AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Vs SA, 2nd T20I Live Streaming: ಭಾರತಕ್ಕೆ ಐತಿಹಾಸಿಕ ಸರಣಿ ಗೆಲ್ಲುವ ಅವಕಾಶ; ಪಂದ್ಯ ಆರಂಭ ಯಾವಾಗ?

IND Vs SA, 2nd T20I Live Streaming: ಎರಡನೇ ಟಿ20 ಪಂದ್ಯವನ್ನು ಗೆಲ್ಲುವುದರೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ಗೂ ಮೊದಲು ತನ್ನ ಕೊನೆಯ T20 ಸರಣಿಯನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸಲಿದೆ.

IND Vs SA, 2nd T20I Live Streaming: ಭಾರತಕ್ಕೆ ಐತಿಹಾಸಿಕ ಸರಣಿ ಗೆಲ್ಲುವ ಅವಕಾಶ; ಪಂದ್ಯ ಆರಂಭ ಯಾವಾಗ?
IND vs SA
TV9 Web
| Edited By: |

Updated on:Oct 01, 2022 | 2:36 PM

Share

3 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವು ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವೆ ಗುವಾಹಟಿಯಲ್ಲಿ ಭಾನುವಾರ ನಡೆಯಲಿದೆ. ಎರಡನೇ ಟಿ20 ಪಂದ್ಯವನ್ನು ಗೆಲ್ಲುವುದರೊಂದಿಗೆ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್‌ಗೂ (T20 World Cup) ಮೊದಲು ತನ್ನ ಕೊನೆಯ T20 ಸರಣಿಯನ್ನು ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸಲಿದೆ. ಈ ಸರಣಿಯಲ್ಲಿ ಭಾರತ ಈಗಾಗಲೇ 1-0 ಮುನ್ನಡೆ ಸಾಧಿಸಿದ್ದು, ತಿರುವನಂತಪುರಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ (KL Rahul and Suryakumar Yadav) ಅಜೇಯ ಅರ್ಧಶತಕ ಗಳಿಸಿದ್ದರೆ, ಬೌಲಿಂಗ್ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಅರ್ಷದೀಪ್ ಸಿಂಗ್, ದೀಪಕ್ ಚಹಾರ್ ಗೆಲುವಿನ ಹೀರೋಗಳಾಗಿದ್ದರು.

ಆದಾಗ್ಯೂ, ಎರಡನೇ T20 ಪಂದ್ಯಕ್ಕೂ ಮೊದಲು ಜಸ್ಪ್ರೀತ್ ಬುಮ್ರಾ ಟಿ20 ಸರಣಿಯಿಂದ ಹೊರಬಿದ್ದಿರುವುದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬೆನ್ನುಮೂಳೆಯ ಇಂಜುರಿಯಿಂದ ಬಳಲುತ್ತಿರುವ ಬುಮ್ರಾ ಮೊದಲ T20 ಪಂದ್ಯದಲ್ಲೂ ಕಣಕ್ಕಿಳಿದಿರಲಿಲ್ಲ. ಹಾಗಾಗಿ ಸರಣಿಯಿಂದ ಹೊರಬಿದ್ದಿರುವ ಬುಮ್ರಾ ಬದಲು ಮೊಹಮ್ಮದ್ ಸಿರಾಜ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದ್ದು, 2ನೇ ಪಂದ್ಯದಲ್ಲಿ ಅವರು ಆಡುತ್ತಾರೋ ಇಲ್ಲವೋ ಎಂಬುದು ಟಾಸ್ ವೇಳೆ ಗೊತ್ತಾಗಲಿದೆ.

ಸಿರಾಜ್​ಗೆ ಸುವರ್ಣಾವಕಾಶ

ಸುಮಾರು 7 ತಿಂಗಳ ನಂತರ ಮೊಹಮ್ಮದ್ ಸಿರಾಜ್ ಟಿ20 ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಉಳಿದಿರುವ ಇನ್ನೇರಡು ಪಂದ್ಯಗಳಲ್ಲಿ ಒಂದು ವೇಳೆ ಅವಕಾಶ ಸಿಕ್ಕಿ, ಸಿರಾಜ್ ಈ ಪಂದ್ಯಗಳಲ್ಲಿ ಮಿಂಚಿದರೆ ಅವರಿಗೆ ಆಸ್ಟ್ರೇಲಿಯಾಕ್ಕೆ ಹಾರುವ ಟಿಕೆಟ್ ಕೂಡ ಖಚಿತವಾಗಲಿದೆ. ಆದಾಗ್ಯೂ, ಬುಮ್ರಾ ವಿಶ್ವಕಪ್‌ನಿಂದ ಸಂಪೂರ್ಣವಾಗಿ ಹೊರಗುಳಿದರೆ ಮಾತ್ರ ಅವರು ರೇಸ್‌ಗೆ ಸೇರಲು ಸಾಧ್ಯವಾಗುತ್ತದೆ. ಬುಮ್ರಾ ವಿಶ್ವಕಪ್‌ನಿಂದ ಇನ್ನೂ ಹೊರಬಿದ್ದಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿನ್ನೆ ಹೇಳಿದ್ದರು. ಆದರೆ ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ಬುಮ್ರಾ ಟಿ20 ವಿಶ್ವಕಪ್ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಹೋಗುತ್ತಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಸಿರಾಜ್​ಗೆ ಇದು ಸುವರ್ಣಾವಕಾಶವೇ ಎಂದು ಹೇಳಬಹುದಾಗಿದೆ.

ಪಂದ್ಯದ ಬಗ್ಗೆ ಒಂದಿಷ್ಟು ಮಾಹಿತಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ಅಕ್ಟೋಬರ್ 2 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ20 ಪಂದ್ಯ ಯಾವಾಗ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ T20 ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

Published On - 2:36 pm, Sat, 1 October 22