಹುದು. ಹಾಗೆಯೇ ಸ್ಪಿನ್ ಆಲ್ರೌಂಡರ್ಗಳಾಗಿ ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.
- ರೋಹಿತ್ ಶರ್ಮಾ
- ಕೆಎಲ್ ರಾಹುಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ರಿಷಭ್ ಪಂತ್
- ದಿನೇಶ್ ಕಾರ್ತಿಕ್
- ಅಕ್ಷರ್ ಪಟೇಲ್
- ರವಿಚಂದ್ರನ್ ಅಶ್ವಿನ್
- ಅರ್ಷದೀಪ್ ಸಿಂಗ್
- ಹರ್ಷಲ್ ಪಟೇಲ್
- ದೀಪಕ್ ಚಹರ್
Published On - 3:55 pm, Sat, 1 October 22